ಇನ್ನು ಸರ್ಕಲ್‌ ಬದಲು “ಟ್ರಾಫಿಕ್‌ ಐಲ್ಯಾಂಡ್‌’ ನಿರ್ಮಾಣ


Team Udayavani, Sep 5, 2021, 3:20 AM IST

ಇನ್ನು ಸರ್ಕಲ್‌ ಬದಲು “ಟ್ರಾಫಿಕ್‌ ಐಲ್ಯಾಂಡ್‌’ ನಿರ್ಮಾಣ

ಮಹಾನಗರ: ಸ್ಮಾರ್ಟ್‌ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರದ ಸಂಚಾರ ವ್ಯವಸ್ಥೆ ಸುಧಾರಣೆಗೆ ಮುಂದಿನ ದಿನಗಳಲ್ಲಿ ನಗರ ದಲ್ಲಿರುವ ವೃತ್ತದ ಬದಲು ಟ್ರಾಫಿಕ್‌ ಐಲ್ಯಾಂಡ್‌ ನಿರ್ಮಾಣಕ್ಕೆ ಸ್ಮಾರ್ಟ್‌ಸಿಟಿ ಮತ್ತು ಸ್ಥಳೀಯಾಡಳಿತ ಮುಂದಾಗಿದೆ. ಇದೀಗ ಮೊದಲ ಹಂತದಲ್ಲಿ ನಗರದ ಎ.ಬಿ. ಶೆಟ್ಟಿ ವೃತ್ತಕ್ಕೆ ಹೊಸ ಸ್ವರೂಪ ಸಿಗಲಿದೆ.

ಈ ಭಾಗದಲ್ಲಿ ಏಕಪಥ ರಸ್ತೆಯ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಅದು ಸ್ಮಾರ್ಟ್‌ ರಸ್ತೆಯಾಗಿ ಪರಿವರ್ತನೆ ಯಾಗುತ್ತಿದೆ. ಈ ವೇಳೆ ಈಗಿದ್ದ ಟ್ರಾಫಿಕ್‌ ವ್ಯವಸ್ಥೆ ಬದಲಾವಣೆಯಾಗುವಾಗ ಎ.ಬಿ. ಶೆಟ್ಟಿ ವೃತ್ತಕ್ಕೆ ವೈಜ್ಞಾನಿಕ ಸ್ವರೂಪ ನೀಡಲು ನಿರ್ಧರಿಸಲಾಗಿದೆ. ಇದ ಕ್ಕಾಗಿ ಸದ್ಯ ಎ.ಬಿ. ಶೆಟ್ಟಿ ವೃತ್ತವನ್ನು ಕೆಡಹಲಾಗುತ್ತಿದೆ. ಈಗಾಗಲೇ ನೀಲ ನಕ್ಷೆ ತಯಾರು ಮಾಡಿದ್ದು, ಅದರಂತೆ ಎ.ಬಿ. ಶೆಟ್ಟಿ ವೃತ್ತದ ಬಳಿ ನಾಲ್ಕು ಟ್ರಾಫಿಕ್‌ ಐಲ್ಯಾಂಡ್‌ ನಿರ್ಮಾಣವಾಗಲಿದೆ. ಈಗಿದ್ದ ಎ.ಬಿ. ಶೆಟ್ಟಿ ಹೆಸರನ್ನೇ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಟ್ರಾಫಿಕ್‌ ಐಲ್ಯಾಂಡ್‌ ನಿರ್ಮಾಣದಿಂದಾಗಿ ಲೇನ್‌ಗಳಲ್ಲಿ ವಾಹನಗಳು ವ್ಯವಸ್ಥಿತವಾಗಿ ಸಂಚರಿಸಲು ಸಹಾಯ ವಾಗುತ್ತದೆ. ಇದಕ್ಕೆ ವೃತ್ತದಷ್ಟು ಸ್ಥಳಾ ವಕಾಶ ಇರದ ಕಾರಣ ಸರಾಗವಾಗಿ ವಾಹನಗಳು ತಿರುವು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ನಗರಕ್ಕೆ ಹೊಸ ಸ್ವರೂಪದ ಟ್ರಾಫಿಕ್‌ ಐಲ್ಯಾಂಡ್‌ನ‌ಲ್ಲಿ ಹಚ್ಚ ಹಸುರು ಕಂಗೊಳಿಸುವಂತೆ ಲಾನ್‌, ಬೀದಿ ದೀಪ ಸಹಿತ ಸ್ಮಾರ್ಟ್‌ಪೋಲ್‌ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತದೆ.

