ಅಪರಾಧ ಕೃತ್ಯ ಭೇದಿಸಿದ ಪೊಲೀಸ್‌ ತಂಡಗಳಿಗೆ ಡಿಜಿಪಿ ಶ್ಲಾಘನೆ

Team Udayavani, Jul 16, 2017, 3:45 AM IST

1507mlr28.gif

ಪಾಂಡೇಶ್ವರ:  ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಒಂದು ತಿಂಗಳ ಅವಧಿಯಲ್ಲಿ  ನಡೆದ ವಿವಿಧ ಅಪರಾಧ ಪ್ರಕರಣಗಳನ್ನು ಬೇಧಿಸಿದ ಸಿಸಿಬಿ ತಂಡ, ಬಜಪೆ, ಉರ್ವ, ಕದ್ರಿ ಪೊಲೀಸ್‌ ಠಾಣೆಗಳ ತಂಡಗಳನ್ನು  ರಾಜ್ಯ ಪೊಲೀಸ್‌ ಮಹಾನಿರ್ದೇಶಕ ರೂಪ್‌ ಕುಮಾರ್‌ ದತ್ತ ಅವರು ಶ್ಲಾಘಿಸಿದ್ದು, ಶನಿವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಿ ಗೌರವಿಸಿದರು.

ಜೂ.11ರಂದು ಉಳ್ಳಾಲದಲ್ಲಿ ಆಸ್ಟೀನ್‌ ಮೇಲಿನ ಹಲ್ಲೆ ಪ್ರಕರಣವನ್ನು ಬೇಧಿಸಿ 4 ಮಂದಿಯ ಬಂಧನ, ಜೂ.7ರಂದು ಅಡ್ಯಾರ್‌ಪದವಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ 3ಮಂದಿಯ ಬಂಧನ, ಜೂ.23ರಂದು ಕೋಟೆಕಾರ್‌ ಸಹಕಾರಿ ಬ್ಯಾಂಕ್‌ ದರೋಡೆ ವಿಫಲ ಯತ್ನ ಪ್ರಕರಣದಲ್ಲಿ  ಇಬ್ಬರ ಬಂಧನ, ನಗರದ ಲಾಡ್ಜ್ನಲ್ಲಿ 10 ಕೆ.ಜಿ.ಗಾಂಜಾ ವಶಪಡಿಸಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ ಸಿಸಿಬಿ ಎಸಿಪಿ ವೆಲೆಂಟೈನ್‌ ಡಿ’ಸೋಜಾ, ಸಿಸಿಬಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುನಿಲ್‌ ನಾಯಕ್‌, ಎಸ್‌ಐ ಶ್ಯಾಮ್‌ ಸುಂದರ್‌ ಅವರನ್ನು ಅಭಿನಂದಿಸಿ ಪ್ರಶಂಸಾ ಪತ್ರ ಹಾಗೂ 50,000 ರೂ. ನಗದು ಪುರಸ್ಕಾರ ನೀಡಿದರು. ಸಿಸಿಬಿ ತಂಡದಲ್ಲಿ ರಾಜೇಂದ್ರ, ದಾಮೋದರ್‌, ಚಂದ್ರಶೇಖರ್‌, ಶೀನಪ್ಪ, ರಾಮಣ್ಣ, ಆಶಿತ್‌, ರಿಜಿ, ಸುಧೀರ್‌, ಸುನೀಲ್‌, ಇಕ್ಬಾಲ್‌, ಚಂದ್ರಹಾಸ್‌, ಚಂದ್ರ, ಸುಬ್ರಹ್ಮಣ್ಯ, ಮಣಿ, ಹರೀಶ್‌, ಶಶಿಧರ್‌ ಶೆಟ್ಟಿ, ಜಬ್ಟಾರ್‌, ಗಣೇಶ್‌, ಸುಬ್ರಹ್ಮಣ್ಯ, ಯೋಗೀಶ್‌ ಅವರಿದ್ದರು. 

ಬಜಪೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಟಿ.ಡಿ. ನಾಗರಾಜ್‌ ನೇತೃತ್ವದ ತಂಡಕ್ಕೆ ಕೋಮು ಸಂಘರ್ಷ ವಿಚಾರದ ಪ್ರಕರಣ ಸತ್ಯಾಸತ್ಯತೆ ಹೊರಗೆಡಹುವಲ್ಲಿ ಶ್ರಮಿಸಿದ್ದಕ್ಕಾಗಿ 5,000 ರೂ.ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಿದರು. 
ಕಾನೂನು ಸುವ್ಯವಸ್ಥೆಗೆ ಶ್ಲಾಘನೆ: ಅಶ್ರಫ್‌ ಶವಯಾತ್ರೆ ಸಂದರ್ಭ ಪಡೀಲ್‌-ಕಣ್ಣೂರು ಬಳಿ ಪರಿಸ್ಥಿತಿಯನ್ನು ನಿಯಂ ತ್ರಣಕ್ಕೆ ತಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿದ ಉರ್ವ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ರವೀಶ್‌ ನಾಯ್ಕ, ಕದ್ರಿ ಇನ್‌ಸ್ಪೆಕ್ಟರ್‌ ಮಾರುತಿ ನಾಯಕ್‌, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯವರ ಗನ್‌ಮ್ಯಾನ್‌ ವೀಕ್ಷಿತ್‌, ವಾಹನ ಚಾಲಕ ಜಾಫರ್‌ ಸಾದಿಕ್‌, ಮಾರುತಿ ನಾಯ್ಕ ವಾಹನ ಚಾಲಕ ಅಜಿತ್‌ ಅವರನ್ನು ಅಭಿನಂದಿಸಿದರು. ಮಂಗಳೂರು ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌, ಡಿಸಿಪಿಗಳಾದ ಕೆ. ಎಂ. ಶಾಂತರಾಜು ಮತ್ತು ಹನುಮಂತರಾಯ  ಮುಂತಾ ದವರು ಉಪಸ್ಥಿತರಿದ್ದರು.

ಡಿಜಿಪಿ ನಿರ್ಗಮನ: ಡಿಜಿಪಿ ರೂಪ್‌ ಕುಮಾರ್‌ ದತ್ತ ಅವರು ಮೂರು ದಿನಗಳ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕಾರ್ಯಕ್ರಮ ಮುಗಿಸಿ ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿಗೆ ನಿರ್ಗಮಿಸಿದರು.  ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದ  ಅವರು ಅಂದು ಉಳ್ಳಾಲಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಬೆಳಗ್ಗೆ ಬಂಟ್ವಾಳ, ವಿಟ್ಲ ಸಂದರ್ಶಿಸಿ ಪರಿಸ್ಥಿತಿಯನ್ನು ಖುದ್ದು  ಪರಿಶೀಲಿಸಿದ್ದರು. ಶನಿವಾರ ಮಧ್ಯಾಹ್ನ ತನಕ ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ವಿವಿಧ ಪೊಲೀಸ್‌ ಅಧಿಕಾರಿಗಳ ಜತೆ ಚರ್ಚಿಸಿದರು ಹಾಗೂ ಬಳಿಕ ಕಳೆದ ಒಂದು ತಿಂಗಳ ಅವಧಿಯಲ್ಲಿ  ಅಪರಾಧ ಪ್ರಕರಣಗಳನ್ನು ಬೇಧಿಸಿದ ಪೊಲೀಸರನ್ನು ಅಭಿನಂದಿಸಿದರು. 

ಟಾಪ್ ನ್ಯೂಸ್

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.