ಕೇರಳ-ಕರ್ನಾಟಕ ರಸ್ತೆ ಸಂಪೂರ್ಣ ಬಂದ್
Team Udayavani, Mar 22, 2020, 5:42 AM IST
ಮಂಗಳೂರು: ಕೋವಿಡ್-19 (ಕೋರೊನಾ ವೈರಾಣು) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ-ಕಾಸರಗೋಡು ಗಡಿಭಾಗದಲ್ಲಿ ಸಂಚರಿಸುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಮಾ. 21ರ ಮಧ್ಯಾಹ್ನ 2 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ತುರ್ತು ಸೇವೆಗಳ ವಾಹನಗಳು ಮತ್ತು ಆವಶ್ಯಕ ವಸ್ತುಗಳ ಕಾಯಿದೆ 1955ರಡಿ ನಮೂದಿಸಿರುವ ಆವಶ್ಯಕ ವಸ್ತುಗಳ ಸಾಗಾಣಿಕೆಯ ವಾಹನಗಳನ್ನು ಮಾತ್ರ ತಲಪಾಡಿ ಚೆಕ್‌ಪೋಸ್ಟ್ ಮೂಲಕ ಸಂಚರಿಸಲು ಅವಕಾಶ ನೀಡಲಾಗಿದೆ.
ನಾಗರಿಕರಲ್ಲಿ ಆತಂಕ; ಅಧಿಕಾರಿಗಳಿಗೆ ಇಕ್ಕಟ್ಟು
ವಿಟ್ಲ/ಸಾರಡ್ಕ,/ಈಶ್ವರಮಂಗಲ/ಉಳ್ಳಾಲ: ಜಿಲ್ಲಾಧಿಕಾರಿಗಳ ಆದೇಶದಂತೆ ಗಡಿಭಾಗದಲ್ಲಿ ಶನಿವಾರ ಮಧ್ಯಾಹ್ನ 2ರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸುವ ಕಾರ್ಯವನ್ನು ವಿಟ್ಲ ಪೊಲೀಸರು ನಡೆಸಿದರು. ಇದರಿಂದ ಒಂದೆಡೆ ಆತಂಕಗೊಂಡ ಜನತೆ, ಇನ್ನೊಂದೆಡೆ ಅಧಿಕಾರಿಗಳಿಗೆ ಇಕ್ಕಟ್ಟು ಪರಿಸ್ಥಿತಿ ನಿರ್ಮಾಣವಾದ ಘಟನೆ ಸಂಭವಿಸಿತು. ಸಾರಡ್ಕ ಚೆಕ್‌ಪೋಸ್ಟ್‌ನಲ್ಲಂತೂ ಸ್ಥಳೀಯರು ವಾಹನಗಳನ್ನು ಗಡಿಯಲ್ಲೇ ನಿಲ್ಲಿಸಿ ನಡೆದುಕೊಂಡು ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಯಿತು.
ಸಾರಡ್ಕ ಗೇಟಿನ ಆಚೆ ಬದಿಯಲ್ಲಿರುವ ಅಡ್ಕಸ್ಥಳದ ವ್ಯಕ್ತಿಗಳೂ ತಮ್ಮ ಮನೆಗಳಿಗೆ ತೆರಳುವುದು ಅಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಯಿತು. ಕೆಲವರು ತಾವು ಸ್ಥಳೀಯರು ಎಂದು ದೃಢೀಕರಿಸುವ ದಾಖಲೆಗಳನ್ನು ತೋರಿಸಿ ಮುಂದುವರಿದರು.