ಏಕಮುಖ ಸಂಚಾರ; ಐದು ಲೇನ್‌ ರಸ್ತೆ:

ಕ್ಲಾಕ್‌ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತ-ಹ್ಯಾಮಿಲ್ಟನ್‌ ವೃತ್ತ-ರಾವ್‌ ಆ್ಯಂಡ್‌ ರಾವ್‌ ವೃತ್ತದಿಂದ ಮತ್ತೆ ಕ್ಲಾಕ್‌ ಟವರ್‌ವರೆಗೆ ಏಕಮುಖ ಸಂಚಾರ ವ್ಯವಸ್ಥೆ (ಲೂಪ್‌ ರಸ್ತೆ) ಮಾಡಲಾಗಿದ್ದು, ಈ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಐದು ಲೇನ್‌ ನಿರ್ಮಾಣವಾಗಲಿವೆ. ಇದರಲ್ಲಿ ಬಸ್‌ಗಳು ಸಂಚರಿಸಲೆಂದು ಪ್ರತ್ಯೇಕ ಲೇನ್‌ ನಿರ್ಮಾಣ ಮಾಡಲಾಗುತ್ತಿದೆ. ಇನ್ನು, ಈ ಭಾಗದಲ್ಲಿ ಸುಗಮ ವಾಹನ ಸಂಚಾರಕ್ಕೆಂದು ಮೂರು ಲೇನ್‌ಗಳು ನಿರ್ಮಾಣವಾಗಲಿದೆ. ಈ ರಸ್ತೆಯಲ್ಲಿ ಮುಖ್ಯವಾಗಿ ನೆಹರೂ ಮೈದಾನ, ಸರ್ವಿಸ್‌, ಸಿಟಿ ಬಸ್‌ ನಿಲ್ದಾಣ, ಪಾರ್ಕ್‌ ಗಳು ಸಹಿತ ಕೆಲವೊಂದು ಸರಕಾರಿ ಕಚೇರಿಗಳಿವೆ. ಹೀಗಿದ್ದಾಗ ಪಾರ್ಕಿಂಗ್‌ ವ್ಯವಸ್ಥೆಗೆಂದು ಪ್ರತ್ಯೇಕ ಲೇನ್‌ ವ್ಯವಸ್ಥೆ ಮಾಡಲಾಗುತ್ತದೆ. ರಸ್ತೆಯುದ್ದಕ್ಕೂ ಮಾದರಿ ಫುಟ್‌ಪಾತ್‌ ನಿರ್ಮಾಣ ಮಾಡಲಿದ್ದು, ಫುಟ್‌ಪಾತ್‌ನಲ್ಲಿ ಲಾನ್‌ ಮಾದರಿಯ ಹಸುರು ಹುಲ್ಲು ಬೆಳೆಸಲು ನಿರ್ಧರಿಸಲಾಗಿದೆ. ರಸ್ತೆ, ಫುಟ್‌ಪಾತ್‌ನಲ್ಲಿ ಪಾದಚಾರಿಗಳಿಗೆ ಅನುಕೂಲವಾಗುವಂತೆ ವಿದ್ಯುತ್‌ ಕಂಬ ಅಳವಡಿಸಲಾಗುತ್ತಿದೆ.

ನಗರದ ಕ್ಲಾಕ್‌ ಟವರ್‌ ಬಳಿಯಿಂದ ವೃತ್ತಾಕಾರದಲ್ಲಿ ಮತ್ತೆ ಕ್ಲಾಕ್‌ಟವರ್‌ ರಸ್ತೆಯವರೆಗೆ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಈ ರಸ್ತೆಯನ್ನು ಮಾದರಿ ರಸ್ತೆಯನ್ನಾಗಿ ಪರಿವರ್ತನೆ ಮಾಡಲಾ ಗುತ್ತದೆ. ಇದಕ್ಕೆಂದು ಪ್ರತ್ಯೇಕ ಐದು ಲೇನ್‌ ನಿರ್ಮಾಣ ಮಾಡಲಾಗುತ್ತದೆ. ಎ.ಬಿ. ಶೆಟ್ಟಿ ವೃತ್ತವನ್ನು ಕೆಡಹಿ ಅಲ್ಲಿ ಕೂಡ ಟ್ರಾಫಿಕ್‌ ಐಲ್ಯಾಂಡ್‌ ನಿರ್ಮಾಣ ಮಾಡುತ್ತೇವೆ. ಎ.ಬಿ. ಶೆಟ್ಟಿ ಹೆಸರನ್ನು ಅದಕ್ಕೆ ಇಡುತ್ತೇವೆ. ಅರುಣ್‌ಪ್ರಭಾ ಕೆ.ಎಸ್‌., ಸ್ಮಾರ್ಟ್‌ಸಿಟಿ ಜನರಲ್‌ ಮ್ಯಾನೇಜರ್‌

 

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.