ವಿಶ್ವ ಮಟ್ಟಕ್ಕೆ ಸೆಂಟ್ರಲ್ ರೈಲು ನಿಲ್ದಾಣ; ಶೀಘ್ರ ಸಭೆ
Team Udayavani, Apr 10, 2017, 4:32 PM IST
ಮಂಗಳೂರು: ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಅಭಿಪ್ರಾಯ ಕ್ರೋಡೀರಿಸಲು 1 ತಿಂಗಳೊಳಗೆ ಸಮಾಲೋಚನ ಸಭೆ ಆಯೋಜಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸುಮಾರು 1.52 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ 1ರಿಂದ 2 ಮತ್ತು 3ನೇ ಪ್ಲಾಟ್‌ಫಾರಂ ಅನ್ನು ಸಂಪರ್ಕಿಸುವ ನಾಲ್ಕನೇ ಹೊಸ ಪ್ಲಾಟ್‌ಫಾರಂ ರಚನೆಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಹೊಸ ಪ್ಲಾಟ್‌ಫಾರಂ ಕಾಮಗಾರಿ ಶೀಘ್ರದಲ್ಲಿ ನಡೆದು ಪ್ರಯಾಣಿಕರಿಗೆ ಅರ್ಪಿಸಲಾ ಗುವುದು ಎಂದವರು ತಿಳಿಸಿದರು.
ಮಂಗಳೂರಿನ ರೈಲ್ವೇ ಯೋಜನೆ ಹಾಗೂ ಸಮಸ್ಯೆಗಳಿಗೆ ಸಂಬಂಧಿಸಿ ರೈಲ್ವೇ ಅಧಿಕಾರಿಗಳೊಂದಿಗೆ ನಿರಂತರ ಚರ್ಚೆ, ಸಭೆಗಳನ್ನು ನಡೆಸಲಾಗುತ್ತಿದೆ. ಇದರಿಂದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸಲು ಸಾಧ್ಯವಾಗು ತ್ತಿದೆ. ಈ ನಿಲ್ದಾಣವನ್ನು ವಿಶ್ವಮಟ್ಟ ಕ್ಕೇರಿಸುವ ನೆಲೆಯಲ್ಲಿ ಪೂರಕ ಕಾರ್ಯಗಳನ್ನು ಶೀಘ್ರದಲ್ಲಿ ಅನುಷ್ಠಾ ನಿಸಲಾಗುವುದು ಎಂದರು.
73.18 ಲಕ್ಷ ರೂ. ವಿವಿಧ ಕಾಮಗಾರಿ
ಸೆಂಟ್ರಲ್ ರೈಲು ನಿಲ್ದಾಣವನ್ನು ಸಂಪರ್ಕಿಸುವ ಪುರಭವನ ರಸ್ತೆ ಯನ್ನು 23 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ರೈಲು ನಿಲ್ದಾಣಕ್ಕೆ ಇನ್ನೊಂದು ಪ್ರವೇಶದ್ವಾರ ರಚನೆಯ ಕಾಮಗಾರಿ ನಡೆಯಲಿದೆ. ಮಂಗಳೂರು ಸೆಂಟ್ರಲ್ ಹಾಗೂ ಜಂಕ್ಷನ್ ನಿಲ್ದಾಣವನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ 35.74 ಲಕ್ಷ ರೂ.
ಬಿಡುಗಡೆಗೊಳಿಸಲಾಗಿದೆ. ಸೆಂಟ್ರಲ್ ನಿಲ್ದಾಣದ ಮುಂಭಾಗ ಹಾಗೂ ವಾಹನ ನಿಲುಗಡೆ ಪ್ರದೇಶದ ಅಭಿವೃದ್ಧಿಗೆ 25.57 ಲಕ್ಷ ರೂ. ಹಾಗೂ ನಿಲ್ದಾಣದ ಎರಡನೇ ಪ್ರವೇಶ ದ್ವಾರದ ಬಳಿ ವಾಹನ ನಿಲುಗಡೆ ಪ್ರದೇಶದ ಅಭಿವೃದ್ಧಿಗೆ 11.87 ಲಕ್ಷ ರೂ. ಸೇರಿದಂತೆ ಒಟ್ಟು 73.18 ಲಕ್ಷ ರೂ.ಅನುದಾನದ ಕಾಮಗಾರಿ ನಡೆಯಲಿದೆ ಎಂದು ನಳಿನ್ ಕುಮಾರ್ ತಿಳಿಸಿದರು.
ಫಾಲಾ^ಟ್ ರೈಲ್ವೆ ವಿಭಾಗೀಯ ಅಧಿಕಾರಿ ನರೇಶ್ ಲಲ್ವಾನಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ, ವಿಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ
Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
MUST WATCH
ಹೊಸ ಸೇರ್ಪಡೆ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.