ಆತ್ಮಹತ್ಯೆಗೆತ್ನಿಸಿದ ತಾಯಿ-ಮಕ್ಕಳು ಮರಳಿ ಮನೆಗೆ
Team Udayavani, Apr 5, 2018, 6:00 AM IST
ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಆಗಮಿಸಿ ಪ್ರಾಣ ಕಳೆದುಕೊಳ್ಳುವ ಯೋಚನೆಯಲ್ಲಿದ್ದ ಮಹಿಳೆ ಹಾಗೂ ಮಕ್ಕಳನ್ನು ಕೊಕ್ಕಡದ ಯುವಕರು ಸಾವಿನ ದವಡೆಯಿಂದ ಪಾರು ಮಾಡಿ ಮರಳಿ ಮನೆಗೆ ಸೇರುವಂತೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಕೊಕ್ಕಡದ ಯುವಕರ ಪ್ರಸಂಗಾವಧಾನತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ಸೂಚಿಸಿದ್ದಾರೆ.
ಯಾರಲ್ಲೂ ಹೇಳದೆ ಬೆಂಗಳೂರಿನಿಂದ ಬಂದ ಮಹಿಳೆ
ಕೊಕ್ಕಡದ ರಫೀಕ್ ಬೋಳದಬೈಲು ಹಾಗೂ ಅಝೀಜ್ ಬೆಂಗಳೂರಿನಿಂದ ಬಸ್ಸಿನಲ್ಲಿ ಧರ್ಮಸ್ಥಳಕ್ಕೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ತಮ್ಮ ಪಕ್ಕದ ಸೀಟಿನಲ್ಲಿದ್ದ ಮಹಿಳೆ ಹಾಗೂ ಮಕ್ಕಳು ಅಳುತ್ತಾ ಇರುವುದನ್ನು ಸೂಕ್ಷ್ಮವಾಗಿ ಗಮನಿಸಿದ್ದರು. ಮಹಿಳೆ ಯಾರೊಂದಿಗೋ ಮೊಬೈಲ್ನಲ್ಲಿ ಅಳುತ್ತಾ, ತಾನು ಮಕ್ಕಳೊಂದಿಗೆ ಸಾಯಲು ಹೊರಟಿದ್ದಾಗಿ ಹೇಳುತ್ತಿದ್ದುದನ್ನು ಗಮನಿಸಿದ ರಫೀಕ್ ಹಾಗೂ ಅಝೀಜ್ ಆಕೆಯನ್ನು ಮಾತನಾಡಿಸಿದರು. ಆಗ ಆಕೆ ತಾನು ರಾಮನಗರ ನಿವಾಸಿ ಚಂದ್ರಕಲಾ, ಮಕ್ಕಳಾದ ಭಾವನಾ ಹಾಗೂ ವಿದ್ಯಾಶ್ರೀ ಜತೆಗೆ ಗಂಡನ ಹೆತ್ತವರ ಕಿರುಕುಳ ತಡೆಯಲಾರದೆ ಯಾರಲ್ಲೂ ಹೇಳದೆ ಬಂದಿರುವುದಾಗಿ ತಿಳಿಸಿದರು. ಕೊಟ್ಟಿಗೆಹಾರ ಬಳಿ ಬಸ್ಸಿನಿಂದ ಇಳಿದ ಮಹಿಳೆಯನ್ನು ಹಿಂಬಾಲಿಸಿ ಗಮನಿಸುತ್ತಿದ್ದ ಈ ಯುವಕರಿಗೆ ಮಹಿಳೆಯಲ್ಲಿ ಉಳಿದಿರುವ ಹಣ ಕೇವಲ 20 ರೂ. ಎಂದು ತಿಳಿದಾಗ ಉಪಾಹಾರ ಹಾಗೂ ನೀರು ತೆಗೆದುಕೊಟ್ಟಿದ್ದಾರೆ. ಬಳಿಕ ಆಕೆಯ ಪತಿಯ ಮೊಬೈಲ್ ಸಂಖ್ಯೆ ಪಡೆದು ಕರೆ ಮಾಡಿದರು.
