ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕಾಮಗಾರಿ; ವರ್ಷಾಂತ್ಯದೊಳಗೆ ಪೂರ್ಣಗೊಳ್ಳುವ ಸಾಧ್ಯತೆ
Team Udayavani, Oct 6, 2021, 6:35 AM IST
ಮಹಾನಗರ: ಕಳೆದ ಎರಡೂವರೆ ವರ್ಷದಿಂದ ಕುಂಟುತ್ತಾ ಸಾಗುತ್ತಿದ್ದ ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕೊನೆಯ ಹಂತದ ಕಾಮಗಾರಿ ನಡೆಯುತ್ತಿದ್ದು, ವರ್ಷಾಂತ್ಯದೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ರೈಲ್ವೇ ಮೇಲ್ಸೇತುವೆಯ ಎರಡು ಬದಿಯ ತಡೆಗೋಡೆ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ಮೇಲ್ಸೇತುವೆ ಯಿಂದ ರಸ್ತೆಗೆ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ. ರಸ್ತೆಗೆ ಜಲ್ಲಿ ಅಳವಡಿಸಲಾಗಿದ್ದು, ಇನ್ನೇನು ಕೆಲ ದಿನಗಳಲ್ಲಿಯೇ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ಈ ಭಾಗದಲ್ಲಿ ಕಾಮಗಾರಿ ನಡೆ ಯುವ ಕಾರಣ ದಿಂದಾಗಿ ವಾಹನ ಸಂಚಾರದಲ್ಲಿ ಯೂ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ.
ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕಾಮ ಗಾರಿ ಎರಡೂವರೆ ವರ್ಷದಿಂದ ಕುಂಟುತ್ತಾ ಸಾಗುತ್ತಿತ್ತು. ಇದರಿಂದಾಗಿ ಸಾರ್ವಜನಿಕರಿಗೆ ಪ್ರತೀ ದಿನ ಸಮಸ್ಯೆ ಉಂಟಾಗುತ್ತಿತ್ತು. ಕಾಮಗಾರಿ ಆಗುವಂತಹ ರೈಲ್ವೇ ಮೇಲ್ಸೇ ತುವೆ ಪಕ್ಕದಲ್ಲಿಯೇ ಕಾಂಕ್ರೀಟ್ ರಸ್ತೆ ನಿರ್ಮಿಸಿ, ತಾತ್ಕಾಲಿಕ ಲೆವೆಲ್ ಕ್ರಾಸಿಂಗ್ ವ್ಯವಸ್ಥೆ ಮಾಡಿದರೂ ಸಾರ್ವಜನಿಕರಿಗೆ ಮತ್ತು ಸ್ಥಳೀಯರು ದಿನಂಪ್ರತಿ ಸಮಸ್ಯೆ ಉಂಟಾಗುತ್ತಿತ್ತು. ಒಂದು ಬಾರಿ ಗೇಟ್ ಹಾಕಿದರೆ ಸಾಲುಗಟ್ಟಲೆ ವಾಹನಗಳು ನಿಲ್ಲುತ್ತಿತ್ತು.
ಕೋವಿಡ್ ಪೂರ್ವದಲ್ಲಿ ಇದೇ ರೈಲ್ವೇ ಹಳಿಯಲ್ಲಿ ಗೂಡ್ಸ್ ರೈಲು ಸಹಿತ ಅರ್ಧ ಗಂಟೆಯಲ್ಲಿ ಸುಮಾರು 4-5 ರೈಲು ಸಂಚರಿಸುತ್ತಿತ್ತು. ಈ ವೇಳೆ ಒಂದು ಬಾರಿ ಮುಚ್ಚಿದ ರೈಲ್ವೇ ಗೇಟ್ ತೆರೆಯುವುದು ಸುಮಾರು ಅರ್ಧ ಗಂಟೆ ತಗಲುತ್ತಿತ್ತು.
