ಹಿಂದೂ ಮುಖಂಡರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ
Team Udayavani, Jul 15, 2017, 8:13 AM IST
ಮಂಗಳೂರು: ಹಿಂದೂ ಮುಖಂಡರ ಮೇಲೆ ಹಾಕಿರುವ ಕೇಸ್‌ಗಳನ್ನು ಪೊಲೀಸರು ವಾಪಸ್ ಪಡೆಯಬೇಕು. ರಾತೋರಾತ್ರಿ ಕಾರ್ಯಕರ್ತರ ಮನೆಗೆ ದಾಳಿ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ. ಮುಂದಾಗುವ ಅನಾಹುತಗಳಿಗೆ ರಾಜ್ಯ ಸರಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗ ದಳ ತಿಳಿಸಿವೆ.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ವಿಹಿಂಪ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್, ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆ ಮೇಲೆ ಮಧ್ಯರಾತ್ರಿ ದಾಳಿ ನಡೆಯುತ್ತಿದೆ. ಅಲ್ಲದೇ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಿ ಬಂಧಿಸುವ ಪ್ರಯತ್ನಗಳೂ ನಡೆಯುತ್ತಿವೆ. ಹಿಂದೂಗಳ ಮೇಲೆ ಪದೇ ಪದೇ ಈ ರೀತಿಯ ದೌರ್ಜನ್ಯ ನಡೆಯುತ್ತಿದ್ದರೆ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾದೀತು ಎಂದರು.
ಸೇನೆಯ ಸುಪರ್ದಿಗೆ ನೀಡಿ
ಅಮರನಾಥ ಯಾತ್ರಿಕರ ಮೇಲೆ ಉಗ್ರರ ದಾಳಿ ಖಂಡನೀಯ. ಅಮರನಾಥ ಯಾತ್ರೆ ನಿರ್ವಹಣೆ ಯನ್ನು ಸೇನೆಯ ಸುಪರ್ದಿಗೆ ಒಪ್ಪಿಸಬೇಕು. ಉಗ್ರರನ್ನು ಹಾಗೂ ಅವರನ್ನು ಸಮರ್ಥಿಸುವವರನ್ನು ನಿರ್ನಾಮಗೊಳಿಸಬೇಕು ಎಂದರು.
ವಿಹಿಂಪ ಜಿಲ್ಲಾ ಕಾರ್ಯದರ್ಶಿ ಗೋಪಾಲ್, ಭುಜಂಗ ಕುಲಾಲ್, ಶಿವಾನಂದ ಮೆಂಡನ್, ನಾಗೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.