“ಬಡವರಿಗೆ ಉಚಿತ ಅಕ್ಕಿ ವಿತರಿಸಿದ ಪ್ರಥಮ ರಾಜ್ಯ ಕರ್ನಾಟಕ’
Team Udayavani, Apr 1, 2017, 11:50 AM IST
ಮಂಗಳೂರು: ಹಸಿವು ಮುಕ್ತ ಕರ್ನಾಟಕ ಎಂಬ ಘೋಷಣೆಯಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡ ಕುಟುಂಬಗಳಿಗೆ ಉಚಿತ ಅಕ್ಕಿ ವಿತರಿಸುತ್ತಿದ್ದಾರೆ. ಈ ಮೂಲಕ ಕರ್ನಾಟಕವು ದೇಶದಲ್ಲಿ ಉಚಿತ ಅಕ್ಕಿ ವಿತರಿಸಿದ ಪ್ರಥಮ ರಾಜ್ಯ ಎಂಬ ಖ್ಯಾತಿಗೆ ಪಾತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಅವರು ಶುಕ್ರವಾರ ನಗರದ ಜಿ.ಪಂ. ಸಭಾಂಗಣದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಅನ್ನಭಾಗ್ಯ ಯೋಜನೆಯಡಿ ಆದ್ಯತಾ ಕುಟುಂಬಗಳ ಪ್ರತಿ ಸದಸ್ಯರಿಗೆ 7 ಕೆ.ಜಿ. ಉಚಿತ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮಕ್ಕೆ ಅಕ್ಕಿ ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ವಿತರಿಸುತ್ತಿದ್ದ 5 ಕೆ.ಜಿ. ಅಕ್ಕಿಯನ್ನು ಜನರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ 7 ಕೆ.ಜಿ.ಗೆ ಏರಿಸಲಾಗಿದೆ. ಆದರೆ ಕೆಲವರು ಈ ಯೋಜನೆಯ ಮೂಲಕ ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದೀರಿ ಎಂದು ಟೀಕೆ ಮಾಡುತ್ತಿದ್ದಾರೆ.
ಅಂತಹ ಟೀಕೆಗಳಿಗೆ ಕಿವಿ ಕೊಡದೆ ದುರ್ಬಲ ವರ್ಗದವರನ್ನು ಹಂತಹಂತವಾಗಿ ಸಶಕ್ತರಾಗಿ ಮಾಡುವತ್ತ ರಾಜ್ಯ ಸರಕಾರ ಚಿಂತಿಸುತ್ತಿದೆ ಎಂದರು.
ಕಳಪೆ ಅಕ್ಕಿ ಸ್ವೀಕರಿಸದಿರಿ: ಆಹಾರ, ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಮಾತನಾಡಿ, ರಾಜ್ಯದ 4.20 ಕೋಟಿ ಜನರಿಗೆ ಉಚಿತ ಅಕ್ಕಿ ವಿತರಿಸುವುದಕ್ಕಾಗಿ ಸರಕಾರ ವಾರ್ಷಿಕವಾಗಿ 3 ಸಾವಿರ ಕೋ.ರೂ. ವ್ಯಯಿಸುತ್ತಿದೆ. ಸರಕಾರ ಇಷ್ಟು ಖರ್ಚು ಮಾಡಿ ನೀಡುವ ಯೋಜನೆಯನ್ನು ಜನರಿಗೆ ಸಮರ್ಪಕವಾಗಿ ಮುಟ್ಟಿಸುವ ಕಾರ್ಯವನ್ನು ಜನಪ್ರತಿನಿಧಿಗಳು ಮಾಡಬೇಕು. ಕಳಪೆ ಅಕ್ಕಿ ವಿತರಣೆಯಾಗುತ್ತಿದ್ದರೆ ಜನರು ಅದನ್ನು ಸ್ವೀಕರಿಸದೆ ಸಂಬಂಧ
ಪಟ್ಟವರಿಗೆ ದೂರು ನೀಡಬೇಕು ಎಂದರು.
ಶಾಸಕ ಜೆ.ಆರ್. ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್. ರವಿ ವೇದಿಕೆಯಲ್ಲಿದ್ದರು. ಆಹಾರ ಇಲಾಖೆಯ ಉಪನಿರ್ದೇಶಕ ಎ.ಟಿ. ಜಯಪ್ಪ ಸ್ವಾಗತಿಸಿದರು.
ಯಾವುದೇ ಪ್ರದೇಶದಲ್ಲಿ ಅಕ್ಕಿ
ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿ ರಾಜ್ಯದ ಯಾವುದೇ ಪ್ರದೇಶದಲ್ಲಿ ನೆಲೆಸಿದ್ದರೂ ಆತ ನೆಲೆಸಿರುವ ಪ್ರದೇಶದಲ್ಲೇ ಉಚಿತ ಅಕ್ಕಿ ಪಡೆಯುವ ವ್ಯವಸ್ಥೆ ಶೀಘ್ರ ಜಾರಿಗೆ ಬರಲಿದೆ. ಜತೆಗೆ ಪಡಿತರ ಚೀಟಿಯಿಂದ ಹೆಸರು ತೆಗೆಯುವ ಕಾರ್ಯವೂ ಸುಲಭವಾಗಲಿದೆ. ಆರ್ಥಿಕವಾಗಿ ಸ್ಥಿತಿವಂತರು ಬಿಪಿಎಲ್ ಸೌಲಭ್ಯ ಪಡೆಯುತ್ತಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖಾದರ್ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Train; ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ?
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.