ಮೊದಲ ಬಹುಗ್ರಾಮ ಯೋಜನೆಗೆ ಇಂದು ಚಾಲನೆ
Team Udayavani, Apr 18, 2017, 1:07 PM IST
ಬಜಪೆ: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಬಜಪೆ ಸಮೀಪದ ಮಳವೂರಿನಲ್ಲಿ ಮಂಗಳವಾರ ಚಾಲನೆ ದೊರೆಯಲಿದ್ದು, ಆ ಮೂಲಕ ಸುತ್ತಲಿನ ಸುಮಾರು 14 ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆಯಾಗಲಿದೆ.
ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದಡಿ ಒಟ್ಟು 45 ಕೋ. ರೂ. ವೆಚ್ಚದಲ್ಲಿ ಈ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಅನುಷ್ಠಾನಗೊಳ್ಳುತ್ತಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು ಏಳು ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಮಂಜೂರಾತಿ ದೊರೆತಿದೆ. ಈ ಪೈಕಿ ಮೊತ್ತಮೊದಲ ಮಳವೂರು ಯೋಜನೆ ಇದೀಗ ಉದ್ಘಾಟನೆಗೊಳ್ಳುತ್ತಿದೆ. ಬಾಕಿ ಉಳಿದಂತೆ ಕಿನ್ನಿಗೋಳಿಯಲ್ಲಿಯೂ ಬಹುಧಿಗ್ರಾಮ ಯೋಜನೆ ಕಾಮಗಾರಿ ಪ್ರಗತಿಧಿಯಲ್ಲಿದ್ದು ಮುಂದಿನ ವರ್ಷ ಉದ್ಘಾಧಿಟನೆಗೊಳ್ಳುವ ಸಾಧ್ಯತೆಯಿದೆ. ಬಂಟ್ವಾಳ ತಾಲೂಕಿನಲ್ಲಿ 5 ಯೋಜನೆಗಳನ್ನು ಕೈಗೆತ್ತಿಕೊಳ್ಳಧಿಲಾಗಿದ್ದು, ಸಂಗಬೆಟ್ಟು ಮತ್ತು ಕರೋಪಾಡಿ ಯೋಜನೆ ಕಾಮಗಾರಿ ಈಗಾಗಲೇ ಮುಕ್ತಾಯಗೊಂಡಿದೆ. ಪ್ರಾಯೋಧಿಗಿಕವಾಗಿ ನೀರು ಸರಬರಾಜು ಮಾಡಲಾಗುತ್ತಿದೆ.
14 ಗ್ರಾಮಕ್ಕೆ ಶಾಶ್ವತ ನೀರು
ಬಹುಗ್ರಾಮ ಯೋಜನೆಯಡಿ ಬಜಪೆ ಸುತ್ತಮುತ್ತಲಿನ ಸುಮಾರು 56,000 ಮಂದಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ. ಬಜಪೆ, ಮಳವೂರು, ಕೆಂಜಾರು, ಮೂಡುಧಿಶೆಡ್ಡೆ, ಪಡುಶೆಡ್ಡೆ, ಜೋಕಟ್ಟೆ, ಬಡಗ ಎಕ್ಕಾರು, ತೆಂಕ ಎಕ್ಕಾರು, ಪೆರ್ಮುದೆ, ಕುತ್ತೆತ್ತೂರು, ಬಾಳ, ಕಳವಾರು, ಸೂರಿಂಜೆ ಹಾಗೂ ದೇಲಂತಬೆಟ್ಟು ಈ ಯೋಜನೆಯ ಫಲಾನುಭವಿ ಗ್ರಾಮಧಿಗಳು ಎಂದು ದ.ಕ. ಜಿ.ಪಂ. ಸಹಾಯಕ ಎಂಜಿನಿಯರ್ ಪ್ರಭಾಕರ್ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಬಹುಗ್ರಾಮ ಯೋಜನೆ ಜಾರಿಗೆ ತರಲಾಗಿದೆ. ಆಯಾ ಗ್ರಾಮ ಪಂಚಾಯತ್‌ಗಳಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ಈ ಯೋಜನೆ ಅನುಷ್ಠಾನದ ಹೊಣೆ ಹೊತ್ತುಕೊಂಡಿದೆ. ಅದರಂತೆ, ರಾಜೀವ್ ಗಾಂಧಿ ಕುಡಿಯುವ ನೀರು ಪೂರೈಕೆ ಯೋಜನೆ ಹೆಸರಿನಲ್ಲಿ 2003-04ರಲ್ಲಿ ಮಳವೂರಿನ ಯೋಜನೆಗೆ ಮಂಜೂರಾತಿ ನೀಡಲಾಗಿತ್ತು. ಆಗ ಅಂದಿನ ಸುರತ್ಕಲ್ ಶಾಸಕ ವಿಜಯ ಕುಮಾರ್ ಶೆಟ್ಟಿ ಈ ಯೋಜನೆ ಪ್ರಾರಂಭಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿದ್ದರು. ಆದರೆ, ಸೂಕ್ತ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಯೋಜನೆ ಕಾಮಗಾರಿ ಪ್ರಾರಂಭಗೊಂಡಿರಲಿಲ್ಲ. ಬಳಿಕ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಅವರ ಪ್ರಯತ್ನದಿಂದ ಅನುದಾನ ಬಿಡುಗಡೆಯಾಗಿದ್ದು, 2011ರಿಂದ ಈ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭಿಸಲಾಗಿತ್ತು.
ಉದ್ಘಾಟನೆಗೆ ಹಲವು ಗಣ್ಯರು
ಜಿಲ್ಲೆಯ ಪ್ರತಿಷ್ಠಿತ ಈ ಕುಡಿಯುವ ನೀರು ಯೋಜನೆಗೆ ಗ್ರಾಮೀಣಾಭಿಧಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅವರಿಂದ ಚಾಲನೆ ನೀಡಲು ಉದ್ದೇಶಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಉದ್ಘಾಟನ ಸಮಾರಂಭಕ್ಕೆ ಆಗಮಿಸುತ್ತಿಲ್ಲ. ಉಳಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಸಚಿವ ಯು.ಟಿ. ಖಾದರ್, ಶಾಸಕ ಕೆ. ಅಭಯಚಂದ್ರ ಜೈನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲು, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಶಾಸಕ ಬಿ.ಎ. ಮೊದಿನ್ ಬಾವಾ, ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಐವನ್ ಡಿ’ಸೋಜಾ, ವಿಪಕ್ಷದ ಮುಖ್ಯ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್, ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ ಚಂದ್ರ ಶೆಟ್ಟಿ, ಮಾಜಿ ಶಾಸಕ ಕೆ. ವಿಜಯ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಭಾಗವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.