ಇಂದಿರಾ ಕ್ಯಾಂಟೀನ್‌ ಹೋಬಳಿ ಮಟ್ಟಕ್ಕೂ ವಿಸ್ತರಣೆ


Team Udayavani, Mar 2, 2019, 12:30 AM IST

0103rjh1.jpg

ಪುತ್ತೂರು: ಸಿದ್ದರಾಮಯ್ಯ ಸರಕಾರ ಆರಂಭಿಸಿದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಹೋಬಳಿ ಮಟ್ಟಕ್ಕೂ ವಿಸ್ತರಿಸುವ ಇರಾದೆ ಇದೆ ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದ ಅವರು, ನಗರಸಭೆ ಮತ್ತು ಕೆಯುಐಡಿಎಫ್‌ಸಿ ಜಂಟಿ ಸಹಯೋಗದಲ್ಲಿ ಎಡಿಬಿ ಯೋಜನೆಯಡಿ ಪುತ್ತೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಯ ಶಿಲಾನ್ಯಾಸದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದಲ್ಲಿ ನ್ಯಾಯಬೆಲೆ ಅಂಗಡಿ ಯನ್ನು ತಂದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯ ವಿತರಿಸಿದವರು ಇಂದಿರಾ ಗಾಂಧಿ. ಅವರ ಈ ಕನಸಿನ ಯೋಜನೆಯಡಿ ಆಹಾರಧಾನ್ಯ ಮಾತ್ರವಲ್ಲದೆ ಇಂದು ಅನ್ನವನ್ನೂ ನೀಡುತ್ತಿದ್ದೇವೆ. ಆರ್ಥಿಕ ವಾಗಿ ಬಲಾಡ್ಯರಲ್ಲದ ರಿಕ್ಷಾ ಚಾಲಕರು, ಕೂಲಿ ಕೆಲಸಗಾರರು, ಖಾಸಗಿ ಉದ್ಯೋಗಿಗಳು, ಶಾಲಾ -ಕಾಲೇಜು ಮಕ್ಕಳಿಗೆ ಪ್ರಯೋಜನ ವಾಗುವ ದೃಷ್ಟಿ ಯಿಂದ ಈ ವಿಶೇಷ ಯೋಜನೆಯನ್ನು ಜಾರಿಗೊಳಿಸಿದ ಖುಷಿ ಇದೆ ಎಂದರು.

ನೀರಿನ ಜವಾಬ್ದಾರಿ
ಜನರಿಗೆ ಸಮರ್ಪಕ ನೀರು ಪೂರೈಸುವ ಜವಾಬ್ದಾರಿಯನ್ನು ಸರಕಾರ ಮಾಡುತ್ತಿದೆ ಎಂದ ಅವರು, ಮುಂದೆ ಮನೆ ಕಟ್ಟಿ ಲೈಸನ್ಸ್‌ ಪಡೆಯುವ ಸಂದರ್ಭದಲ್ಲೇ ನೀರಿನ ಸಂಪರ್ಕಕ್ಕೂ ಅರ್ಜಿ ಸಲ್ಲಿಸಿ ಪಡೆಯುವ ವ್ಯವಸ್ಥೆ ಜಾರಿಗೆ ತರಲಿದೆ ಎಂದು ಎಂದರು.

20 ಲಕ್ಷ ಮಂದಿಗೆ ಬಿಪಿಎಲ್‌
ಆಧಾರ್‌ ಕಾರ್ಡ್‌ ದಾಖಲೆ ಮೂಲಕ ಮಾಸಿಕ 1.20 ಲಕ್ಷ ರೂ. ಒಳಗಿನ ಆದಾಯ ಹೊಂದಿದವರಿಗೆ ಬಿಪಿಎಲ್‌ ಪಡಿತರ ಚೀಟಿ ನೀಡುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರಿಂದ ಸುಮಾರು 20 ಲಕ್ಷ ಮಂದಿ ಬಿಪಿಎಲ್‌ ಕಾರ್ಡ್‌ ಹೊಂದುವಂತಾಗಿದೆ ಎಂದರು.

ಶಕುಂತಳಾ ಟಿ. ಶೆಟ್ಟಿ, ಪುತ್ತೂರು ಎಸಿ ಎಚ್‌.ಕೆ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕ ಪ್ರಸನ್ನ ಕುಮಾರ್‌, ಎಡಿಬಿ ಕಾಂಟ್ರಾಕ್ಟರ್‌ ನಿಕೋಲಸ್‌, ಕೆಯುಐಡಿಎಫ್‌ಸಿ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಸೂರಜ್‌, ನಗರಸಭಾ ಸದಸ್ಯರಾದ ರಿಯಾಝ್, ವಿದ್ಯಾಗೌರಿ, ಪದ್ಮನಾಭ, ಶಕ್ತಿ ಸಿನ್ಹಾ, ಫೌಝಿಯಾ ಉಪಸ್ಥಿತರಿದ್ದರು. ರೂಪಾ ಟಿ. ಶೆಟ್ಟಿ ಸ್ವಾಗತಿಸಿ, ಬಾಲಕೃಷ್ಣ ಪೊರ್ದಾಳ್‌ ನಿರ್ವಹಿಸಿದರು. 

“ಸೈನಿಕರ ಸೇವೆಯಲ್ಲಿ  ರಾಜಕೀಯ ಬೇಡ’
ಯೋಧರ ತ್ಯಾಗ ಮತ್ತು ಸೇವೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ತಪ್ಪು. ಇಂತಹ ಹೇಳಿಕೆಗಳು ರಾಜ್ಯಕ್ಕೆ ಕಪ್ಪು ಚುಕ್ಕೆಯಾಗುತ್ತವೆ ಎಂದು ಸಚಿವ ಯು.ಟಿ. ಖಾದರ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಖಾದರ್‌, ಇಡೀ ದೇಶದ ಜನತೆ ಸೈನಿಕರ ಪರವಾಗಿ ಮತ್ತು ಅವರ ಕುಟುಂಬದ ಪರವಾಗಿ ಇರಬೇಕು. ಆದರೆ ಈ ಸಂದರ್ಭದಲ್ಲಿ ಇದನ್ನೇ ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ  ಎಂದರು.

ಟಾಪ್ ನ್ಯೂಸ್

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.