ತಬ್ಲಿಘಿ ಜಮಾತ್ ನಲ್ಲಿ ಪಾಲ್ಗೊಂಡ ಇಬ್ಬರು ಸೇರಿ ಮಂಗಳೂರಿನಲ್ಲಿ ಮೂವರಿಗೆ ಸೋಂಕು ದೃಢ
Team Udayavani, Apr 4, 2020, 6:16 PM IST
ಮಂಗಳೂರು: ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಗೆ ಹೋದ ಇಬ್ಬರು ಸೇರಿದಂತೆ ಮೂವರಿಗೆ ಕೋವಿಡ್-19 ಸೋಂಕು ಪಾಸಿಟಿವ್ ಇರುವುದು ಶನಿವಾರ ದೃಢಪಟ್ಟಿದೆ.
ಶನಿವಾರ ಸಂಜೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಹಿರಂಗಪಡಿಸಿದ್ದು ರಾಜ್ಯದಲ್ಲಿ ಇಂದು 16 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ.
ದಿಲ್ಲಿಯ ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡ ದಕ್ಷಿಣ ಕನ್ನಡ ಜಿಲ್ಲೆಯ 43 ಮತ್ತು 52 ವರ್ಷದ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಓರ್ವ ಬಂಟ್ವಾಳ ತಾಲೂಕಿನ ತುಂಬೆ ಮತ್ತು ಮತ್ತೋರ್ವ ಉಳ್ಳಾಲ ನಿವಾಸಿಯಾಗಿದ್ದಾರೆ.
ಮತ್ತೋರ್ವ ಉಡುಪಿ ಜಿಲ್ಲೆಯ 63 ವರ್ಷದ ಮಹಿಳೆಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು ಇವರು ಮಾರ್ಚ್ 22 ರಂದು ದುಬೈನಿಂದ ಬಂದು ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದರು. ಇಂದು ಮೂವರಿಗೆ ಸೋಂಕು ದೃಢಪಟ್ಟಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 12 ಕ್ಕೇರಿದೆ.
ರಾಜ್ಯದಲ್ಲಿ ಒಟ್ಟು 144 ಜನರಿಗೆ ಸೋಂಕು ತಗುಲಿದ್ದು, ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.