ಬೇಸಗೆಯಲ್ಲಿ ವರ್ಷಧಾರೆ; ತುಂಬೆಯಲ್ಲಿ ತುಂಬಿ ಹರಿಯುವ ನೀರು!

ಮೇಯಲ್ಲೇ ಡ್ಯಾಂನಲ್ಲಿ ನೀರು ಭರ್ತಿ; ಇದೇ ಮೊದಲು!

Team Udayavani, May 17, 2022, 9:56 AM IST

dam

ತುಂಬೆ: ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ವರ್ಷಧಾರೆ ಆಗುತ್ತಿರುವ ಪರಿಣಾಮ ಮಂಗಳೂರು ನಗರ ವ್ಯಾಪ್ತಿಯಲ್ಲಿ ಎದುರಾಗಿದ್ದ ಕುಡಿಯುವ ನೀರಿನ ಆತಂಕ ಈಗ ಇಲ್ಲ.

ವಿಶೇಷವೆಂದರೆ, ತುಂಬೆ ಡ್ಯಾಂನ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮೇ ವೇಳೆಗೆ ತುಂಬೆ ಡ್ಯಾಂನ ಒಂದು ಗೇಟ್‌ ತೆರೆದು ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇಲ್ಲವಾದರೆ, ಈ ಸಮಯದಲ್ಲಿ ನೀರಿನ ಮಟ್ಟ 6 ಮೀ.ಗಿಂತ ಕೆಳಗಡೆ ಇಳಿಕೆಯಾಗುತ್ತಿತ್ತು.

ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ ಸದ್ಯ 6 ಮೀಟರ್‌ ನೀರು ತುಂಬಿದ್ದು, ಒಳ ಹರಿವು ಹೆಚ್ಚಾಗಿರುವ ಕಾರಣ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪ್ರತೀದಿನ ಒಂದು ಗೇಟ್‌ ಮೂಲಕ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಮಲೆನಾಡು, ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿರುವುದು, ಮುಂದಿನ ಕೆಲವು ದಿನ ಮಳೆಯಾಗಲಿರುವ ಸಾಧ್ಯತೆಯಿದ್ದು, ಮಂಗಳೂರಿನ ಪಾಲಿಗೆ ಆಶಾವಾದ ಮೂಡಿಸಿದೆ. ಈ ಮೂಲಕ ಬಹುತೇಕ ಈ ವರ್ಷದ ಬೇಸಗೆಗೆ ಬೇಕಾದಷ್ಟು ನೀರು ತುಂಬೆ ಡ್ಯಾಂನಲ್ಲಿ ಸಂಗ್ರಹ ಇರಲಿದ್ದು, ಮಂಗಳೂರು ನಗರಕ್ಕೆ ನೀರಿನ ಅಭಾವದ ಭೀತಿ ದೂರವಾಗಿದೆ.

ತುಂಬೆ ವೆಂಟೆಡ್‌ ಡ್ಯಾಂನಲ್ಲಿ ಗರಿಷ್ಠ 6 ಮೀಟರ್‌ವರೆಗೆ ನೀರು ಸಂಗ್ರಹಿಸಿಡುವ ಅವಕಾಶವಿದ್ದು, ಸಾಮಾನ್ಯವಾಗಿ ಎಪ್ರಿಲ್‌ ಮಧ್ಯಭಾಗದಲ್ಲಿ ನಾಲ್ಕೂವರೆಯಿಂದ ಐದು ಮೀಟರ್‌ನಷ್ಟು ನೀರು ಸಂಗ್ರಹ ಮಾತ್ರ ಇರುತ್ತದೆ. ಮಳೆ ಬಾರದೇ ಇರುತ್ತಿದ್ದರೆ ನೀರು ಬೇಸಗೆ ಅಂತ್ಯದವರೆಗೆ ಸಾಕಾಗುತ್ತಿರಲಿಲ್ಲ. ಬಳಿಕ ರೇಷನಿಂಗ್‌ ಮೂಲಕ ವಿತರಿಸುವ ವ್ಯವಸ್ಥೆಯನ್ನು ಪಾಲಿಕೆ ಮಾಡುತ್ತಿತ್ತು. ಆದರೆ ಈ ಬಾರಿ ಮೇ ಮಧ್ಯಭಾಗದಲ್ಲೇ ಗರಿಷ್ಠ ನೀರಿನ ಸಂಗ್ರಹ ಇರುವುದು ಮಹಾನಗರದ ನೀರಿನ ಕೊರತೆಗೆ ಪರಿಹಾರ ದೊರೆತಂತಾಗಿದೆ.

ಒಳ ಹರಿವು ಹೆಚ್ಚಳ

ಫೆಬ್ರವರಿ ತಿಂಗಳ ಅಂತ್ಯದಲ್ಲಿ ಹಾಗೂ ಮಾರ್ಚ್‌ ಆರಂಭದಲ್ಲಿ ತುಂಬೆ ಡ್ಯಾಂನಲ್ಲಿ ಒಳ ಹರಿವು ಬಹುತೇಕ ಕಡಿಮೆಯಾಗಿ ನಿಲ್ಲುವ ಹಂತಕ್ಕೆ ತಲುಪಿತ್ತು. ಈ ವೇಳೆ ರೇಷನಿಂಗ್‌ ಕುರಿತಾದ ಮಾತುಕತೆಯೂ ಜಿಲ್ಲಾಡಳಿತ ಹಾಗೂ ಪಾಲಿಕೆ ವತಿಯಿಂದ ನಡೆದಿತ್ತು. ಆದರೆ ಮಾರ್ಚ್‌ ಮಧ್ಯ ಭಾಗದಲ್ಲೇ ನೇತ್ರಾವತಿ ನದಿ ಪರಿಸರದಲ್ಲಿ ವಾರಕ್ಕೆ ಒಂದೆರಡರಂತೆ ಉತ್ತಮ ಬೇಸಗೆ ಮಳೆ ಸುರಿದಿದ್ದರಿಂದ ಒಳ ಹರಿವು ಮತ್ತೆ ಹೆಚ್ಚಳವಾಗಿತ್ತು. ಇದೀಗ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಒಳಹರಿವು ಹೆಚ್ಚಳವಾಗಿದೆ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.