ಲೋಹಿತ್‌ನಗರ ಹಿತರಕ್ಷಣಾ ವೇದಿಕೆಯಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
Team Udayavani, May 10, 2018, 11:05 AM IST
ದೇರೆಬೈಲ್ : ಇಲ್ಲಿನ ಲೋಹಿತ್‌ನಗರ ಹಿತ ರಕ್ಷಣಾ ವೇದಿಕೆಯು ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟು ಮೇ 12ರಂದು ನಡೆಯುವ ವಿಧಾನ ಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ತೀರ್ಮಾನಿಸಿದೆ.
ಶುದ್ಧ ಕುಡಿಯುಲವ ನೀರು ಒದಗಿಸಬೇಕು, ಉತ್ತಮ ಕಾಂಕ್ರೀಟ್ ರಸ್ತೆ ಮತ್ತು ಕಾಂಕ್ರೀಟ್ ಚರಂಡಿ ನಿರ್ಮಾಣ ಮಾಡಬೇಕು, ಮಾಲಿನ್ಯರಹಿತ ವಾತಾವರಣದಲ್ಲಿ ಬದುಕಲು ಅವಕಾಶ ಮಾಡಿಕೊಡಬೇಕು ಎನ್ನುವುದು ವೇದಿಕೆಯ ಪ್ರಮುಖ ಬೇಡಿಕೆಗಳಾಗಿವೆ ಎಂದು ಅಧ್ಯಕ್ಷ ಯು.ಬಿ. ವಿಜಯ ಕುಮಾರ್ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಲೋಹಿತ್ ನಗರದಲ್ಲಿ ಸುಮಾರು 85 ಮನೆಗಳಿದ್ದು, 300ಕ್ಕೂ ಅಧಿಕ ಮತದಾರರಿದ್ದಾರೆ. ಈ ಪ್ರದೇಶದಲ್ಲಿ ನಳ್ಳಿ ನೀರಿನ ಸಂಪರ್ಕ ಇಲ್ಲ; ನಿವಾಸಿಗಳಿಗೆ ಕೊಳವೆ ಬಾವಿಯ ನೀರನು ಪೂರೈಕೆ ಮಾಡಲಾಗುತ್ತಿದೆ. ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜಿಗೆ ವ್ಯವಸ್ಥೆ ಮಾಡುವಂತೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಇದುವರೆಗೆ ಸಂಬಂಧಪಟ್ಟವರು ಯಾವುದೇ ಕ್ರಮ ಜರಗಿಸಿಲ್ಲ . ಚುನಾವಣೆಯ ಸಮಯದಲ್ಲಿ ಮನೆ ಮನೆಗೆ ಭೇಟಿ ನೀಡುವ ರಾಜಕಾರಣಿಗಳು ಚುನಾವಣೆ ಮುಗಿದ ಬಳಿಕ ಮುಂದಿನ ಚುನಾವಣೆ ತನಕ ಕಾಣ ಸಿಗುವುದಿಲ್ಲ. ಹಾಗಾಗಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.