ಕರಾವಳಿ ಜಿಲ್ಲೆಯಲ್ಲಿ ಪ್ರತ್ಯೌಷಧ ಕೊರತೆಯಿಲ್ಲ
ರೇಬಿಸ್, ಹಾವು ಕಡಿತ
Team Udayavani, Jul 23, 2019, 5:40 AM IST
ಸಾಂದರ್ಭಿಕ ಚಿತ್ರ.
ಮಂಗಳೂರು/ ಉಡುಪಿ: ರಾಜ್ಯಾದ್ಯಂತ ರೇಬೀಸ್ ರೋಗ ಮತ್ತು ವಿಷದ ಹಾವು ಕಡಿತಕ್ಕೆ ಪ್ರತ್ಯೌಷಧ ಕೊರತೆ ಇದ್ದರೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೇಬಿಸ್ ಔಷಧಕ್ಕೆ ಕೊರತೆ ಇಲ್ಲ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ತಿಳಿಸಿದ್ದಾರೆ. ಎಲ್ಲ ಪ್ರಾಥಮಿಕ ಕೇಂದ್ರಗಳಲ್ಲಿ ಕೂಡ ಆಯಾ ಕೇಂದ್ರದ ವೈದ್ಯಾಧಿಕಾರಿಗಳೇ ನೇರವಾಗಿ ಔಷಧಗಳನ್ನು ಖರೀದಿಸಲು ಅವಕಾಶವಿರುವುದರಿಂದ ಸಂಗ್ರಹ ಖಾಲಿಯಾದ ತತ್‌ಕ್ಷಣ ಖರೀದಿ ಮಾಡುತ್ತಾರೆ. ವಿಷ ನಿರೋಧಕ ಔಷಧದಲಭ್ಯತೆಯೂ ಜಿಲ್ಲೆಯಲ್ಲಿ ಇದೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ನಾಯಿ ಕಡಿತಕ್ಕೆ ನೀಡುವ ರೇಬಿಸ್ ವ್ಯಾಕ್ಸಿನ್ ಕೊರತೆಯಿಲ್ಲ, ಸುಮಾರು 1,300 ಮಂದಿಗೆ ಸಾಕಾಗುವಷ್ಟು ಔಷಧ ಸಂಗ್ರಹವಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಜಿ. ರಾಮ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ರೇಬಿಸ್ ವ್ಯಾಕ್ಸಿನ್ ಔಷಧವನ್ನು ಸರಕಾರಿ ಔಷಧಾಲಯ ಮತ್ತು ಸ್ಥಳೀಯವಾಗಿ ಖರೀದಿಸಲಾಗಿದೆ. ಸದ್ಯಕ್ಕೆ ಹಾವು ಕಡಿತಕ್ಕೆ ನೀಡುವ ಔಷಧದ ಕೊರತೆಯೂ ಇಲ್ಲ ಎಂದು ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.