ಉಗ್ರ ಚಟುವಟಿಕೆ ಸದೆಬಡಿಯದೇ ಇದ್ದರೆ ದೇಶಕ್ಕೆ ಅಪಾಯ: ಪೇಜಾವರ ಶ್ರೀ
Team Udayavani, Sep 23, 2022, 2:17 PM IST
ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಉಗ್ರರ ನಂಟಿನ ಬಗ್ಗೆ ಈ ಹಿಂದೆ ಅನೇಕ ಸಂಶಯಗಳು ಮೂಡಿದ್ದವು. ಅದು ಇಂದು ಮತ್ಯೆ ಸತ್ಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಈ ವಿಷಯದಲ್ಲಿ ತೀವ್ರ ವಿಚಾರಣೆ ನಡೆಸಿ ಯಾವ ಒಬ್ಬ ಉಗ್ರನು ಇಲ್ಲಿ ಉಳಿಯಬಾರದು ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಧರ್ಮಸ್ಥಳದಲ್ಲಿ ಹೇಳಿದರು.
ಇದನ್ನೂ ಓದಿ:ಕೇರಳದಲ್ಲಿ ಹರತಾಳ; ಹಿಂಸಾಚಾರಕ್ಕೆ ತಿರುಗಿದ ಪಿಎಫ್ ಐ ಪ್ರತಿಭಟನೆ, ಕಲ್ಲುತೂರಾಟ; ಹಲವರ ಬಂಧನ
ಶಿವಮೊಗ್ಗ ಹಾಗೂ ಕರಾವಳಿ ಭಾಗದಲ್ಲಿ ಉಗ್ರರ ಸಂಚು ಪತ್ತೆಯಾಗಿದೆ. ಇದನ್ನು ಈ ಮೊದಲೇ ಮಟ್ಟ ಹಾಕಬೇಕಿತ್ತು. ಕೇಂದ್ರ, ರಾಜ್ಯ ಸರಕಾರಗಳು ಈಗಾಗಲೇ ಬಂಧಿಸಿದವರನ್ನು ತೀವ್ರ ವಿಚಾರಣೆ ನಡೆಸಿ, ಇದರ ಮೂಲವನ್ನು ಬೇರು ಸಹಿತ ಕಿತ್ತೊಗೆಯಬೇಕು. ಈ ವಿಚಾರಗಳಿಗೆ ಕೋಮು ಬಣ್ಣಹಚ್ಚುವ ಷಡ್ಯಂತ್ರ ನಡೆಯುತ್ತಿದ್ದು ಇದಕ್ಕೆ ಸರಕಾರ ಅವಕಾಶ ಮಾಡಿಕೊಡಬಾರದು. ದೇಶದಲ್ಲಿ ಸದಾ ಶಾಂತಿ ಸುವ್ಯವಸ್ಥೆ ಇರಬೇಕು ಎಂಬುದೇ ನಮ್ಮ ಆಶಯವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಉಗ್ರಚಟುವಟಿಕೆಗಳಿಗೆ ಅಂತ್ಯ ಹಾಡಬೇಕು ಎಂದು ಅವರು ಆಗ್ರಹಿಸಿದರು.
ಹಿಂದೂ ಸಮಾಜದ ಎಲ್ಲರ ಕೇಂದ್ರಬಿಂದು ಪ್ರಭು ಶ್ರೀರಾಮಚಂದ್ರನ ಮಂದಿರ ಪುನರ್ ನಿರ್ಮಾಣಗೊಳ್ಳುತ್ತಿದ್ದು ಸಂಕ್ರಾಂತಿ ಬಳಿಕ ಬಹುತೇಕ ಕಾಮಗಾರಿಗಳಿಗೆ ವೇಗ ಸಿಗಲಿದೆ. ಭೂಮಿಯಿಂದ ಸುಮಾರು ಮೇಲ್ಭಾಗ ದೇವರ ಪೀಠದ ರಚನೆ ಕಾರ್ಯ ನಡೆದಿದ್ದು ಕಂಬಗಳನ್ನು ನಿಲ್ಲಿಸುವ ಕಾರ್ಯ ಸಾಗುತ್ತಿದೆ. ಬಾಲರಾಮ ದೇವರ ವಿಗ್ರಹವನ್ನು ಅಮೃತ ಶಿಲೆಯಿಂದ ನಿರ್ಮಿಸುವ ವಿಚಾರ ಮುಂದಿದ್ದು ನೀಲಿ ವರ್ಣವೂ ಅದರಲ್ಲಿ ಒಳಗೊಳ್ಳಲಿದೆ. ಇದನ್ನು ಈಗಾಗಲೇ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇದಕ್ಕೆ ಬೇಕಾದ ಶಿಲೆಯ ಶೋಧ ನಡೆಯುತ್ತಿದೆ ಎಂದು ಅಯೋಧ್ಯೆ ಶ್ರೀ ರಾಮಮಂದಿರ ಟ್ರಸ್ಟ್ ಟ್ರಸ್ಟಿ ಉಡುಪಿ ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.