ವ್ಯಾಪಕವಾಗಿ ಕಾಡುವ ಖನ್ನತೆ ಸಮಸ್ಯೆ


Team Udayavani, Apr 20, 2019, 6:00 AM IST

1604MLR94

ಮಹಾನಗರ: ಕರ್ನಾಟಕ ಸರಕಾರದ ಮಾನಸಧಾರ ಯೋಜನೆ ಯಡಿ ಮಾನಸಿಕ ಅಸ್ವಸ್ಥರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ನಗರದ ಸೇವಾಭಾರತಿ ವತಿಯಿಂದ ಮನೋ ಚೇತನ ಪುನರ್ವಸತಿ ಕೇಂದ್ರ ಉದ್ಘಾಟನೆ ಇತ್ತೀಚೆಗೆ ನಗರದಲ್ಲಿ ನಡೆಯಿತು.

ವಿಶ್ವದಲ್ಲಿ ಶೇ.25-30ರಷ್ಟು ಮಂದಿಗೆ ಮಾನಸಿಕೆ ಕಾಯಿಲೆ
ಮನಃಶಾಸ್ತ್ರಜ್ಞ ಡಾ| ಸತೀಶ್‌ ರಾವ್‌ ಮಾತನಾಡಿ, ಮಾನಸಿಕ ರೋಗ ಅದರಲ್ಲೂ ಮುಖ್ಯವಾಗಿ ಖನ್ನತೆ ಸಮಸ್ಯೆ ವ್ಯಾಪಕವಾಗಿ ಕಾಡುತ್ತಿದೆ. ವಿಶ್ವದಲ್ಲಿ ಶೇ.25ರಿಂದ 30ರಷ್ಟು ಮಂದಿ ವಿವಿಧ ಬಗೆಯ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಇದನ್ನು ನಿಭಾಯಿಸಲು ವಿಶ್ವ ಆರೋಗ್ಯ ಸಂಸ್ಥೆ ಕೂಡ ಮಾನಸಿಕ ರೋಗ ಚಿಕಿತ್ಸೆಗೆ ಜೀವನಶೈಲಿ ರೋಗಗಳ ಚಿಕಿತ್ಸೆಗೆ ನೀಡಿದಷ್ಟೇ ಒತ್ತು ನೀಡುತ್ತಿದೆ. ಮಾನಸಿಕ ರೋಗ ಚಿಕಿತ್ಸೆಯಲ್ಲಿ ಪುನರ್ವಸತಿ ಕೂಡ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಸೇವಾಭಾರತಿಯಂಥ ಸಮರ್ಪಣಾ ಮನೋಭಾವದ ಸ್ವಯಂಸೇವಾ ಸಂಸ್ಥೆಗಳ ಪಾತ್ರ ಮಹತ್ವದ್ದು ಎಂದು ಹೇಳಿದರು.

ಪುನರ್ವಸತಿ ಕೂಡ ಅಗತ್ಯ
ಇತರ ಚಿಕಿತ್ಸೆಗಳಿಗೆ ಹೋಲಿಸಿದರೆ ಮಾನಸಿಕ ಚಿಕಿತ್ಸೆ ದೀರ್ಘಾವಧಿ ಚಿಕಿತ್ಸೆ. ಚಿಕಿತ್ಸೆ ಬಳಿಕ ಪುನರ್ವಸತಿ ಕೂಡ ಅಗತ್ಯ. ಗುಣಮುಖರಾದ ಬಳಿಕ ಮಾನಸಿಕ ರೋಗಿಗಳು ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯುವಂತೆ ಮಾಡಲು ಅವರಿಗೆ ಅಗತ್ಯ ತರಬೇತಿ, ಕೌನ್ಸೆಲಿಂಗ್‌, ಜೀವನ ಕೌಶಲ ತರಬೇತಿ, ವೃತ್ತಿ ಮಾರ್ಗದರ್ಶನದಂಥ ಹಲವು ಸೇವೆಗಳನ್ನು ಈ ಕೇಂದ್ರದಲ್ಲಿ ನೀಡಲಾಗುತ್ತದೆ ಎಂದು ವಿವರಿಸಿದರು.

ಸರಕಾರದ ಯೋಜನೆಯಂತೆ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾನಸಾಧಾರ ಕೇಂದ್ರಗಳನ್ನು ನಿರ್ವಹಿಸಬೇಕು. ಜಿಲ್ಲಾಸ್ಪತ್ರೆಗಳಲ್ಲಿ ಸಾಧ್ಯವಾಗದ ಕಡೆಗಳಲ್ಲಿ ಖಾಸಗಿ ಸಂಘ – ಸಂಸ್ಥೆಗಳಿಗೆ ಇದನ್ನು ನೀಡಲಾಗುತ್ತದೆ. ಈ ಹಿಂದೆ ಕೆ.ಎಸ್‌.ಹೆಗ್ಡೆ ಆಸ್ಪತ್ರೆ ಹಾಗೂ ವೆನಾÉಕ್‌ನಲ್ಲಿ ಇದನ್ನು ನಡೆಸಲಾಗುತ್ತಿತ್ತು. ಆದರೆ ಕಾರಣಾಂತರದಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಮರ್ಪಣಾ ಮನೋಭಾವದ ಸೇವಾಭಾರತಿ ಈ ಕೇಂದ್ರವನ್ನು ನಡೆಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಕೋರಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಭರತ್‌ ಜೈನ್‌ ಮಾತನಾಡಿ, ಮಾನಸಿಕ ರೋಗಿಗಳಿಗೆ ಜೀವನ ಕೌಶಲ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇಂಥ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು.

ಸೇವಾಭಾರತಿ ಕಾರ್ಯದರ್ಶಿ ಎಚ್‌. ನಾಗರಾಜ ಭಟ್‌, ಖಜಾಂಚಿ ಪಿ. ವಿನೋದ್‌ ಶೆಣೈ, ಟ್ರಸ್ಟಿಗಳಾದ ಪ್ರಮೀಳಾ ರಾವ್‌, ಡಾ| ಯು.ವಿ. ಶೆಣೈ, ಡಾ| ಕೆ.ಆರ್‌.ಕಾಮತ್‌, ಗಜಾನನ ಪೈ ಮತ್ತಿತರರು ಉಪಸ್ಥಿತರಿದ್ದರು. ಡಾ| ಸುಮಾ ಕಾಮತ್‌ ನಿರೂಪಿಸಿ, ರಚನಾ ಪ್ರಾರ್ಥಿಸಿದರು.

ಸದುಪಯೋಗಪಡಿಸಿ
ಕೇಂದ್ರವನ್ನು ಉದ್ಘಾಟಿಸಿದ ಸೇವಾಭಾರತಿ ಅಧ್ಯಕ್ಷೆ ಡಾ| ಸುಮತಿ ಶಣೈ ಅವರು ಮಾತನಾಡಿ, ಕೇಂದ್ರ ಮಂಗಳಾದೇವಿ ಸಮೀಪದ ಮಾರ್ನ ಮಿಕಟ್ಟೆಯ ದೇವಿಕಾ ಕಾಂಪೌಂಡ್‌ನ‌ಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳ ಬಹುದಾಗಿದೆ ಎಂದರು.

 

ಟಾಪ್ ನ್ಯೂಸ್

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Navy-Submarin

Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್‌ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.