ಹೊಸಮಠ ರಸ್ತೆ: ಈ ವರ್ಷವೂ ತಪ್ಪಿಲ್ಲ ಮುಳುಗಡೆ ಭೀತಿ


Team Udayavani, Apr 13, 2018, 12:49 PM IST

13-April-11.jpg

ಕಡಬ: ತಾಲೂಕು ಕೇಂದ್ರವಾಗಿರುವ ಕಡಬವನ್ನು ಮಳೆಗಾಲದಲ್ಲಿ ಸಂಪರ್ಕಿಸಲು ಪ್ರಮುಖ ತೊಡಕಾಗಿರುವ ಹೊಸಮಠದ ಮುಳುಗು ಸೇತುವೆಯ ಪಕ್ಕ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿದಿದೆ. ಆದರೆ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವುದು ತಡವಾದ ಕಾರಣ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಸಾರ್ವಜನಿಕರಿಗೆ ಈ ಮಳೆಗಾಲದಲ್ಲಿಯೂ ಹೊಸಮಠ ಮುಳುಗು ಸೇತುವೆಯ ಭೀತಿ ತಪ್ಪಿಲ್ಲ.

ಎಲ್ಲವೂ ಅಂದುಕೊಂಡಂತೆಯೇ ನಡೆದಿದ್ದರೆ ಸೇತುವೆಯ ಇಕ್ಕೆಲಗಳ ಸಂಪರ್ಕ ರಸ್ತೆಯ ಕಾಮಗಾರಿಯೂ ಪೂರ್ತಿಯಾಗಿ 2 ವರ್ಷಗಳ ಹಿಂದೆಯೇ ಮಳೆಗಾಲದಲ್ಲಿ ಮುಳುಗಡೆಯ ಭೀತಿ ಇಲ್ಲದೆ ಹೊಸ ಸೇತುವೆಯ ಮೇಲೆ ವಾಹನಗಳು ಸಂಚರಿಸಬಹುದಾಗಿತ್ತು. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ, ಜನರ ಅಸಹಕಾರ ಪ್ರವೃತ್ತಿಯ ಕಾರಣದಿಂದಾಗಿ ಸೇತುವೆಯ ಉಪಯೋಗಕ್ಕೆ ಕಾಲ ಕೂಡಿ ಬಂದಿಲ್ಲ.

7.50 ಕೋಟಿ ರೂ. ಅನುದಾನ
ಹೊಸಮಠದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ 7.50 ಕೋಟಿ ರೂ. ಬಿಡುಗಡೆಯಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್‌) ಅಡಿಯಲ್ಲಿ ಅನುದಾನ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ. ಈಗ ಇರುವ ಸೇತುವೆಗಿಂತ ಎತ್ತರದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ. 125 ಮೀ. ಉದ್ದ ಹಾಗೂ 12 ಮೀ. ಅಗಲದಲ್ಲಿ ತಡೆಬೇಲಿಯನ್ನೊಳಗೊಂಡ 6 ಪಿಲ್ಲರ್‌ಗಳ ಸುಂದರ ಸೇತುವೆ ನಿರ್ಮಾಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ತೆರೆದುಕೊಳ್ಳಲಿದೆ. ಪ್ರಸ್ತುತ ಇರುವ ಸೇತುವೆಯನ್ನು ಹಾಗೆಯೇ ಉಳಿಸಿಕೊಂಡು ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ.

ಮಳೆಗಾಲಕ್ಕೆ ಮೊದಲು ಮುಕ್ತಾಯ
ಸೇತುವೆಯ ಎರಡೂ ಕಡೆಗಳಲ್ಲಿ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ ಒಟ್ಟು 45 ಸೆಂಟ್ಸ್‌ ಖಾಸಗಿ ಭೂಮಿಯನ್ನು
ಸ್ವಾಧೀನಪಡಿಸಿಕೊಳ್ಳಲು ಈ ಹಿಂದೆ ಗುರುತಿಸಲಾಗಿತ್ತು. ಇದೀಗ ಅದನ್ನು ಕಡಿತಗೊಳಿಸಿ ಕಡಬ ದಿಕ್ಕಿನಲ್ಲಿ ಮಾತ್ರ
21.50 ಸೆಂಟ್ಸ್‌ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸರಕಾರವು ಭೂ ಮಾಲಕರಿಗೆ ಮೌಲ್ಯ ನೀಡಿ ಭೂಮಿ ಖರೀದಿ ಮಾಡಿದೆ. ಭೂ ಸ್ವಾಧೀನಕ್ಕೆ ಸಂಬಂಧಿಸಿದ ಕಡತವು ಇದೀಗ ನಮ್ಮ ಬೆಂಗಳೂರು ಕಚೇರಿಗೆ ತಲುಪಿದ್ದು, ಸ್ಥಗಿತಗೊಂಡಿದ್ದ ಕಾಮಗಾರಿ ಗುರುವಾರ (ಎ. 12 ) ಪುನರಾರಂಭಗೊಂಡಿದೆ. ಮಳೆಗಾಲ ಆರಂಭವಾಗುವ ಮೊದಲು ಮೇ ತಿಂಗಳ ಕೊನೆಯೊಳಗೆ ಸಂಪರ್ಕ ರಸ್ತೆಯ ಕಾಮಗಾರಿ ಪೂರ್ತಿಗೊಳಿಸಿ ಸೇತುವೆಯನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡುವ ಪ್ರಯತ್ನದಲ್ಲಿದ್ದೇವೆ.
ಪುಟ್ಟಸ್ವಾಮಿ,
ಎಇಇ, ಕೆಆರ್‌ಡಿಸಿಎಲ್‌ ಹಾಸನ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.