ಕೋಡಿಂಬಾಳ ರೈಲು ನಿಲಾಣದಲ್ಲಿ ಸೌಕರ್ಯವಿಲ್ಲ 


Team Udayavani, Mar 20, 2019, 5:16 AM IST

20-march-3.jpg

ಕಡಬ: ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯ ರಸ್ತೆ ಮತ್ತು ಕಬಕ ಪುತ್ತೂರು ರೈಲು ನಿಲ್ದಾಣಗಳ ನಡುವೆ ಕಡಬದ ಕೋಡಿಂಬಾಳವೇ ಪ್ರಮುಖ ರೈಲು ನಿಲ್ದಾಣ. ಇದು ತಾಲೂಕು ಕೇಂದ್ರ ಕಡಬದಿಂದ ಕೇವಲ 2 ಕಿ.ಮೀ. ದೂರದಲ್ಲಿದೆ. ಇಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಈ ರೈಲು ಮಾರ್ಗದ ಮೂಲಕ ಹಾದು ಹೋಗುವ ಎಕ್ಸ್‌ಪ್ರೆಸ್‌ ರೈಲು ಬಂಡಿಗಳ ನಿಲುಗಡೆಯ ಬೇಡಿಕೆ ಈವರೆಗೂ ಈಡೇರಿಲ್ಲ.

ಬಲ್ಯ ಗ್ರಾಮದ ಸಂಪಡ್ಕ ದಿಲೀಪ್‌ ಕುಮಾರ್‌ ಅವರು ಆರ್‌ಟಿಐ ಅಡಿಯಲ್ಲಿ ಕೋಡಿಂಬಾಳ ರೈಲು ನಿಲ್ದಾಣದಲ್ಲಿ ಎಕ್ಸ್‌ ಪ್ರಸ್‌ ರೈಲುಗಳಿಗೆ ನಿಲುಗಡೆ ಇಲ್ಲದಿರುವ ಬಗ್ಗೆ ಮಾಹಿತಿ ಬಯಸಿದಾಗ ಮೈಸೂರು ವಿಭಾಗದ ರೈಲ್ವೆ ಅಧಿಕಾರಿಗಳು ಕೋಡಿಂಬಾಳ ‘ಎಫ್‌’ ಕೆಟಗರಿ ರೈಲು ನಿಲ್ದಾಣವಾಗಿದ್ದು, ಲೋಕಲ್‌ ರೈಲು ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಈ ನಿಲ್ದಾಣದಲ್ಲಿ ಟಿಕೆಟ್‌ ಕೊಳ್ಳುವವರ ಸಂಖ್ಯೆ ಕಡಿಮೆ ಇರುವುದರಿಂದ, ಇಲಾಖೆಯ ಮುಂದೆ ಕೋಡಿಂಬಾಳ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್‌ ರೈಲುಗಳಿಗೆ ನಿಲುಗಡೆ ನೀಡುವ ಪ್ರಸ್ತಾವ ಇರುವುದಿಲ್ಲ ಎನ್ನುವ ಉತ್ತರ ಸಿಕ್ಕಿದೆ.

ಸಾಧ್ಯವಿಲ್ಲ ಎನ್ನುತ್ತಾರೆ ಅಧಿಕಾರಿಗಳು
ಕೇವಲ ಒಂದು ಲೋಕಲ್‌ ರೈಲು ಸಂಚರಿಸುವುದರಿಂದ ಸಹಜವಾಗಿ ಇಲ್ಲಿ ಟಿಕೆಟ್‌ ಕೊಳ್ಳುವವರ ಸಂಖ್ಯೆಯೂ ಕಡಿಮೆ ಇರುತ್ತದೆ. ಈ ಲೋಕಲ್‌ ರೈಲಿಗೆ ಕೋಡಿಂಬಾಳದಿಂದ ಸುಬ್ರಹ್ಮಣ್ಯ ದವರೆಗೆ ಒಂದು ನಿಲುಗಡೆ ಮಾತ್ರ ಇರುತ್ತದೆ. ಈ ರೈಲು ದಿನಕ್ಕೆ ಒಂದು ಬಾರಿ ಮಾತ್ರ ಈ ಮಾರ್ಗದಲ್ಲಿ ಮಂಗಳೂರು ವರೆಗೆ ಸಂಚರಿಸುತ್ತದೆ. ಎಕ್ಸ್‌ಪ್ರೆಸ್‌ ರೈಲುಗಳಿಗೆ ನಿಲುಗಡೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಪ್ರಧಾನ ಮಂತ್ರಿ ಅವರಿಗೂ ದಿಲೀಪ್‌ ಕುಮಾರ್‌ ಸಂಪಡ್ಕ ಮನವಿ ಮಾಡಿದ್ದರು. ಪ್ರಧಾನಿ ಕಾರ್ಯಾಲಯದಿಂದ ರೈಲ್ವೇ ಅಧಿಕಾರಿಗಳಿಗೆ ಈ ಕುರಿತು ಸೂಚನೆ ಹೋಗಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ರೈಲ್ವೆ ಇಲಾಖೆಯ ಅಧಿಕಾರಿಗಳು, ಒಂದು ಮನವಿ ಮಾತ್ರ ಬಂದಿರುವುದರಿಂದ ಮನವಿಗೆ ಸ್ಪಂದಿಸಲು ಸಾಧ್ಯವಿಲ್ಲ ಎನ್ನುವ ಉತ್ತರ ನೀಡಿದ್ದಾರೆ. ಅವರು ಸ್ಥಳೀಯ ಸಂಸದರು, ಜಿಲ್ಲೆಯ ಎಲ್ಲ ಶಾಸಕರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ.

