State Govt; ಸೆ.19ರ ಗಣೇಶ ಹಬ್ಬಕ್ಕೆ ಸಾರ್ವತ್ರಿಕ “ರಜೆ’ ಇಲ್ಲ !
ಗಣೇಶ ಹಬ್ಬಕ್ಕೆ ಎದುರಾದ ರಜೆಯ ಗೊಂದಲ
Team Udayavani, Sep 10, 2023, 11:00 PM IST
ಮಂಗಳೂರು: ಈ ಬಾರಿ ಶ್ರೀ ಗಣೇಶ ಚತುರ್ಥಿ ಆಚರಿಸುವ ಸೆ.19ರಂದು ಸಾರ್ವತ್ರಿಕ ರಜೆ ಇಲ್ಲ; ಬದಲಾಗಿ ಒಂದು ದಿನ ಮೊದಲೇ ರಜೆ ಇರುತ್ತದೆ!
ಸೆ. 19ರಂದು ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆ ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್‌ನಲ್ಲಿ ಉಲ್ಲೇಖವಾಗಿದೆ. ಹೀಗಾಗಿ, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಾವಳಿ ಭಾಗದಲ್ಲಿ ಹಲವರಿಂದ ಆಕ್ಷೇಪಕ್ಕೂ ಕಾರಣವಾಗಿದೆ.
ರಾಜ್ಯ ಸರಕಾರ ಪ್ರಕಟಿಸಿದ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ.18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ.
ಪಂಚಾಂಗ ಪ್ರಕಾರ ಸೆ.18ರಂದು ಗೌರಿ ತದಿಗೆ. ಗಣೇಶ ಚತುರ್ಥಿ ಸೆ.19ರಂದು ಇದೆ. ಕರಾವಳಿ ಭಾಗದಲ್ಲಿಯೂ ಗಣೇಶ ಹಬ್ಬ ಸೆ.19ರಂದು ನಡೆಯುವ ಕಾರಣದಿಂದ ರಜೆಯ ವಿಚಾರ ಇದೀಗ ಗೊಂದಲಕ್ಕೆ ಕಾರಣವಾಗಿದೆ. ದ.ಕ. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರು ಈಗಾಗಲೇ ಶಾಲಾಡಳಿತವನ್ನು ಸಂಪರ್ಕಿಸಿ ಗಣೇಶ ಚತುರ್ಥಿ ರಜೆ ಸೆ.19ರಂದೇ ನೀಡುವಂತೆ ಕೋರಿದ್ದಾರೆ. ಆದರೆ “ಸಾರ್ವತ್ರಿಕ ರಜೆ ಬದಲಾವಣೆ ಬಗ್ಗೆ ಸರಕಾರವೇ ತೀರ್ಮಾನ ಮಾಡಬೇಕಾಗುತ್ತದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಾಸಕ ವೇದವ್ಯಾಸ ಕಾಮತ್ ಅವರು “ಉದಯವಾಣಿ’ ಜತೆ ಪ್ರತಿಕ್ರಿಯಿಸಿ “ಕರಾವಳಿಯಲ್ಲಿ ಸೆ.19ಕ್ಕೆ ಗಣೇಶ ಹಬ್ಬ ಇರುವುದು. ಆದರೆ ರಜೆ ಕೊಟ್ಟಿರುವುದು ಸೆ.18ಕ್ಕೆ. ಹೀಗಾಗಿ ಹಬ್ಬ ಆಚರಣೆಗೆ ಕರಾವಳಿ ಭಾಗದಲ್ಲಿ ಸಮಸ್ಯೆ ಆಗಲಿದೆ. ಈ ಬಗ್ಗೆ ಸರಕಾರ ಕರಾವಳಿ ಭಾಗದ ಪ್ರಮುಖರಿಂದ ಮಾಹಿತಿ ಪಡೆದು ಹಬ್ಬ ಆಚರಣೆಯ ವಿವರ ತಿಳಿದು ದಿನಾಂಕ ಬದಲಾವಣೆ ಮಾಡಬೇಕು. ಇಲ್ಲವಾದರೆ, ಕರಾವಳಿಗೆ ಪ್ರತ್ಯೇಕವಾಗಿ ಗಣೇಶ ಹಬ್ಬದ ಕಾರಣಕ್ಕಾಗಿ ಸೆ.19ರಂದು ರಜೆ ನೀಡಲು ಸರಕಾರವು ಜಿಲ್ಲಾಡಳಿತಕ್ಕೆ ಸೂಚಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.