ತಿಂಗಳು ಎಂಟು ಕಳೆದರೂ ಚುನಾಯಿತ ಆಡಳಿತವಿಲ್ಲ
ಪುತ್ತೂರು: ಅಭಿವೃದ್ಧಿ ಕೆಲಸ-ಕಾರ್ಯಗಳಿಗೆ ತೊಡಕು
Team Udayavani, May 4, 2019, 5:00 AM IST
ಪುತ್ತೂರು: ನಗರ ಸ್ಥಳೀಯ ಸಂಸ್ಥೆಗಳ ದ್ವಿತೀಯ ಹಂತದ ಚುನಾವಣೆಗೆ ದಿನ ನಿಗದಿಯಾಗಿದೆ. ಆದರೆ ಇಲ್ಲಿ 8 ತಿಂಗಳ ಹಿಂದೆ ಚುನಾವಣೆ ನಡೆದ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಇನ್ನೂ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬಂದಿಲ್ಲ.
ರಾಜ್ಯದಲ್ಲಿ 2018ರ ಆ. 31ರಂದು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಡೆದಿತ್ತು. ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಂಡು 8 ತಿಂಗಳು ಕಳೆದರೂ ಇನ್ನೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಜನಪ್ರತಿನಿಧಿಗಳ ಆಡಳಿತ ರಚನೆಯಾಗದೇ ಇರುವ ಮೂಲಕ ಜನರ ಆಯ್ಕೆಯ ಆಡಳಿತಕ್ಕೆ ಕಾಲ ಕೂಡಿ ಬಂದಿಲ್ಲ. ಅನಿವಾರ್ಯವಾಗಿ ನಗರದ ಜನರು ಅಧಿಕಾರಿಗಳ ಆಡಳಿತದಲ್ಲೇ ಕಾಲ ಕಳೆಯಬೇಕಾಗಿದೆ. ಇದು ಅಭಿವೃದ್ಧಿ ಕೆಲಸಗಳಿಗೂ ತೊಡಕಾಗಿ ಪರಿಣಮಿಸಿದೆ.
ಬಿಜೆಪಿಗೆ ಭರ್ಜರಿ ಬಹುಮತ
ಪುತ್ತೂರು ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿ 25 ವಾರ್ಡ್‌ಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 5 ಮತ್ತು ಎಸ್‌ಡಿಪಿಐ 1 ಸ್ಥಾನ ಸಂಪಾದಿಸಿತ್ತು. ಹಿಂದಿನ 5 ವರ್ಷಗಳಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಚುನಾವಣೆಯ ಬಳಿಕ ಅಧಿಕಾರ ಕಳೆದುಕೊಂಡಿತ್ತು. ಸದ್ಯ ಗೆದ್ದರೂ ಆಡಳಿತ ತೆಕ್ಕೆಯನ್ನು ಸಂಪೂರ್ಣ ಬಾಚಿಕೊಳ್ಳಲು ಸಾಧ್ಯವಾಗದ ಸ್ಥಿತಿ ಬಿಜೆಪಿಯದ್ದು.
ಆಡಳಿತಾಧಿಕಾರಿ ಕಾರ್ಯ
ನಗರಸಭೆಗಳಲ್ಲಿ ಜಿಲ್ಲಾಧಿಕಾರಿ ಆಡಳಿತಾಧಿಕಾರಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಪುರಸಭೆಗಳಲ್ಲಿ ಸಹಾಯಕ ಕಮಿಷನರ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಆಡಳಿತದ ಜತೆಗೆ ವಾರ್ಷಿಕ ಮುಂಗಡಪತ್ರ ಮಂಡನೆಯೂ ಅಧಿಕಾರಿಗಳ ನೇತೃತ್ವದಲ್ಲೇ ನಡೆದಿದೆ. ಜನಪ್ರತಿನಿಧಿ ಆಡಳಿತ ಇನ್ನೂ ಬಾರದೇ ಇರುವ ಕುರಿತು ಸಾರ್ವಜನಿಕ ವಲಯದಿಂದ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರಸ್ತುತ ಮೇ 29ರಂದು ಎರಡನೇ ಹಂತದ ನಗರ ಸ್ಥಳೀಯಾಡಳಿತದ ಚುನಾವಣೆ ನಡೆಯಲಿದ್ದು, ಈ ಚುನಾವಣೆ ಮುಗಿದ ಮೇಲೆ ಎರಡೂ ಹಂತಕ್ಕೂಜನಪ್ರತಿನಿಧಿ ಆಡಳಿತ ಬರಬಹುದು ಎನ್ನುವ ನಿರೀಕ್ಷೆ ಇದೆ.
ಕಾರಣ ಏನು ?
ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ಮೀಸಲಾತಿ ಪಟ್ಟಿಯೂ ಘೋಷಣೆಯಾಗಿತ್ತು. ಅದರಂತೆ ಪುತ್ತೂರಿನಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ 2ಎ, ಉಪಾಧ್ಯಕ್ಷತೆಯು ಪರಿಶಿಷ್ಟ ಪಂಗಡ ಮಹಿಳೆಗೆ ನಿಗದಿಯಾಗಿತ್ತು. ಬೆಳ್ತಂಗಡಿಯಲ್ಲೂ ಮೀಸಲಾತಿ ಪಟ್ಟಿ ಪ್ರಕಟವಾಗಿತ್ತು. ಬಂಟ್ವಾಳದಲ್ಲಿ ಅಧ್ಯಕ್ಷತೆ ಮತ್ತು ಉಪಾಧ್ಯಕ್ಷತೆ ಮೀಸಲಾತಿ ಎರಡು ಬಾರಿ ಪ್ರಕಟವಾದ ಕಾರಣ ವಿವಾದವೂ ಉಂಟಾಗಿತ್ತು. ಇದೇ ಮೀಸಲು ವಿಚಾರದಲ್ಲಿ ಅಸಮಾಧಾನ ವ್ಯಕ್ತವಾಗಿ ಪ್ರಕರಣ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಕಾರಣ ಆಡಳಿತ ವ್ಯವಸ್ಥೆ ಜಾರಿಗೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.