ಪರಿಸರದ ಜನರಿಗೆ ಅನುಕೂಲ
ಕೋಡಿಂಬಾಳ ರೈಲು ನಿಲ್ದಾಣ ತಾಲೂಕು ಕೇಂದ್ರ ಕಡಬಕ್ಕೆ ಸನಿಹ ದಲ್ಲಿರುವುದರಿಂದ ಈ ರೈಲು ನಿಲ್ದಾಣ ಮೇಲ್ದರ್ಜೆಗೇರಿದರೆ ಜನರಿಗೆ ಅನು ಕೂಲವಾಗಲಿದೆ. ಕಡಬ ಮಾತ್ರವಲ್ಲದೆ ಹತ್ತಿರದ ಸುಳ್ಯ ತಾಲೂಕಿನ ಪಂಜ, ಬಳ್ಪ ಮೊದಲಾದ ಪ್ರದೇಶಗಳಿಗೂ ಈ ರೈಲು ನಿಲ್ದಾಣ ತುಂಬಾ ಹತ್ತಿರ. ಆದರೆ ಇಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಗೇಜ್‌ ಪರಿವರ್ತನೆಯ ಬಳಿಕ ಲೋಕಲ್‌ ರೈಲು ಮಾತ್ರ ಇಲ್ಲಿ ನಿಲುಗಡೆಯಾಗುತ್ತಿದೆ. ಬೆಂಗಳೂರು ರೈಲು ಹಿಡಿಯಬೇಕಾದರೆ ನೆಟ್ಟಣ (ಸುಬ್ರಹ್ಮಣ್ಯ ರಸ್ತೆ) ರೈಲು ನಿಲ್ದಾಣಕ್ಕೆ ಹೋಗಬೇಕು. ಹಿಂದೆ ಬೆಂಗಳೂರು-ಮಂಗಳೂರು ರೈಲು ಇಲ್ಲಿ ನಿಲುಗಡೆ ಇತ್ತು. ಈ ಸಂದರ್ಭ ದೊಡ್ಡ ಸಂಖ್ಯೆಯ ಪ್ರಯಾಣಿಕರು ಆ ವ್ಯವಸ್ಥೆಯ ಪ್ರಯೋಜನ ಪಡೆಯಲು ಸಾಧ್ಯವಾಗಿತ್ತು. 

ಜನರೇ ಮುಂದಾಗಬೇಕು
ರೈಲ್ವೇ ಇಲಾಖೆ ಇಲ್ಲಿ ಯಾವುದೇ ಸೌಲಭ್ಯಗಳನ್ನು ನೀಡುವ ಲಕ್ಷಣಗಳು ಕಾಣಿಸುತ್ತಿಲ್ಲ. ಆದುದರಿಂದ ಸಾರ್ವಜನಿಕರೇ ಈ ಸೌಲಭ್ಯಗಳನ್ನು ಒದಗಿಸಿ ಇಲ್ಲಿ ಎಕ್ಸ್‌ಪ್ರೆಸ್‌ ರೈಲುಗಳಿಗೆ ನಿಲುಗಡೆ ನೀಡಲು ವ್ಯವಸ್ಥೆ ಮಾಡಲು ಮನವಿ ಮಾಡಬೇಕಾಗಿದೆ. ಹರಿಯಾಣದ ತಾಜ್‌ನಗರ ರೈಲು ನಿಲ್ದಾಣದಲ್ಲಿಯೂ ಇದೇ ಸಮಸ್ಯೆ ಇದ್ದಾಗ ಅಲ್ಲಿನ ಜನರು ಜತೆಗೂಡಿ 21 ಲಕ್ಷ ರೂ. ವ್ಯಯಿಸಿ ರೈಲು ನಿಲ್ದಾಣಕ್ಕೆ ಸೌಕರ್ಯಗಳನ್ನು ಕಲ್ಪಿಸಿದ್ದರು. ಇದು ಭಾರತದಲ್ಲಿ ರೈಲ್ವೆ ಇಲಾಖೆಯಿಂದ ಅನುದಾನ ಪಡೆಯದೇ ಸಾರ್ವಜನಿಕರೇ ಸೌಲಭ್ಯ ನೀಡಿದ ಮೊದಲ ರೈಲು ನಿಲ್ದಾಣವಾಗಿದೆ.

