ತುಂಬೆ ಅಣೆಕಟ್ಟಿನಿಂದ ಹರಿದ ನೀರು
Team Udayavani, Jun 23, 2019, 5:17 AM IST
ಬಂಟ್ವಾಳ: ಜಿಲ್ಲೆಯ ಜೀವ ನದಿ ನೇತ್ರಾವತಿಯಲ್ಲಿ ಹರಿವುಆರಂಭವಾಗಿದ್ದು ತುಂಬೆ ಅಣೆಕಟ್ಟಿನಲ್ಲಿ 5 ಮೀಟರ್ ಎತ್ತರಕ್ಕೆ ನೀರನ್ನು ಕಾಯ್ದುಕೊಂಡು ಗೇಟ್ ಸಂಖ್ಯೆ 5ನ್ನು ಒಂದಡಿ ಯಷ್ಟು ಎತ್ತರಕ್ಕೆ ತೆರೆದು ಹೆಚ್ಚುವರಿ ನೀರನ್ನು ಹರಿಯ ಬಿಡಲಾಗಿದೆ.
ಕಳೆದ ವರ್ಷ ಎಪ್ರಿಲ್ನಲ್ಲಿ ಉತ್ತಮ ಮಳೆಯಾಗಿದ್ದು, ಹೆಚ್ಚುವರಿ ನೀರನ್ನು ಮೇ ಅಂತ್ಯದಲ್ಲಿ ಹೊರಗೆ ಬಿಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಮಳೆಯಾಗದೆ ಎಪ್ರಿಲ್, ಮೇಯಲ್ಲಿ ಗಂಭೀರ ನೀರಿನ ಸಮಸ್ಯೆ ತಲೆದೋರಿತ್ತು. ಜೂ. 10ರ ತನಕವೂ ನದಿ ತುಂಬಿರಲಿಲ್ಲ. ಅನಂತರ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾದ್ದರಿಂದ ನೀರು ಹರಿದುಬಂದಿತ್ತು.
ಜೂ. 20ರಂದು ಶಂಭೂರು ಎಎಂಆರ್ ಅಣೆಕಟ್ಟಿನಿಂದಲೂ ನೀರನ್ನು ಹೊರಗೆ ಬಿಡುವ ಮೂಲಕ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಳ್ಳಲಾಗಿದೆ.
ತುಂಬೆ ಅಣೆಕಟ್ಟಿನಲ್ಲಿ ನೀರು ನಿಲುಗಡೆ ಮಾಡದೇ ಸರಾಗ ಹರಿಯ ಬಿಡುತ್ತಿದ್ದರೆ ಪ್ರಸ್ತುತ ಬಿದ್ದಿರುವ ಮಳೆಯೂ ಮಂಗಳೂರಿಗೆ ಕುಡಿಯುವ ನೀರು ಒದಗಿಸುವಷ್ಟು ಪ್ರಬಲವಲ್ಲ ಎಂದೇ ಸ್ಥಳೀಯರು ಅಭಿಪ್ರಾಯಪಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.