ತುಂಬೆ ವೆಂಟೆಡ್‌ ಡ್ಯಾಂ


Team Udayavani, Jan 14, 2018, 11:29 AM IST

14-Jan-10.jpg

ಮಹಾನಗರ: ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಮೂಲವಾಗಿರುವ ನೇತ್ರಾವತಿ ನದಿಯ ತುಂಬೆ ವೆಂಟೆಡ್‌
ಡ್ಯಾಂನಲ್ಲಿ ಗರಿಷ್ಠ ಮಟ್ಟ 7 ಮೀಟರ್‌ ನೀರು ಸಂಗ್ರಹಿಸಿದರೆ ಸುಮಾರು 85ರಿಂದ 90 ದಿನಗಳವರೆಗೆ ನಗರಕ್ಕೆ ಕುಡಿಯುವ ನೀರು ಅಬಾಧಿತವಾಗಿ ಸರಬರಾಜು ಮಾಡಬಹುದಾಗಿದೆ. ಪ್ರಸ್ತುತ ವರ್ಷದಿಂದ 6 ಮೀಟರ್‌ವರೆಗೆ ನೀರು ನಿಲ್ಲಿಸಲಾಗುತ್ತಿದ್ದು, 55ರಿಂದ 60 ದಿನಗಳವರೆಗೆ ನೀರು ಪೂರೈಕೆ ಮಾಡಬಹುದಾಗಿದೆ.

ತುಂಬೆ ವೆಂಟೆಡ್‌ಡ್ಯಾಂ ಅನ್ನು ಮಂಗ‌ಳೂರು ನಗರದ ಮುಂದಿನ 20ರಿಂದ 25 ವರ್ಷಗಳವರೆಗಿನ ನೀರಿನ ಆವಶ್ಯಕತೆಯನ್ನು ಮನಗಂಡು 2009 ರಲ್ಲಿ ರೂಪಿಸಲಾಗಿತ್ತು. ಡ್ಯಾಂನ ಎತ್ತರ 12 ಮೀಟರ್‌ ಆಗಿದ್ದು, ಗರಿಷ್ಠ ನೀರು 7 ಮೀಟರ್‌ವರೆಗೆ ನೀರು ನಿಲ್ಲಿಸಬಹುದಾಗಿದೆ. ಆದರೆ 7 ಮೀಟರ್‌ ನೀರು ಸಂಗ್ರಹಿಸಿದರೆ ನದಿಯ ಎರಡೂ ಕಡೆಗಳಲ್ಲಿ ಕೃಷಿ ಭೂಮಿ ಸೇರಿದಂತೆ ಗಣನೀಯ ಪ್ರಮಾಣದಲ್ಲಿ ಪ್ರದೇಶ ಜಲಾವೃತಗೊಳ್ಳುವುದರಿಂದ ಆರಂಭದಲ್ಲಿ ಇಲ್ಲಿ 5 ಮೀಟರ್‌ ಎತ್ತರಕ್ಕೆ ನೀರು ಸಂಗ್ರಹಿಸಲಾಯಿತು. ಇದರಿಂದ ನದಿಪಾತ್ರದ ಎರಡೂ ಕಡೆಗಳಲ್ಲಿ 19 ಎಕ್ರೆ ಜಾಗ ಜಲಾವೃತವಾಗುತ್ತದೆ. ಈ ವರ್ಷದಿಂದ 6 ಮೀಟರ್‌ ನೀರು ಸಂಗ್ರಹಿಸಲು ಕಾರ್ಯೋನ್ನುಖವಾಗಿದ್ದು ಇದರಿಂದ 50.88 ಎಕ್ರೆ ಪ್ರದೇಶದಲ್ಲಿ ನೀರು ಆವರಿಸಲಿದೆ.

