ನೀರಿನ ಕೊರತೆ ದೂರ ಮಾಡಿದ ಪೂರ್ವ ಮುಂಗಾರು
Team Udayavani, May 10, 2018, 9:45 AM IST
ಮಹಾನಗರ: ಬೇಸಗೆಯ ಕೊನೆಯಲ್ಲಿ ಪೂರ್ವ ಮುಂಗಾರು ಮಳೆಯಾಗಿ ಬಿಸಿಲ ಬೇಗೆಯನ್ನು ತುಸು ತಣಿಸುವುದು ವಾಡಿಕೆ. ಆದರೆ ಈ ಬಾರಿ ಕರಾವಳಿ ಭಾಗದಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಬೇಸಗೆ ಮಳೆಯಾಗಿದ್ದು, ನೀರಿನ ಕೊರತೆಯನ್ನು ಸ್ವಲ್ಪವಾದರೂ ದೂರ ಮಾಡಿದೆ.
ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, 2018ರ ಜನವರಿ ತಿಂಗಳಿನಿಂದ ಮೇ 8ರ ವರೆಗೆ ದ.ಕ. ಜಿಲ್ಲೆಯ ಐದು ತಾಲೂಕುಗಳಲ್ಲಿ ಒಟ್ಟು 450.2 ಮಿ.ಮೀ. ನಷ್ಟು ವಾಡಿಕೆ ಮಳೆಯಾಗಬೇಕಿತ್ತು. ಆದರೆ ಈ ಅವಧಿಯಲ್ಲಿ ಒಟ್ಟು 634.7 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದು 461.7 ಮಿ.ಮೀ. ಆಗಿತ್ತು. ಉಡುಪಿ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 168.1 ಮಿ.ಮೀ. ಮಳೆಯಾಗಬೇಕಿತ್ತು; 301.3 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದು ಕೇವಲ 59.9 ಮಿ.ಮೀ. ಆಗಿತ್ತು.
ಆದರೂ ಇಳಿಯದ ತಾಪಮಾನ
ಕರಾವಳಿ ಪ್ರದೇಶದಲ್ಲಿ ಮಳೆ ಬಂದರೂ ತಾಪಮಾನದಲ್ಲಿ ಇಳಿಕೆ ಆಗಿಲ್ಲ; ಬದಲಾಗಿ ವಾತಾವರಣದಲ್ಲಿ ತೇವಾಂಶ ಹೆಚ್ಚಿ ಸೆಕೆ ಜಾಸ್ತಿ ಅನುಭವಕ್ಕೆ ಬರುತ್ತಿದೆ. ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಗವಾಸ್ಕರ್ ಅವರು ‘ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿ, ಕರಾವಳಿ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದ ಸಮಯದಲ್ಲಿ ತಾಪಮಾನದಲ್ಲಿ ಹೆಚ್ಚಳವಾಗಲಿದೆ.
ಹಿಂದಿನ ವರ್ಷ ಈ ಸಮಯದಲ್ಲಿ 38 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿತ್ತು. ಆದರೆ ಸದ್ಯ 37 ಡಿಗ್ರಿ ಸೆ. ಇದ್ದು, ಮುಂದಿನ ದಿನಗಳಲ್ಲಿ ಇನ್ನೂ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ತಿಳಿಸಿದ್ದಾರೆ.
ಹವಾಮಾನ ಇಲಾಖೆ ನೀಡಿರುವ ಅಂಕಿಅಂಶದ ಪ್ರಕಾರ ಮಂಗಳೂರು ನಗರದಲ್ಲಿ 1985ರ ಮಾ. 13ರಂದು 39.8 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿತ್ತು. ಇದು ಇಲ್ಲಿಯ ವರೆಗಿನ ದಾಖಲೆ.
ವಾಡಿಕೆಗಿಂತ ಹೆಚ್ಚು ಮಳೆ
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರಾವಳಿ ಪ್ರದೇಶದಲ್ಲಿ ಈ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಸಂಜೆಯ ವೇಳೆಗೆ ಕರಾವಳಿ ಪ್ರದೇಶದ ಅನೇಕ ಕಡೆಗಳಲ್ಲಿ ಮಳೆಯಾಗಲಿದೆ. ಅಲ್ಲದೆ, ಈಗಾಗಲೇ ‘ಸೌತ್ ಏಶಿಯನ್ ಕ್ಲೈಮೆಟ್ ಔಟ್‌ಲುಕ್ ಪೋರಂ’ ಮಾನ್ಸುನ್ ಬಗ್ಗೆ ವರದಿ ನೀಡಿದ್ದು, ಕರಾವಳಿ ಪ್ರದೇಶದಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಹವಾಮಾನ ಇಲಾಖೆ ಮತ್ತೊಂದು ವರದಿಯನ್ನು ಬಿಡುಗಡೆ ಮಾಡಲಿದೆ.
– ಡಾ| ಜಿ.ಎಸ್. ಶ್ರೀನಿವಾಸ ರೆಡ್ಡಿ, ನಿರ್ದೇಶಕ , ಕೆಎಸ್‌ಎನ್‌ಡಿಎಂಸಿ
ಸುಳ್ಯ, ಕಾರ್ಕಳದಲ್ಲಿ ಮಳೆ ಪ್ರಮಾಣ ಹೆಚ್ಚಳ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ತುಲನೆ ಮಾಡಿದರೆ 2018ರ ಜನವರಿಯಿಂದ ಮೇ 8ರ ವರೆಗೆ ಸುಳ್ಯ ತಾಲೂಕಿನಲ್ಲಿ 117.8 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 190.6 ಮಿ.ಮೀ.. ಮಳೆಯಾಗಿದೆ. ಅಂದರೆ, 72.3 ಮಿ.ಮೀ.ನಷ್ಟು ಮಳೆ ಹೆಚ್ಚಳವಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 77.3 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 160.7 ಮಿ.ಮೀ. ಮಳೆಯಾಗಿದೆ. ಒಟ್ಟಾರೆ 83.4 ಮಿ.ಮೀ. ಮಳೆ ಹೆಚ್ಚಳವಾಗಿದೆ.
ಈ ಬಾರಿಯ ಮಾನ್ಸೂನ್ ಕೂಡ ಉತ್ತಮ
ಹವಾಮಾನ ಇಲಾಖೆಯ ನಿರ್ದೇಶಕ ಡಾ| ಶ್ರೀನಿವಾಸ ರೆಡ್ಡಿ ಉದಯವಾಣಿಗೆ ಪ್ರತಿಕ್ರಿಯೆ ನೀಡಿ ‘ಹವಾಮಾನ ಇಲಾಖೆಯ ಲೆಕ್ಕಾಚಾರದ ಪ್ರಕಾರ ಈ ಬಾರಿ ಕರಾವಳಿ ಪ್ರದೇಶದಲ್ಲಿ ಮುಂಗಾರು ಉತ್ತಮವಾಗಲಿದೆ. ಈ ಬಾರಿ ವಾಡಿಕೆಯಂತೆ ಮಳೆಯಾಗಲಿದ್ದು, ಮೇ ಕೊನೆಯ ವಾರ ಅಥವಾ ಜೂನ್ 2ರ ಒಳಗೆ ಮುಂಗಾರು ಕರ್ನಾಟಕದ ಕರಾವಳಿ ಕಡೆಗೆ ಅಪ್ಪಳಿಸಲಿದೆ ಎಂದು ತಿಳಿಸಿದ್ದಾರೆ.
ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.