ಆಂಧ್ರಪ್ರದೇಶದ ಶಂಕಪುರ ರೈಲು ನಿಲ್ದಾಣ, ರಾಜಸ್ಥಾನದ ರಾಷಿದ್‌ಪುರು ಕೋರಿ, ಬಲವಂತ್‌ಪುರ್‌ ಚಲಸಿ ಮತ್ತು ಹರಿಯಾಣದ ಲಕನ್‌ ಮರ್ಜ ರೈಲು ನಿಲ್ದಾಣಗಳು ಸಾರ್ವಜನಿಕರ ದೇಣಿಗೆಯಿಂದ ಸವಲತ್ತು ಪಡೆದು ರೈಲು ನಿಲುಗಡೆ ಪಡೆಯುವುದರಲ್ಲಿ ಯಶಸ್ವಿಯಾಗಿವೆ. ಕೋಡಿಂಬಾಳ ಪರಿಸರದ ಜನರು ಕೂಡ ಈ ನಿಟ್ಟಿನಲ್ಲಿ ಮನಸ್ಸು ಮಾಡಿದರೆ ಯಶಸ್ಸು ಖಂಡಿತ ಎಂದು ಸಾಮಾಜಿಕ ಕಾರ್ಯಕರ್ತ ದಿಲೀಪ್‌ಕುಮಾರ್‌ ಸಂಪಡ್ಕ ಹೇಳಿದ್ದಾರೆ.

ರೈಲು ನಿಲ್ದಾಣದಲ್ಲಿ ಮೂಲ ಸೌಕರ್ಯಗಳಿಲ್ಲ 
ಕೋಡಿಂಬಾಳದಲ್ಲಿ ಈಗ ಇರುವ ರೈಲು ನಿಲ್ದಾಣದಲ್ಲಿ ಯಾವುದೇ ಸೌಕರ್ಯಗಳಿಲ್ಲ. ಪ್ಲಾಟ್‌ಫಾರಂ ನಿರ್ಮಾಣವೂ ಸಮರ್ಪಕವಾಗಿಲ್ಲ. ರೈಲು ಬಂಡಿಯ ಬಾಗಿಲು ಮತ್ತು ಪ್ಲಾಟ್‌ಫಾರಂ ನಡುವೆ ಇರುವ ದೊಡ್ಡ ಅಂತರದಿಂದಾಗಿ ಇಲ್ಲಿ ಪುರುಷ ಪ್ರಯಾಣಿಕರೇ ರೈಲು ಏರಲು ಹರಸಾಹಸ ಪಡಬೇಕು. ವೃದ್ಧರು, ಮಕ್ಕಳು ಹಾಗೂ ಮಹಿಳಾ ಪ್ರಯಾಣಿಕರ ಪಾಡಂತೂ ಹೇಳತೀರದು. ಪ್ಲಾಟ್‌ಫಾರಂ ಎತ್ತರಿಸಿ ಎಂದು ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು
ಕೋಡಿಂಬಾಳ ರೈಲು ನಿಲ್ದಾಣ ಮೇಲ್ದರ್ಜೆಗೇರಬೇಕು. ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆಯಾಗಬೇಕು. ಲೋಕಲ್‌ ರೈಲುಗಳ ಓಡಾಟವನ್ನು ಹೆಚ್ಚಿಸಬೇಕು ಮೊದಲಾದ ಬೇಡಿಕೆಗಳೊಂದಿಗೆ ಇಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರೂ, ಹೋರಾಟಗಾರರ ಮೇಲೆ ಕೇಸು ದಾಖಲಾಗಿರುವುದು ಬಿಟ್ಟರೆ ಬೇರೇನೂ ಪ್ರಯೋಜನವಾಗಿಲ್ಲ. ರೈಲ್ವೇ ಅಧಿಕಾರಿಗಳ ವಿರುದ್ಧ ಇಲ್ಲಿನ ಜನರು ದಂಗೆ ಏಳುವ ಮುನ್ನ ಅವರು ಜನರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು.
-ಸಯ್ಯದ್‌ ಮೀರಾ ಸಾಹೇಬ್‌
ಸಂಚಾಲಕರು, ರೈಲು ನಿಲ್ದಾಣ
ಅಭಿವೃದ್ಧಿ ಹೋರಾಟ ಸಮಿತಿ

 ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.