Mangaluru: ಜ್ಯುವೆಲರಿ ಅಂಗಡಿಯಲ್ಲಿ ಕಳವು ಪ್ರಕರಣ ಬಾಲಕಿಯಿಂದ ಚಿನ್ನಾಭರಣ ವಶ
Team Udayavani, Jun 8, 2024, 10:32 PM IST
ಮಂಗಳೂರು: ಕುಲಶೇಖರದ ಜ್ಯುವೆಲರಿ ಅಂಗಡಿಯೊಂದರಿಂದ ಮೇ 25ರಂದು ಕಳವಾಗಿದ್ದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾನೂನು ಸಂಘರ್ಷಕ್ಕೊಳಗಾದ (ಅಪ್ರಾಪ್ತ ವಯಸ್ಸಿನ) ಬಾಲಕಿಯಿಂದ ಒಟ್ಟು 59 ಗ್ರಾಂ ತೂಕದ 3.50 ಲ.ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಶನಿವಾರ ಬಾಲಕಿಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್ ಮತ್ತು ಬಿ.ಪಿ. ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಎಸಿಪಿ ಪ್ರತಾಪ್ ಸಿಂಗ್ ತೋರಟ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ., ಪಿಎಸ್ಐಗಳಾದ ಮಂಜೇಶ್ವರ ಚಂದಾವರ್, ಪದ್ಮ ದೇವಳ್ಳಿ ಮತ್ತು ಸಿಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.