ದೇಶದ ಏಕತೆ ಕಾಪಾಡಿಕೊಳ್ಳಬೇಕು: ಸಚಿವ ರೈ
Team Udayavani, Jan 27, 2017, 8:50 AM IST
ಮಂಗಳೂರು: ಭಾರತೀಯರಾದ ನಾವು ದೇಶದ ಭವ್ಯ ಪರಂಪರೆ, ಸಂಸ್ಕೃತಿಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ಮಾಡಬೇಕು. ಸ್ನೇಹ ಹಾಗೂ ಸೌಹಾರ್ದ ವಾತಾವರಣ ನಿರ್ಮಿಸಿ, ದೇಶದ ಒಗ್ಗಟ್ಟು, ಏಕತೆ ಕಾಪಾಡಿಕೊಳ್ಳಬೇಕು ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.
ದ.ಕ. ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಗುರುವಾರ ಜರಗಿದ 68ನೇ ಗಣರಾಜ್ಯೋತ್ಸವದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಗಣರಾಜ್ಯೋತ್ಸವ ಸಂದೇಶ ನೀಡಿದರು.
ಜಾತಿ, ಭಾಷೆ, ಪಂಗಡಗಳ ಸಂಕುಚಿತ ಭಾವನೆಧಿಗಳಿಂದ ಹೊರಬಂದು ಭವ್ಯ ಭಾರತ ನಿರ್ಮಾಣದ ಸಂಕಲ್ಪ ತೊಡಬೇಕು ಎಂದರು.
ಗಾಂಧಿಭವನಕ್ಕೆ ಮಂಜೂರಾತಿ
ಮಹಾತ್ಮಾ ಗಾಂಧೀಜಿಯವರ ವಿಚಾರಧಿಧಾರೆಧಿಗಳನ್ನು ಪ್ರಚುರಪಡಿಸಲು ಅನುಕೂಲಧಿವಾಗುವಂತೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ತಲಾ 3 ಕೋಟಿ ರೂ. ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಪಶುಭಾಗ್ಯ ಕಾರ್ಯಕ್ರಮದಡಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಹಸು, ಕುರಿ, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡುವುದಕ್ಕಾಗಿ ಈಗಾಗಲೇ 88 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.
94ಸಿ ಅರ್ಜಿ ಸ್ವೀಕಾರ ಅವಧಿ ವಿಸ್ತರಣೆ
94ಸಿ ತಿದ್ದುಪಡಿ ಕಾಯಿದೆಯಡಿ ಗ್ರಾಮೀಣ ಪ್ರದೇಶದಲ್ಲಿ ಅರ್ಜಿ ಸ್ವೀಕಾರ ಅವಧಿಯನ್ನು ಫೆ. 21ರ ವರೆಗೆ ವಿಸ್ತರಣೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 94ಸಿಸಿ ಕಾಯ್ದೆಯಂತೆ ಅರ್ಜಿ ಸ್ವೀಕರಿಸಲು ಫೆ. 27ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಸರಕಾರಿ ಇಲಾಖೆಯಲ್ಲಿನ ಉತ್ತಮ ಸೇವೆಧಿಯನ್ನು ಪರಿಗಣಿಸಿ ವೆನಾÉಕ್ ಆಸ್ಪತ್ರೆಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ, ಗಿರೀಶ್ ಗೌಡ, ಅಬ್ದುಲ್ ಬಶೀರ್, ಅಮ್ಮಿ, ಗೋಕುಲ್‌ದಾಸ್ ಭಕ್ತ ಅವರನ್ನು 2016-ಧಿ17ನೇ ಸಾಲಿನ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಧಿಲಾಯಿತು. ರಾಷ್ಟ್ರಪತಿ ಪದಕ ಪಡೆದ ಎಸಿಪಿಗಳಾದ ಉದಯ ನಾಯಕ್ ಮತ್ತು ವೆಲೆಂಟೈನ್ ಡಿ’ಸೋಜಾ ಅವರನ್ನು ಪುರಸ್ಕರಿಸಧಿಲಾಯಿತು. ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ, ಶಾಸಕರಾದ ಜೆ.ಆರ್. ಲೋಬೊ, ಬಿ.ಎ. ಮೊದಿನ್ ಬಾವಾ, ಮೇಯರ್ ಹರಿಧಿನಾಥ್, ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಪಂ ಸಿಇಒ ಡಾ| ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ನಗರ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ, ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು.
ಕೊರಗ ಸಮುದಾಯದ ಅಭಿವೃದ್ಧಿಗೆ 13.81 ಕೋ.ರೂ.
ಕೊರಗ ಸಮುದಾಯದ ಅಭಿವೃದ್ಧಿ ಮತ್ತು ಇತರ ಯೋಜನೆಗಳಿಗಾಗಿ ಜಿಲ್ಲೆಗೆ 13.81 ಕೋಟಿ ರೂ. ವಿಶೇಷ ಅನುಧಿದಾನವನ್ನು ಸರಕಾರ ಘೋಷಿಸಿದೆ. ಮೊದಲ ಕಂತಾಗಿ 10 ಕೋಟಿ ರೂ.ಗಳನ್ನು ಈಗಾಧಿಗಲೇ ಬಿಡುಧಿಗಡೆ ಮಾಡಲಾಗಿದೆ ಎಂದು ಸಚಿವ ರೈ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 3,030 ಎಂಡೋಸಲ್ಫಾನ್ ಸಂತ್ರಸ್ತಧಿರಿದ್ದು, ಈ ಫಲಾನುಭವಿಗಳಿಗೆ ಮಿತಧಿವೇತನಧಿವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತಿದೆ. ಶಾಶ್ವತ ಪುನರ್ವಸತಿ ಕೇಂದ್ರ ಸ್ಥಾಪನೆಗಾಗಿ ಕ್ರಿಯಾ ಯೋಜನೆ ರೂಪಿಸಧಿಲಾಗುತ್ತಿದೆ ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.