ಮಸೀದಿ, ಅಂಗಡಿಗಳಿಗೆ ದಾಂಧಲೆ: ಪೊಲೀಸ್ ಆಯುಕ್ತರಿಂದ ಮನವಿ
Team Udayavani, Jan 13, 2018, 11:40 AM IST
ಉಳ್ಳಾಲ: ನಾಟೆಕಲ್ನಲ್ಲಿ ಮಸೀದಿ, ಅಂಗಡಿಗಳಿಗೆ ದಾಂಧಲೆ ನಡೆಸಿ ಗಲಭೆಗೆ ಪ್ರಚೋದಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಹಿಂದಿರುವ ಶಕ್ತಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಾಟೆಕಲ್ ವರ್ತಕರ ಸಂಘ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರಿಗೆ ಗುರುವಾರ ಮನವಿ ಸಲ್ಲಿಸಿತು.
ಜ.7 ರಂದು ರಕ್ಷೀದಿ ಮಸೀದಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಉಸ್ತಾದರನ್ನು ಹುಡುಕಿ ಸಿಗದೇ ಇದ್ದಾಗ ಮಸೀದಿಯ ಪೀಠೊಪಕರಣಗಳನ್ನು ಹಾನಿಗೈದಿದ್ದರು. ಇದೇ ವೇಳೆ ನಾಟೆಕಲ್ ಪರಿಸರದಲ್ಲಿರುವ ಮೂರು ಅಂಗಡಿಗಳ ಸೊತ್ತುಗಳಿಗೂ ಹಾನಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರೂ, ಇವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಇವರ ಹಿಂದಿರುವ ಶಕ್ತಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ನಾಟೆಕಲ್ ವರ್ತಕರ ಸಂಘದ ಅಧ್ಯಕ್ಷ ಹನೀಫ್, ಉಪಾಧ್ಯಕ್ಷ ಅನಂದ್, ಕಾರ್ಯದರ್ಶಿ ಇಮ್ರಾನ್, ಜತೆ ಕಾರ್ಯದರ್ಶಿ ಕೆ.ಮೊಹಮ್ಮದ್, ಮಾಧ್ಯಮ ಸಲಹೆಗಾರ ಅಬ್ಟಾಸ್ ಕಿನ್ಯ, ಸದಸ್ಯರಾದ ಇಬ್ರಾಹಿಂ ಸಾಧಿಕ್, ಎ.ಎಸ್. ಮೊಹಮ್ಮದ್, ಹನೀಫ್ ನಡುದಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.