ಹಳೆಯಂಗಡಿ ಸಿಡಿಲಿನ ಅಘಾತ: ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಮತ್ತೋರ್ವ ಬಾಲಕ
Team Udayavani, Apr 22, 2021, 9:08 AM IST
ಹಳೆಯಂಗಡಿ : ಇಲ್ಲಿನ ಬೊಳ್ಳೂರಿನ ಇಂದಿರಾ ನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಅಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿದ್ದ ಮತ್ತೋರ್ವ ಬಾಲಕ ಮಾರುತೇಶ್ (6 ವ) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಇಂದಿರಾ ನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಮುಂಭಾಗದಲ್ಲಿ ಖಾಸಗಿ ಜಮೀನಿನಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಎರಡನೇ ಪುತ್ರ ನಿಹಾನ್ (6 ವ) ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತೇಶ್ (6 ವ) ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ನಿಹಾನ್ ಮೃತಪಟ್ಟಿದ್ದನು.
ಇದನ್ನೂ ಓದಿ:ಸೋಂಕಿತರು ಮತ್ತು ಶವ ಸಾಗಾಟ ಮಾಡುವ ಆ್ಯಂಬುಲೆನ್ಸ್ ಗಳಿಗೆ ಸರ್ಕಾರದಿಂದಲೇ ದರ ನಿಗದಿ: ಸುಧಾಕರ್
ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಮಕ್ಕಳು ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದರು. ನಂತರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.