ಇದನ್ನೂ ಓದಿ:ಮಟ್ಟುಗುಳ್ಳ ಬೆಳೆಗಾರರಿಗೆ ಪರಿಹಾರ ಧನ ವಿತರಿಸಿದ ಶಾಸಕ ಲಾಲಾಜಿ ಆರ್ ಮೆಂಡನ್
ಈ ನಿಟ್ಟಿನಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಲು ಪ್ರೀ ಫ್ಯಾಬ್ರಿಕ್ ಕಾಂಕ್ರೀಟ್ ವ್ಯವಸ್ಥೆ ಅಳವಡಿಸಲು ರೈಲ್ವೇ ಇಲಾಖೆ ಮುಂದಾಗಿತ್ತು. ಬಳಿಕ ಕಾಮಗಾರಿಗೆ ವೇಗ ನೀಡಲಾಗಿದ್ದು, ಸದ್ಯ ಕೊನೆಯ ಹಂತದ ಕಾಮಗಾರಿ ನಡೆಯುತ್ತಿದೆ. ಮಂಗಳೂರು ಜಂಕ್ಷನ್‌ನಿಂದ ತೋಕೂರು ವರೆಗಿನ ಹಳಿ ದ್ವಿಪಥ, ವಿದ್ಯುದ್ಧೀಕರಣ ಕಾಮಗಾರಿ ಉದ್ದೇಶದಿಂದಾಗಿ ಪಚ್ಚನಾಡಿಯಲ್ಲಿನ ಹಳೇ ಸೇತುವೆಯನ್ನು 2 ವರ್ಷಗಳ ಹಿಂದೆ ಯೇ ತೆರವು ಗೊಳಿಸಲಾಗಿತ್ತು. ಹಳೇ ಸೇತುವೆಯ ಪಿಲ್ಲರ್ ಇದ್ದ ಸ್ಥಳದಲ್ಲೇ ರೈಲ್ವೇ ಹೊಸ ಹಳಿ ಸಾಗುವ ಹಿನ್ನೆಲೆಯಲ್ಲಿ ಸೇತುವೆಯನ್ನು ವಿಸ್ತರಿಸುವ ಜತೆಗೆ ಕೊಂಚ ಎತ್ತರಕ್ಕೆ ಏರಿಸಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು.
ಮೇಲ್ಸೇತುವೆ ಕಾಮಗಾರಿ 2018ರ ಜನವರಿ ತಿಂಗಳಿನಲ್ಲಿ ಆರಂಭಗೊಂಡಿತ್ತು. ಈ ರಸ್ತೆಯ ಮುಖೇನ ಪಿಲಿಕುಳ, ಕಟೀಲು, ಮೂಡುಬಿದಿರೆ, ಸುರತ್ಕಲ್, ಪಣಂಬೂರು, ವಾಮಂಜೂರು ಸಹಿತ ಅನೇಕ ಪ್ರದೇಶಗಳ ಸಂಪರ್ಕಕ್ಕೆ ಸಾಧ್ಯವಾಗುತ್ತದೆ. ಸ್ಥಳೀಯ ಮನಪಾ ಸದಸ್ಯೆ ಸಂಗೀತ ನಾಯಕ್ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸದ್ಯ ವೇಗ ನೀಡಲಾಗಿದ್ದು, ಮೇಲ್ಸೇತುವೆಯಿಂದ ರಸ್ತೆ ಸಂಪರ್ಕ ಕಾಂಕ್ರೀಟ್ ಕಾಮಗಾರಿ ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ. ತಾಂತ್ರಿಕ ಕಾರಣದಿಂದಾಗಿ ಕಾಮಗಾರಿ ವಿಳಂಬ ವಾಗಿತ್ತು. ಅ. 10ರಿಂದ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ಬದಲಾ ವಣೆ ಮಾಡಲಾಗುತ್ತದೆ. ಈಗಾಗಲೇ ಪರ್ಯಾಯ ರಸ್ತೆ ಕೂಡ ಮೀಸಲಿರಿಸಿದ್ದು, ಅದರಂತೆ ಬೋಂದೆಲ್ ಜಂಕ್ಷನ್‌ನಿಂದ ಮಂಜಲ್ಪಾದೆಯಾಗಿ ಪಚ್ಚನಾಡಿ ಬ್ರಿಡ್ಜ್ ಸಂಪರ್ಕ ನೀಡಲಾಗುತ್ತದೆ’ ಎನ್ನುತ್ತಾರೆ.
ಕಾಮಗಾರಿಗೆ ವೇಗ
ಪಚ್ಚನಾಡಿ ರೈಲ್ವೇ ಮೇಲ್ಸೇತುವೆ ಈ ಭಾಗದ ಹಲವು ವರ್ಷಗಳ ಬೇಡಿಕೆ. ಕಾಮಗಾರಿಗೆ ಸದ್ಯ ವೇಗ ನೀಡಲಾಗಿದ್ದು, ಕೊನೆಯ ಹಂತದ ಕಾಮಗಾರಿ ನಡೆಯುತ್ತಿದೆ. ಈ ವರ್ಷಾಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುತ್ತದೆ. ರೈಲ್ವೇ ಮೇಲ್ಸೇತುವೆ ಮುಂದುವರೆದ ಕಾಮಗಾರಿಗೆ ಹೆಚ್ಚುವರಿ ಹಣ ಒದಗಿಸಲಾಗುತ್ತದೆ.
– ಡಾ| ಭರತ್ ಶೆಟ್ಟಿ ವೈ., ಶಾಸಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.