ಫಲಿತಾಂಶ ಆಡಳಿತ ವಿರೋಧಿ ಅಲೆ; ಮೋದಿ ಅಲೆಯಲ್ಲ : ಉಗ್ರಪ್ಪ
Team Udayavani, Mar 15, 2017, 4:27 PM IST
ಸುರತ್ಕಲ್: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಆಯಾ ರಾಜ್ಯಗಳ ಆಡಳಿತ ವಿರೋಧಿ ಅಲೆ ವಿನಾ ಅದು ಮೋದಿಗೆ ಕೊಟ್ಟ ಜನಾದೇಶ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಹೇಳಿದರು.
ಸುರತ್ಕಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಆಡಳಿತದಲ್ಲಿದ್ದ ಸಮಾಜವಾದಿ ಪಕ್ಷದ ಆಡಳಿತ ವಿರೋಧಿ ಅಲೆಯಲ್ಲಿ ಮೋದಿ ಗೆದ್ದಿದ್ದಾರೆ. ಅದೇ ರೀತಿಯಲ್ಲಿ ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಜನ ಆಯಾ ಸರಕಾರದ ವಿರುದ್ಧ ಮತ ಹಾಕಿದ್ದಾರೆ ಹೊರತು ಬೇರೆ ಏನೂ ಅಲ್ಲ. ಮಣಿಪುರ ಹಾಗೂ ಗೋವಾದಲ್ಲಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಇಲ್ಲಿ ನಾವು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ಮಣಿಪುರ, ಗೋವಾ ರಾಜ್ಯಗಳ ರಾಜ್ಯಪಾಲರನ್ನು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.
ಎಸ್.ಎಂ. ಕೃಷ್ಣ ಸಹಿತ ಕಾಂಗ್ರೆಸ್‌ನ ನಾಯಕರು ಪಕ್ಷ ತೊರೆಯುತ್ತಿರುವುದಕ್ಕೆ ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷವು ಕೃಷ್ಣ ಅವರಿಗೆ ಮುಖ್ಯಮಂತ್ರಿ, ರಾಜ್ಯಪಾಲರ ಸಹಿತ ಹಲವು ಅತ್ಯುನ್ನತ ಹುದ್ದೆ ನೀಡಿದೆ. ಜಯಪ್ರಕಾಶ್ ಹೆಗ್ಡೆ ಸಚಿವರಾಗಿದ್ದರು. ಬಿಜೆಪಿಯನ್ನು, ಅದರ ಕೋಮುವಾದಿ ಧೋರಣೆಯನ್ನು ಟೀಕಿಸಿದವರೇ ಇದೀಗ ಆ ಸಂಸ್ಕೃತಿಯನ್ನು ಅಪ್ಪಿಕೊಂಡಿದ್ದಾರೆ ಎಂದು ಕಿಡಿಕಾರಿದರು. ಶಾಸಕ ಮೊದಿನ್ ಬಾವಾ, ಹೇಮಂತ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.