ಮನೆ ಮುಂದೆ ಗಿಡ ಕಾನೂನು ಜಾರಿ
Team Udayavani, Aug 2, 2018, 10:55 AM IST
ಮಂಗಳೂರು: ರಾಜ್ಯ ಸರಕಾರದಿಂದ ನೀಡಲಾಗುವ ವಸತಿಗಳಲ್ಲಿ ಕಡ್ಡಾಯವಾಗಿ ಗಿಡ ನೆಡುವ ಬಗ್ಗೆ ಕಾನೂನು ಜಾರಿಗೆ ತರಲಾಗುವುದು. ಇದರಿಂದ ಪರಿಸರಸ್ನೇಹಿ ವಾತಾವರಣ ನಿರ್ಮಾಣವಾದಂತಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.
ನಗರದ ಪುರಭವನದಲ್ಲಿ ನಡೆದ ಪ್ರಕೃತಿ ಸಂರಕ್ಷಣಾ ದಿನಾಚರಣೆ, ವನಮಹೋತ್ಸವ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕನಿಷ್ಠ ನಾಲ್ಕು ಔಷಧೀಯ ಗಿಡಗಳನ್ನು ಮನೆ ಪರಿಸರದಲ್ಲಿ ನೆಡಲೇಬೇಕು ಎಂಬುದನ್ನು ಕಡ್ಡಾಯ ಮಾಡಿದರೆ ಅಲ್ಲಿನ ನಿವಾಸಿಗಳ ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಅದಕ್ಕಾಗಿ ಇಂತಹ ಕಾನೂನು ಅಗತ್ಯ ಎಂದರು.
ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಸಲ್ಲದು. ಅಭಿವೃದ್ಧಿ ಮತ್ತು ಪರಿಸರ ರಕ್ಷಣೆಯನ್ನು ಸಮಾನವಾಗಿ ಮಾಡಬೇಕು. ಬೃಹತ್ ಕಂಪೆನಿಗಳು ಕೂಡ ಈ ಬಗ್ಗೆ ಅಗತ್ಯ ಗಮನ ಹರಿಸಬೇಕು. ಕೇವಲ ಕಾನೂನಿನಿಂದ ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ಜನರಿಂದಲೇ ಪರಿಸರ ಉಳಿಸುವ ಕೆಲಸ ಆಗಬೇಕು ಎಂದವರು ಅಭಿಪ್ರಾಯ ಪಟ್ಟರು.
ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಜನರು ಇಲಾಖೆಗಳು ಹಾಗೂ ಸರಕಾರಿ ಕಾರ್ಯಕ್ರಮಗಳ ಜತೆ ಕೈಜೋಡಿಸಬೇಕು ಎಂದರು.
ಎನ್‌ಐಟಿಕೆ ಪ್ರೊಫೆಸರ್ ಡಾ| ಜಿ. ಶ್ರೀನಿಕೇತನ್ “ಪ್ಲಾಸ್ಟಿಕ್ ಮಾಲಿನ್ಯ’ ಬಗ್ಗೆ ಉಪನ್ಯಾಸ ನೀಡಿದರು. ಪರಿಸರ ಸಂರಕ್ಷಣೆಗೆ ಒತ್ತು ನೀಡಿದ ವಿವಿಧ ಉದ್ದಿಮೆ, ಸಂಘಟನೆ, ಕಂಪೆನಿ, ಗ್ರಾ.ಪಂ., ಮಂಗಳೂರು ಮಹಾನಗರ ಪಾಲಿಕೆ ವಾರ್ಡ್‌ಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಮಲ್ಲನ ಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಅಪರ ಜಿಲ್ಲಾಧಿಕಾರಿ ಕುಮಾರ್, ಪಾಲಿಕೆ ಆಯುಕ್ತ ಮೊಹಮ್ಮದ್ ನಝೀರ್, ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ವಿ. ಕರಿಕಾಲನ್, ಎನ್‌ಐಟಿಕೆ ಪ್ರಾಧ್ಯಾಪಕ ಡಾ| ಜಿ. ಶ್ರೀನಿಕೇತನ್ ಉಪಸ್ಥಿತರಿದ್ದರು.
ಪರಿಸರ ಇಲಾಖೆಯ ಹಿರಿಯ ಅಧಿಕಾರಿ ಜಯಪ್ರಕಾಶ್ ನಾಯಕ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿ ಕೊಟ್ಟರು. ಮಾಲಿನ್ಯ ನಿಯಂ ತ್ರಣ ಮಂಡಳಿ ಪರಿಸರ ಅಧಿಕಾರಿ ರಾಜ ಶೇಖರ್ ಪುರಾಣಿಕ್ ಸ್ವಾಗತಿಸಿದರು. ಆರ್.ಜೆ. ಪ್ರಸನ್ನ ನಿರೂಪಿಸಿದರು.
ದ.ಕ. ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ವಿವಿ ಎನ್ನೆಸ್ಸೆಸ್, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಕಾರ್ಯಕ್ರಮ ನಡೆಯಿತು.
ಗಾಯಕ ಮೈಸೂರು ಎಂ.ಆರ್. ಶ್ರೀಹರ್ಷ ಅವರಿಂದ ಸಂಗೀತ ಕಾರ್ಯಕ್ರಮ ಜರಗಿತು. ಗದಗ ಜಿಲ್ಲೆಯ ಕೋಟಬಾಳ್‌ನ ಶಂಕ್ರಪ್ಪ ಸಂಕಣ್ಣವರ್ ತಂಡದಿಂದ ಜಾನಪದ ನೃತ್ಯ ಹಮ್ಮಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.