ದಿ| ಹಿಲಾರಿ ಪಿರೇರ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ
Team Udayavani, Jan 3, 2018, 2:33 PM IST
ವೇಣೂರು: ದಿ| ಹಿಲಾರಿ ಪಿರೇರ ಅವರ ಸ್ಮರಣಾರ್ಥ ಅವರ ಕುಟುಂಬಸ್ಥರ ಸಹಕಾರದಿಂದ ನಿರ್ಮಿಸಲಾದ ಬಸ್ ತಂಗುದಾಣದಿಂದ ವೇಣೂರಿನ ಬಹುಕಾಲದ ಬೇಡಿಕೆಯೊಂದು ಈಡೇರಿದೆ. ವೇಣೂರಿನ ಜನತೆಯಲ್ಲಿ ಉತ್ತಮ ಒಡನಾಟ ಹಾಗೂ ಸಮಾಜಸೇವೆ ಮಾಡುತ್ತಿದ್ದ ದಿ| ಹಿಲಾರಿ ಪಿರೇರ ಅವರ ಹೆಸರು ವೇಣೂರಿನಲ್ಲಿ ಶಾಶ್ವತವಾಗಿ ಉಳಿಯುವಂತಾಗಿದೆ ಎಂದು ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.
ವೇಣೂರಿನ ದಿ| ಹಿಲಾರಿ ಪಿರೇರ ಅವರ ಸ್ಮರಣಾರ್ಥ ಅವರ ಕುಟುಂಬಸ್ಥರು ಒದಗಿಸಿದ 5 ಲಕ್ಷ ರೂ. ಕೊಡುಗೆ ಪಡಕೊಂಡು ಇಲ್ಲಿಯ ಶ್ರೀರಾಮ ನಗರದಲ್ಲಿ 7.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬಸ್ ತಂಗುದಾಣ ಹಾಗೂ ವಾಣಿಜ್ಯ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ ಕಟ್ಟಡವನ್ನು ವೇಣೂರು ಗ್ರಾ.ಪಂ.ಗೆ ಹಸ್ತಾಂತರಿಸಲಾಯಿತು. ವೇಣೂರು ವರ್ತಕರ ಸಂಘದ ಅಧ್ಯಕ್ಷ ಭಾಸ್ಕರ ಪೈ ಮಾತನಾಡಿ, ವೇಣೂರಿನ ಜನತೆಯಲ್ಲಿ ಉತ್ತಮ ಪ್ರೀತಿ ಮತ್ತು ಒಡನಾಟ ಹೊಂದಿದ್ದ ಅವರ ಸೇವೆ ಅವಿಸ್ಮರಣೀಯ ಎಂದರು.
ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಟ್ಟಡದ ದಾನಿಗಳಾದ ವಾಲ್ಟರ್ ಪಿರೇರ, ಡೈನಿ ಪಿರೇರ, ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ವೇಣೂರು ತಾ.ಪಂ. ಸದಸ್ಯ ಕೆ. ವಿಜಯ ಗೌಡ, ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಪಂ. ಸದಸ್ಯರು ಹಾಗೂ ಪಿರೇರ ಕುಟುಂಬಸ್ಥರು ಉಪಸ್ಥಿತರಿದ್ದರು.
ದಾನಿಗಳಿಗೆ ಸಮ್ಮಾನ
ದಾನಿಗಳಾದ ವಾಲ್ಟರ್ ಪಿರೇರಾ, ಡೈನಿ ಪಿರೇರಾ ಹಾಗೂ ಕಟ್ಟಡವನ್ನು ನಿರ್ಮಿಸಿಕೊಟ್ಟ ಗುತ್ತಿಗೆದಾರ ಶರತ್ ಅವರನ್ನು ಪಂ. ವತಿಯಿಂದ ಸಮ್ಮಾನಿಸಲಾಯಿತು.ವೇಣೂರು ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಕ್ರಾಸ್ತ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂ. ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಸ್ವಾಗತಿಸಿ, ಪಂ. ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ ವಂದಿಸಿದರು. ಲೋಕಯ್ಯ ಕಾರ್ಯಕ್ರಮ ನಿರೂಪಿಸಿದರು.
ಅನುದಾನಕ್ಕೆ ಮನವಿ
ವೇಣೂರು ಸೇತುವೆ ಬಳಿ ಬಸ್ ತಂಗುದಾಣದ ತಡೆಗೋಡೆ, ಕಟ್ಟಡಕ್ಕೆ ಅನುದಾನ, ಶ್ರೀರಾಮ ನಗರಕ್ಕೆ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ ಹಾಗೂ ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್‌ಗೆ ಅನುದಾನ ಒದಗಿಸುವಂತೆ ಶಾಸಕ ವಸಂತ ಬಂಗೇರ ಅವರಿಗೆ ಪಂ. ವತಿಯಿಂದ ಮನವಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.