ಮಠತ್ತಾರಿಗೆ ನೀರು ಕೊಟ್ಟ ಕಿಂಡಿ ಅಣೆಕಟ್ಟು 

Team Udayavani, Jan 10, 2018, 2:24 PM IST

10–Jan-15.jpg

ಕಾಣಿಯೂರು: ಹೊಳೆ – ನದಿಗಳಲ್ಲಿ ಹರಿಯುವ ನೀರಿಗೆ ಅಡ್ಡಲಾಗಿ ಒಡ್ಡುಗಳನ್ನು ಕಟ್ಟಿ, ಅದಕ್ಕೆ ಫೈಬರ್‌ ಅಥವಾ ಮರದ ಹಲಗೆಗಳನ್ನು ಅಳವಡಿಸಿ, ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ತಪ್ಪಿಸುವ ಪ್ರಯತ್ನ ಈಗ ಎಲ್ಲೆಡೆ ನಡೆಯುತ್ತಿದೆ. ಕಾಣಿಯೂರು ಮಠದ ಸಮೀಪವಿರುವ ಮಠತ್ತಾರು ಎಂಬಲ್ಲಿ ನಾಲ್ಕು ವರ್ಷಗಳ ಹಿಂದಿನಿಂದಲೇ ಇಂಥ ಪ್ರಯೋಗ ಯಶಸ್ವಿಯಾಗಿದೆ.

ಮಳೆ ಪ್ರಮಾಣ ಕಡಿಮೆಯಾಗಿ, ಅಂತರ್ಜಲವೂ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿ
ಕಾಡುತ್ತಿದೆ. ಕೃಷಿಗೆ, ನಿತ್ಯ ಬಳಕೆಗೆ ಬೇಕಾದ ಜೀವಜಲಕ್ಕಾಗಿ ಪರದಾಟ ತಪ್ಪಿಸಲು ಸರಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮೂಲಕ ಕೊಳವೆ ಬಾವಿಗಳಿಗೆ ನೀರಿಂಗಿಸುವಿಕೆ, ಇಂಗು ಗುಂಡಿಗಳ ನಿರ್ಮಾಣ, ಕಿಂಡಿ ಅಣೆಕಟ್ಟು, ಡ್ಯಾಮ್‌ಗಳ ನಿರ್ಮಾಣ ಮಾಡುತ್ತಿದೆ.

50-60 ಮನೆಗಳಿಗೆ ನೀರು
ಶ್ರೀ ಕಾಣಿಯೂರು ಮಠ ಸಮೀಪವಿರುವ ಮಠತ್ತಾರು ಎಂಬಲ್ಲಿ ಹರಿಯುವ ಹೊಳೆಗೆ ನಾಲ್ಕು ವರ್ಷಗಳ ಹಿಂದೆಯೇ ದೊಡ್ಡ ಗಾತ್ರದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. 

ಸುಳ್ಯ ಶಾಸಕ ಎಸ್‌. ಅಂಗಾರ ಅವರು ಸಣ್ಣ ನೀರಾವರಿ ಇಲಾಖೆಯಿಂದ 50 ಲಕ್ಷ ರೂ. ಅನುದಾನ ಒದಗಿಸಿ, ಈ
ಭಾಗದ ಸುಮಾರು 50-60 ಮನೆಗಳ ಕೃಷಿ ಚಟುವಟಿಕೆಗೆ ಹಾಗೂ ಮನೆ ಬಳಕೆಗೆ ನೀರು ಲಭ್ಯವಾಗುವಂತೆ ಮಾಡಲಾಗಿದೆ. ಇದರೊಂದಿಗೆ ಪರೋಕ್ಷವಾಗಿ ಇಲ್ಲಿನ ಒಂದೆರಡು ಕಿ.ಮೀ. ವ್ಯಾಪ್ತಿಯ ಕೆರೆ, ಬಾವಿ, ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಠತ್ತಾರು, ಗುಂಡಿಗದ್ದೆ, ಮುಗರಂಜ, ಅನಿಲ, ಕಟ್ಟತ್ತಾರು, ಬಂಡಾಜೆ, ಕಲ್ಪಡ, ಪೆರ್ಲೋಡಿ ಭಾಗದಲ್ಲಿ ಅಂತರ್ಜಲ ಗಣನೀಯವಾಗಿ ಹೆಚ್ಚಳವಾಗಿರುವುದು ಕಂಡುಬರುತ್ತಿದೆ .