ಮಹಿಳೆಯ ಪತಿ ಕೂಡಲೇ ಹೊರಟು ಬರುವುದಾಗಿ ತಿಳಿಸಿದ್ದು, ಆ ತನಕ ಪತ್ನಿ ಮತ್ತು ಮಕ್ಕಳನ್ನು ರಕ್ಷಿಸಲು ಮನವಿ ಮಾಡಿಕೊಂಡಿದ್ದರು. ವರದಿಗಾರರ ಮೂಲಕ ಪೊಲೀಸ್ ಠಾಣೆಗೆ ಬೆಳ್ತಂಗಡಿ ತಾಲೂಕು ಕೋಮು ಸೂಕ್ಷ್ಮ ಪ್ರದೇಶವಾದ್ದರಿಂದ ಯುವಕರು ತಪ್ಪು ತಿಳುವಳಿಕೆಯಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಬಾರದು ಎನ್ನುವ ಮುಂಜಾಗ್ರತೆಯಿಂದ ಕೊಕ್ಕಡದ ಮಾಧ್ಯಮ ವರದಿಗಾರರನ್ನು ಸಂಪರ್ಕಿಸಿದರು. ಅವರು ಜಿಲ್ಲಾ ಎಸ್ಪಿಗೆ ಮಾಹಿತಿ ನೀಡಿದರು. ಬಳಿಕ ಮಹಿಳೆ ಮತ್ತು ಮಕ್ಕಳನ್ನು ಪೊಲೀಸ್ ಸುಪರ್ದಿಗೆ ಒಪ್ಪಿಸಲಾಯಿತು.
ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಬಂದ ಪತಿಯ ಜತೆಯಲ್ಲಿ ಮಹಿಳೆ ಹಾಗೂ ಮಕ್ಕಳನ್ನು ಕಳುಹಿಸಿಕೊಡಲಾಗಿದೆ. ಮಕ್ಕಳೊಂದಿಗೆ ಸಾಯಲು ಹೋಗುತ್ತಿದ್ದೇನೆ ಅನ್ನುವ ಮಹಿಳೆಯ ಮಾತುಗಳನ್ನು ಕೇಳಿಸಿಕೊಂಡು ಸಮಯೋಚಿತವಾಗಿ ವರ್ತಿಸಿ ಮೂರು ಜೀವಗಳನ್ನು ಉಳಿಸಿದ ಯುವಕರ ಕಾರ್ಯಕ್ಕೆ ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯುವಕರಿಂದಾಗಿ ಹೆಂಡತಿ ಮಕ್ಕಳು ಉಳಿದುಕೊಂಡರು
ಮನೆಯಲ್ಲಿ ಹಿಂದಿನ ರಾತ್ರಿ ನಡೆದ ಘಟನೆಯಿಂದ ನನ್ನ ಹೆಂಡತಿ, ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಎಲ್ಲಿ ಹೋಗಿದ್ದಾರೆ ಅನ್ನುವ ಮಾಹಿತಿಯೇ ನಮಗೆ ಇರಲಿಲ್ಲ. ಕೊಕ್ಕಡದ ಯುವಕರ ಪ್ರಸಂಗಾವಧಾನತೆಯಿಂದ ನಾನು ಹೆಂಡತಿ ಮಕ್ಕಳನ್ನು ಮರಳಿ ಪಡೆಯುವಂತಾಯಿತು. ನಮ್ಮನ್ನು ರಕ್ಷಿಸಿದ ಯುವಕರಿಗೆ ದೇವರು ಒಳ್ಳೆಯದು ಮಾಡಲಿ.
ಶಿವಾಜಿ ರಾವ್, ಮಹಿಳೆಯ ಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.