ತೊಕ್ಕೊಟ್ಟು : ಕೆಟ್ಟು ನಿಂತ ಬಸ್ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ66 ಅವೈಜ್ಞಾನಿಕ ಕಾಮಗಾರಿಗೆ ಪರದಾಡಿದ ಪ್ರಯಾಣಿಕರು
Team Udayavani, Aug 19, 2019, 9:01 PM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಜಂಕ್ಷನ್ ಸಂಪರ್ಕಿಸುವ ಸಹರಾ ಆಸ್ಪತ್ರೆ ಬಳಿ ಬಸ್ಸೊಂದು ನಡು ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡೆತಡೆಯಾಗಿದ್ದು ಬಳಿಕ ಸ್ಥಳೀಯರು ಸೇರಿ ಬಸ್ಸನ್ನು ಸ್ವಲ್ಪ ದೂರ ದೂಡಿ ಬೇರೆ ವಾಹನಗಳಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಿದರೂ ಇಕ್ಕಟ್ಟಿನ ರಸ್ತೆಯಲ್ಲಿ ಪ್ರಯಾಸದಲ್ಲಿ ಘನ ವಾಹನಗಳು ಸಂಚರಿಸುವ ಸ್ಥಿತಿ ನಿರ್ಮಾಣವಾಯಿತು. ಹೆದ್ದಾರಿಯ ಅವೈಜ್ಞಾನಿಕ ರಸ್ತೆ ಸಮಸ್ಯೆಯಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.
ಕಲ್ಲಾಪಿನಿಂದ ತೊಕ್ಕೊಟ್ಟು ಜಂಕ್ಷನ್ ಸಂಪರ್ಕಿಸುವ ರಸ್ತೆ ಅತ್ಯಂತ ಕಿರಿದಾಗಿದ್ದು ಏಕಮುಖ ಸಂಚಾರದಿಂದ ಸಮಸ್ಯೆ ಎದುರಾಗಿರಲಿಲ್ಲ. ಆದರೆ ಸೋಮವಾರ ರಾತ್ರಿ ಮಂಗಳೂರಿನಿಂದ ಇನೋಳಿ ಕಡೆ ಸಂಚರಿಸುವ ಖಾಸಗಿ ಬಸ್ ತಾಂತ್ರಿಕ ತೊಂದರೆಯಿಂದ ರಸ್ತೆ ನಡುವೆ ಕೆಟ್ಟು ನಿಂತ ಪರಿಣಾಮ ತೊಕ್ಕೊಟ್ಟು ಕಡೆ ಸಂಚರಿಸುವ ಎಲ್ಲಾ ವಾಹನಗಳಿಗೆ ತಡೆಯಾಗಿದೆ. ಸುಮಾರು ಒಂದು ಗಂಟೆ ಸ್ಥಳೀಯರು ಕೆಟ್ಟು ನಿಂತ ಬಸ್ಸನ್ನು ಮುಂದೆ ದೂಡಿದ ಬಳಿಕ ಹಿಂದೆ ಸ್ಥಗಿತವಾಗಿದ್ದ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದು, ಬಸ್ ಸೇರಿದಂತೆ ಘನವಾಹನಗಳು ಇಕ್ಕಟ್ಟಿನ ರಸ್ತೆಯಲ್ಲಿ ಪ್ರಯಾಸಪಟ್ಟು ಮುಂದೆ ಚಲಿಸುವಂತಾಯಿತು.
ಅವೈಜ್ಞಾನಿಕ ಕಾಮಗಾರಿ: ಮೇಲ್ಸೇತುವೆ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾದರೂ ಕಲ್ಲಾಪಿನಿಂದ ತೊಕ್ಕೊಟ್ಟು ಸಂಪರ್ಕಿಸುವ ಈ ಹಿಂದೆ ಇದ್ದ ರಸ್ತೆಯನ್ನು ಅಭಿವೃದ್ಧಿ ಪಡಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವುದೇ ಸಂಚಾರಕ್ಕೆ ತಡೆಯಾಗಲುಕಾರಣವಾಗಿದ್ದು, ರಾತ್ರಿ ವೇಳೆ ಮನೆ ತಲುಪಬೇಕಾದ ಮಹಿಳೆಯರು ಪರದಾಡುವಂತಾಯಿತು. ಕಲ್ಲಾಪಿನಿಂದ ತೊಕ್ಕೊಟ್ಟಿಗೆ ಅರ್ಧ ಕಿ.ಮೀ. ಇರುವ ಈ ಸರ್ವೀಸ್ ರಸ್ತೆಯನ್ನು ಅಗಲೀಕರಣಗೊಳಿಸಿದರೆ ವಾಹನ ಸಂಚಾರಕ್ಕೆ ಸುಗಮವಾಗಬಹುದು. ಈ ರಸ್ತೆ ಮುಖ್ಯವಾಗಿ ದೇರಳಕಟ್ಟೆ, ಕೊಣಾಜೆ, ತಲಪಾಡಿ, ಉಳ್ಳಾಲ ಸಂಚರಿಸುವ ಬಸ್‌ಗಳು ಸೇರಿದಂತೆ ಇತರ ವಾಹನಗಳ ನಿಬಿಡ ರಸ್ತೆಯಾಗಿದ್ದು ಜಿಲ್ಲಾಡಳಿತ ಮತ್ತು ಸಂಬಂಧಿತ ಇಲಾಖೆ ಈ ರಸ್ತೆ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.