ಎತ್ತರ, ನೀರು ಸಂಗ್ರಹ ಪ್ರಮಾಣ
ಮಂಗಳೂರು ನಗರಕ್ಕೆ ದಿನಂಪ್ರತಿ 160 ಎಂಎಲ್‌ಡಿ ನೀರು ಸರಬರಾಜಾಗುತ್ತಿದೆ. ಈ ಪ್ರಮಾಣವನ್ನು ಲೆಕ್ಕಹಾಕಿ 4 ಮೀ. ಎತ್ತರಕ್ಕೆ ನಿಲ್ಲಿಸಿದರೆ 5.21 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹ ಮಾಡಬಹುದಾಗಿದ್ದು, 23 ದಿನಗಳವರೆಗೆ ನಗರಕ್ಕೆ ನೀರು ಪೂರೈಕೆ ಮಾಡಬಹುದಾಗಿದೆ. 4.50 ಮೀ.ಎತ್ತರಕ್ಕೆ ಸಂಗ್ರಹಿಸಿದರೆ 6.40 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗುತ್ತದೆ ಮತ್ತು 30 ದಿನಗಳವರೆಗೆ ಪೂರೈಕೆ ಮಾಡಬಹುದಾಗಿದೆ. 5 ಮೀ. ಎತ್ತರಕ್ಕೆ ನೀರು ನಿಲ್ಲಿಸಿದರೆ 7.71 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗುತ್ತದೆ. ಇದು 40 ದಿನಗಳವರೆಗ ಸಾಕಾಗುತ್ತದೆ. 5.50 ಮೀ. ಎತ್ತರಕ್ಕೆ ಸಂಗ್ರಹ ಮಾಡಿದರೆ 9.17 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗುತ್ತದೆ. ಇದರಿಂದ 48 ದಿನಗಳವರೆಗೆ ನೀರು ಪೂರೈಕೆ ಮಾಡಬಹುದು. 6 ಮೀ. ಎತ್ತರಕ್ಕೆ ನಿಲ್ಲಿಸಿದರೆ 10.83 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ದಾಸ್ತಾನು ಆಗಿ 55 ದಿನ ಗಳವರೆಗೆ ಪೂರೈಕೆ ಮಾಡಬಹುದಾಗಿದೆ. 7 ಮೀಟರ್‌ ಎತ್ತರಕ್ಕೆ ನೀರು ನಿಲ್ಲಿಸಿದರೆ 14.73 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗಿ 85 ದಿನಗಳವರೆಗೆ ನಗರಕ್ಕೆ ನೀರು ಪೂರೈಕೆ ಮಾಡಬಹುದಾಗಿದೆ.

ದಿನಕ್ಕೆ 137 ಎಂಎಲ್‌ಡಿ ನೀರು
ನಗರದಲ್ಲಿ ಈಗ ಅಂದಾಜು ಪ್ರಕಾರ ದಿನಂಪ್ರತಿ 137 ಎಂಎಲ್‌ಡಿ ಕುಡಿಯುವ ನೀರಿಗೆ ಬೇಡಿಕೆ ಇದೆ. 160 ಎಂಎಲ್‌ಡಿ ನೀರು ಸರಬರಾಜಾಗುತ್ತಿದೆ. 2031ರಲ್ಲಿ ಮಂಗಳೂರು ನಗರದ ಜನಸಂಖ್ಯೆ 7,56,093ಕ್ಕೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದ್ದು, ಆಗ 180.01 ಎಂಎಲ್‌ಡಿ ಹಾಗೂ 2046ಕ್ಕೆ ಜನಸಂಖ್ಯೆ 10,33,778 ಕ್ಕೆ ಹೆಚ್ಚಳವಾಗಿ 236 ಎಂಲ್‌ಡಿ ನೀರಿಗೆ ಬೇಡಿಕೆ ಇರಬಹುದು ಎಂದು ಲೆಕ್ಕ ಹಾಕಲಾಗಿದೆ.

ಈ ಹಿನ್ನೆಲೆಯಲ್ಲಿ ಈಗ ಸರಬರಾಜು ಆಗುತ್ತಿರುವುದಕ್ಕಿಂತ 2031ರಲ್ಲಿ 20 ಎಂಎಲ್‌ಡಿ ಹಾಗೂ 2046ರಲ್ಲಿ 77 ಎಂಎಲ್‌ಡಿ ನೀರು ಹೆಚ್ಚುವರಿಯಾಗಿ ಸರಬರಾಜು ಮಾಡಬೇಕಾಗುತ್ತದೆ ಎಂದು ಲೆಕ್ಕಚಾರ ಹಾಕಲಾಗಿದೆ. ಕುಡ್ಸೆಂಪ್‌ ಸರ್ವೆ ಪ್ರಕಾರ 2046ನೇ ಇಸವಿವರೆಗೆ ಮಂಗಳೂರಿಗೆ ನೀರು ಸರಬರಾಜು ಮಾಡಲು ನೇತ್ರಾವತಿ ನದಿಯಿಂದ ಸಾಧ್ಯವಾಗಲಿದೆ. ಶಂಬೂರಿನಲ್ಲಿರುವ ಎಎಂಆರ್‌ ಡ್ಯಾಂನಲ್ಲಿ 14.25 ಎಂಎಲ್‌ಡಿ ನೀರು ಸಂಗ್ರಹವಾಗುತ್ತಿದೆ.

ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರು ಕಡಿಮೆಯಾದರೆ ಎಎಂಆರ್‌ ಡ್ಯಾಂನಿಂದ ನೀರು ಬಿಟ್ಟು ನೀರಿನ ಮಟ್ಟವನ್ನು ಕಾಯ್ದು ಕೊಳ್ಳಲಾಗುತ್ತದೆ. ಸಾಮಾನ್ಯವಾಗಿ ನೇತ್ರಾವತಿ ನದಿಯಲ್ಲಿ ಫೆಬ್ರವರಿ ಮಧ್ಯಭಾಗದವರೆಗೆ ಒಳಹರಿವು ಇರುತ್ತದೆ.

