ವೈದ್ಯಕೀಯ ವೃತ್ತಿ ಅತ್ಯುನ್ನತ ಸೇವೆ: ರಿಮಿ ಟೋಮಿ


Team Udayavani, Feb 23, 2017, 12:09 PM IST

rimi.jpg

ಮಂಗಳೂರು: ವೈದ್ಯಕೀಯ ವೃತ್ತಿ ಅತ್ಯುನ್ನತ ಸೇವೆಯಾಗಿದ್ದು, ಕಷ್ಟಕಾಲದಲ್ಲಿ ವೈದ್ಯರು ದೇವ ಸ್ವರೂಪಿಗಳು. ಜನಸೇವೆಯ ದೃಷ್ಟಿ ಯಿಂದ ವಿದ್ಯಾರ್ಥಿಗಳು ಕಷ್ಟಪಟ್ಟು ಕಲಿತು ವೈದ್ಯಕೀಯ ವೃತ್ತಿಗೆ ಬರುತ್ತಿದ್ದಾರೆ. ಎಲ್ಲರಿಗೂ ಶುಭವಾಗಲಿ ಎಂದು ಹಿನ್ನೆಲೆ ಗಾಯಕಿ ಹಾಗೂ ಮಲಯಾಳ ಟೆಲಿವಿಷನ್‌ ನಿರೂಪಕಿ, ನಟಿ ರಿಮಿ ಟೋಮಿ ಹಾರೈಸಿದರು.
ನಗರದ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಆಶ್ರಯದಲ್ಲಿ ಫೆ. 22ರಿಂದ 25ರ ವರೆಗೆ ಆಯೋಜಿಸಲಾಗಿರುವ “ಅಡ್ರಿನಾಲಿನ್‌-2017′ ಅಂತರ್‌ ಕಾಲೇಜು ಸಂಗೀತ, ಕಲೆ ಮತ್ತು ಕ್ರೀಡಾ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಸಾಂಸ್ಕೃತಿಕ ಕ್ಷೇತ್ರಕ್ಕೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದು, ಕಾಲೇಜಿನ ಸಾಧನೆಯ ಬಗ್ಗೆ ಬಹಳಷ್ಟು ಕೇಳಿದ್ದೇನೆ. ಈ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ನಿಜವಾದ ಭಾಗ್ಯಶಾಲಿಗಳು ಎಂದರು. ಈ ಸಂದರ್ಭದಲ್ಲಿ ಸಿನೆಮಾ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳ ಮನ ರಂಜಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫಾದರ್‌ ಮುಲ್ಲರ್ ಆಸ್ಪತ್ರೆ ಹಾಗೂ ಮೆಡಿಕಲ್‌ ಕಾಲೇಜಿನ ನಿರ್ದೇಶಕ ಫಾ| ಪ್ಯಾಟ್ರಿಕ್‌ ರಾಡ್ರಿಗಸ್‌ ಮಾತನಾಡಿ, ಸಾಧಕರು ಎಲ್ಲ ಕ್ಷೇತ್ರದಲ್ಲಿದ್ದಾರೆ. ಕೃಷಿ, ವಿಜ್ಞಾನ, ಉದ್ಯಮ ಕ್ಷೇತ್ರದಲ್ಲಿ ಇವರು ಮಾಡಿರುವ ಸಾಧನೆಗೆ ಕಾರಣವಾಗಿರುವ ಅವರ ಕನಸು ನನಸು ಮಾಡುವ ಮನಃಸ್ಥಿತಿಯನ್ನು ಶ್ಲಾಘಿಸಬೇಕು. ಅವರು ನಮಗೆ ಮಾದರಿ. ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ವಿದ್ಯಾರ್ಥಿ ಗಳ ಕನಸನ್ನು ನನಸು ಮಾಡಲು ವೇದಿಕೆಯನ್ನು ಕಲ್ಪಿಸಿ ಕೊಟ್ಟಿದ್ದು, ಈ ಮೂಲಕ ಅವರ ಪ್ರತಿಭೆಗಳು ಹೊರಹೊಮ್ಮಿ ಮುಂದಿನ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.

ಅತಿಥಿಗಳಾಗಿ ಫಾದರ್‌ ಮುಲ್ಲರ್‌ ಆಸ್ಪತ್ರೆಯ ಆಡಳಿತಾ ಧಿಕಾರಿ ಫಾ| ರಿಚರ್ಡ್‌ ಕುವೆಲ್ಲೋ, ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಆಡಳಿತಾಧಿಕಾರಿ ಫಾ| ರುಡಾಲ್ಫ್ ರವಿ ಡೇಸಾ, ಫಾದರ್‌ ಮುಲ್ಲರ್‌ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಫಾ| ಅಜಿತ್‌, ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಡೀನ್‌ ಡಾ| ಜಯಪ್ರಕಾಶ್‌ ಆಳ್ವ, ಡಾ| ಶ್ರುತಿ ಮತ್ತಿತರರು ಉಪಸ್ಥಿತರಿದ್ದರು.

ಡಾ| ನಿಕೋಲ್‌ ಪಿರೇರಾ ಅವರು ಸ್ವಾಗತಿಸಿ, ಫಾ| ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಸ್ಟುಡೆಂಟ್‌ ಕೌನ್ಸಿಲ್‌ನ ಅಧ್ಯಕ್ಷ ರೇಮಂಡ್‌ ಆ್ಯಂಟನಿ ಅವರು ವಂದಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.