ಸ್ಥಳೀಯರಿಂದಲೇ ನಿರ್ವಹಣೆ 
ಪ್ರತಿ ವರ್ಷ ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಲ್ಲಿ ಡ್ಯಾಮ್‌ಗೆ ಫೈಬರ್‌ ಹಲಗೆಗಳನ್ನು ಅಳವಡಿಸಲಾಗುತ್ತಿದ್ದು, ಮಳೆಗಾಲ ಆರಂಭವಾದೊಡನೆ ಹಲಗೆ ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಗುತ್ತದೆ. ಸ್ಥಳೀಯರೇ
ಸೇರಿ ಹಲಗೆ ತೆಗೆಯುವ ಹಾಗೂ ಜೋಡಿಸುವ ಕೆಲಸ ಮಾಡುತ್ತಾರೆ. ಈ ಕಿಂಡಿ ಅಣೆಕಟ್ಟಿನಿಂದ 1 ಕಿ.ಮೀ. ದೂರದ ಬೈಲಡ್ಯೆ ಎಂಬಲ್ಲಿ ಇದೇ ರೀತಿಯ ಮತ್ತೂಂದು ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದ್ದು, ಎರಡೂ ಡ್ಯಾಮ್‌ ಗಳು ಭರ್ತಿಯಾಗಿ, ಹೆಚ್ಚುವರಿ ನೀರು ಹರಿದು ಹೋಗುತ್ತಿದೆ. ಹೊಳೆಗೆ ಈ ರೀತಿಯ ಕಿಂಡಿ ಅಣೆಕಟ್ಟನ್ನು ಅಲ್ಲಲ್ಲಿ ನಿರ್ಮಾಣ ಮಾಡಿದರೆ ನೀರಿನ ಸಮಸ್ಯೆ ಬಹುತೇಕ ಪರಿಹಾರವಾಗಿ, ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ.

ರೈತರಿಗೆ ಅನುಕೂಲ 
ಮಠತ್ತಾರು ಕಿಂಡಿ ಅಣೆಕಟ್ಟಿನಿಂದಾಗಿ ಕಾಣಿಯೂರು ಆಸುಪಾಸಿನ ಪ್ರದೇಶಗಳಲ್ಲಿ ಅಂತರ್ಜಲ ಹೆಚ್ಚಳವಾಗಿದೆ. ಈ ಡ್ಯಾಮ್‌ನ ಕೆಳಗೆ ಕಾಣಿಯೂರು ಗ್ರಾಮದ ಪೆರ್ಲೋಡಿ ಎಂಬಲ್ಲಿ ಮತ್ತೂಂದು ಡ್ಯಾಮ್‌ನ ಆವಶ್ಯಕತೆ ಇದೆ. ಈ ಹೊಳೆಗೆ ಇನ್ನೂ ಅಲ್ಲಲ್ಲಿ ಡ್ಯಾಮ್‌ ಕಟ್ಟಿದರೆ ರೈತರಿಗೆ ಇನ್ನಷ್ಟು ಅನುಕೂಲವಾಗುತ್ತದೆ. ಈ ಬಗ್ಗೆ ಶಾಸಕ ಎಸ್‌. ಅಂಗಾರ ಅವರಿಗೆ ಮನವಿ ಸಲ್ಲಿಸಲು ಇಲ್ಲಿನ ನಾಗರಿಕರು ನಿರ್ಧರಿಸಿದ್ದಾರೆ.
ಸುರೇಶ್‌ ಓಡಬಾಯಿ,
  ಕಾಣಿಯೂರು ಗ್ರಾ.ಪಂ. ಸದಸ್ಯರು

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.