ಸಾಲೆತ್ತೂರು ಭಾಗದ ಮೆದುವಿನಲ್ಲಿ, ಕನ್ಯಾನ ಭಾಗದ ನೆಲ್ಲಿಕಟ್ಟೆ, ಕರೋಪಾಡಿ ಗ್ರಾಮದ ಆನೆಕಲ್ಲುವಿನಲ್ಲಿ, ಅಡ್ಯನಡ್ಕ ಸಮೀಪದ ಸಾರಡ್ಕ, ಪೆರುವಾಯಿಯಲ್ಲಿ ಮುಖ್ಯರಸ್ತೆಗಳನ್ನು ಬಂದ್ ಮಾಡಿ ವಾಹನಗಳನ್ನು ತಡೆಯುವ ಕಾರ್ಯ ಶನಿವಾರ ಮಾಡಲಾಯಿತು. ಆದರೆ ನಾಗರಿಕರು ಮಾತ್ರ ಸರಕಾರದ ಆದೇಶವನ್ನು ಪಾಲಿಸಲು ನಿರಾಕರಿಸಿದರು. ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿ, ಹಲವು ಕಡೆಗಳಿಂದ ಕೇರಳದಿಂದ ಕರ್ನಾಟಕಕ್ಕೆ ನುಗ್ಗಿಬಂದಿದ್ದಾರೆ.
ಹಲವು ಮಂದಿ ವಾಹನಗಳಲ್ಲಿ ಸರಕು ಸಾಮಗ್ರಿಗಳನ್ನು ತುಂಬಿಕೊಂಡು ಕರ್ನಾಟಕವನ್ನು ಪ್ರವೇಶಿಸಿದ್ದಾರೆ.ಪುತ್ತೂರು ತಾಲೂಕಿನ ಗಡಿ ಗ್ರಾಮಗಳಾದ ಪಡುವನ್ನೂರು ಗ್ರಾಮದ ಸುಳ್ಯಪದವು, ನೆಟ್ಟಣಿಗೆ ಮುಟ್ನೂರು ಗ್ರಾಮದ ಗಾಳಿಮುಖ, ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ, ಪಾಣಾಜೆ ಗ್ರಾಮದ ಆರ್ಲಪದವು ಮುಂತಾದ ಕಡೆ ಬ್ಯಾರಿಕೇಡ್‌ಗಳನ್ನು ರಸ್ತೆಯಲ್ಲಿ ಇಟ್ಟು ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ.
ಅಧಿಕಾರಿಗಳ ಭೇಟಿ
ವಿಟ್ಲ ಠಾಣಾಧಿಕಾರಿ ವಿನೋದ್ ಎಸ್.ಕೆ. ನೇತೃತ್ವದಲ್ಲಿ ಚೆಕ್‌ಪೋಸ್ಟ್‌ಗಳನ್ನು ಮಾಡಲಾಗಿದೆ. ಪ್ರತಿಯೊಂದು ಕಡೆಗೂ ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್., ತಾಲೂಕು ವೈದ್ಯಾ ಧಿಕಾರಿ ಡಾ| ದೀಪಾ ಪ್ರಭು ಭೇಟಿ ನೀಡಿ ಹಲವರ ಮನವೊಲಿಸಲು ಪ್ರಯತ್ನಿಸಿದರು.
ಅಧಿಕಾರಿಗಳಿಗೆ ಕಚೇರಿಯಲ್ಲಿ ಕುಳಿತು ಕಾರ್ಯ ನಿರ್ವಹಿಸಬಹುದು. ಜನರ ಹಿತಕ್ಕಾಗಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗಿದೆ. ನಾಗರಿಕರು ಗಡಿಯನ್ನು ದಾಟಿ ಬರುವುದಾದರೆ ವಾಹನ ಸಂಚಾರವನ್ನು ಸ್ಥಗಿತ ಮಾಡುವ ಆವಶ್ಯಕತೆಯಿಲ್ಲ. ಯಾವುದೇ ಕಾರಣಕ್ಕೂ ನಾಗರಿಕರು ಮನೆಯಿಂದ ಹೊರಗೆ ಬರುವ ಸಾಹಸ ಮಾಡಬಾರದು.
– ರಶ್ಮಿ ಎಸ್. ಆರ್. ತಹಶೀಲ್ದಾರ್, ಬಂಟ್ವಾಳ ತಾಲೂಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.