10 ಎಂಎಲ್‌ಡಿಯಿಂದ 137 ಎಂಎಲ್‌ಡಿ
1956ರಲ್ಲಿ ಮಂಗಳೂರು ನಗರಕ್ಕೆ ಮೊದಲ ಬಾರಿ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಟಾನಗೊಂಡಿತು. ಆಗ 1,80,000 ಜನಸಂಖ್ಯೆಯನ್ನು ಅಂದಾಜಿಸಿಕೊಂಡು ಈ ಯೋಜನೆ ಸಿದ್ಧಪಡಿಸಲಾಗಿತ್ತು. ಆಗ ಬೇಡಿಕೆ ಇದ್ದದ್ದು 10 ಎಂಎಲ್‌ಡಿ ನೀರಿಗೆ. 1971ರಲ್ಲಿ ನೀರಿನ ಬೇಡಿಗೆ 81.70 ಎಂಎಲ್‌ಡಿ ಗೇರಿತು. ಈಗ ಇದು 137 ಎಂಎಲ್‌ಡಿಗೆ ತಲುಪಿದೆ.

ಲಕ್ಯಾ ಡ್ಯಾಂನೀರು 
ಲಕ್ಯ ಅಣೆಕಟ್ಟಿನಿಂದ ಪಣಂಬೂರಿನ ಕುದುರೆಮುಖ ಕಂಪೆನಿ ಪ್ರದೇಶಕ್ಕೆ ಈಗ 2.3 ಎಂಜಿಡಿ ನೀರು ಸರಬರಾಜು ಆಗುತ್ತಿದೆ. ಅಲ್ಲಿಂದ ದಿನವೊಂದಕ್ಕೆ 6 ಎಂಜಿಡಿ ನೀರು ತೆಗೆಯಬಹುದಾಗಿದೆ. ಮನಪಾದ ಪ್ರಸ್ತಾವನೆಯಲ್ಲಿ
ಪಣಂಬೂರಿನಿಂದ ಈಗಾಗಲೇ ಇರುವ ನೀರು ಸರಬರಾಜು ಕೊಳವೆಗೆ ಲಿಂಕ್‌ ಮಾಡಿ ನೀರು ಸಂಗ್ರಹ ಸ್ಥಾವರಗಳಿಗೆ
ತರುವ ಯೋಜನೆ ರೂಪಿಸಲಾಗಿದೆ. 2011ರ ಎಪ್ರಿಲ್‌ನಲ್ಲಿ ಮಂಗಳೂರಿಗೆ ಕುಡಿಯುವ ನೀರು ಪೂರೈಕೆಯ ಏಕೈಕ
ಮೂಲವಾಗಿರುವ ತುಂಬೆಯಲ್ಲಿ ನೀರು ಸಂಗ್ರಹ ಕಡಿಮೆಯಾದಾಗ ಲಕ್ಯದಿಂದ ನೀರು ಪಡೆಯುವ ಬಗ್ಗೆ
ಆಗಿನ ಶಾಸಕ ಎನ್‌. ಯೋಗೀಶ್‌ ಭಟ್‌ ಪ್ರಸ್ತಾವನೆ ಮಂಡಿಸಿದ್ದರು. ಹಾಲಿ ಶಾಸಕ ಮೊದೀನ್‌ ಬಾವಾ ಈ ಬಗ್ಗೆ
ರಾಜ್ಯ ಸರಕಾರ ಮಟ್ಟದಲ್ಲಿ ಪ್ರಯತ್ನ ಮುಂದುವರಿಸಿ ದ್ದಾರೆ. ಕುದುರೆಮುಖ ಗಣಿಗಾರಿಕೆ ವಿಚಾರ ಸುಪ್ರೀಂಕೋರ್ಟ್ ನಲ್ಲಿರುವುದರಿಂದ ಇದಕ್ಕೆ ನ್ಯಾಯಾಲಯದ ಅನುಮತಿ ಅಗತ್ಯ. ಈ ಹಿನ್ನೆಲೆಯಲ್ಲಿ ಮನಪಾ ಕೂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ನೀರು ತರಲು ಅನುಮತಿ ಕೋರಿದೆ. 1,048 ಮೀಟರ್‌ ಉದ್ದ , 100 ಮೀ. ಎತ್ತರ ವಿರುವ ಲಕ್ಯಾ ಡ್ಯಾಂ 254 ಚ.ಘ. ಮೀಟರ್‌ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. 6.05 ಚದರ ಕಿ.ಮೀ. ವಿಸ್ತೀರ್ಣವಿದ್ದು, 18.20 ಚ.ಕಿ.ಮೀ. ಜಲಾನಯನ ಪ್ರದೇಶ ಹೊಂದಿದೆ.   

ಕೇಶವ ಕುಂದರ್‌

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.