ತಂಬಾಕು ಮುಕ್ತ ಜಿಲ್ಲೆ; ದ.ಕ.ದ ಎಲ್ಲ ತಾಲೂಕುಗಳಲ್ಲಿ ವಿಶೇಷ ತಂಡ ರಚನೆ

ತಂಬಾಕು ನಿಯಂತ್ರಣ ಕಾಯ್ದೆ; ಕಟ್ಟುನಿಟ್ಟಾಗಿ ಜಾರಿಗೆ ಕ್ರಮ

Team Udayavani, Dec 15, 2019, 5:21 AM IST

zx-17

ಮಹಾನಗರ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ತಂಡಗಳನ್ನು ರಚನೆ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ.

ಹೆಚ್ಚಾಗಿ ತಂಬಾಕು ಬಳಕೆ ಮಾಡುವ ಪೆಟ್ಟಿ ಅಂಗಡಿ, ವೈನ್‌ಶಾಪ್‌ ಸಹಿತ ಮತ್ತಿತರ ಪ್ರದೇಶಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು ಇಟ್ಟಿದ್ದು, ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸುವ ಪಣ ತೊಟ್ಟಿದೆ. ಈವರೆಗೆ ಜಿಲ್ಲಾ ಮಟ್ಟದಲ್ಲಿ ನಗರ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಕಾರ್ಯಾಚರಣೆ ನಡೆಯುತ್ತಿತ್ತು. ಇದೀಗ ತಾ| ಮಟ್ಟಕ್ಕೆ ವಿಸ್ತರಣೆ ಮಾಡಲಾಗಿದೆ.

ತಾ| ಮಟ್ಟದಲ್ಲಿ ಒಟ್ಟು 12-15 ಮಂದಿಯ ತಂಡ ರಚನೆಯಾಗಲಿದ್ದು, ಇದರಲ್ಲಿ ತಹಶೀಲ್ದಾರ್‌, ಉಪ ತಹಶೀಲ್ದಾರ್‌, ಕಂದಾಯಾಧಿಕಾರಿ, ತಾಲೂಕು ಮಟ್ಟದ ಆರೋಗ್ಯಾಧಿಕಾರಿ, ಆಡಳಿತ ವೈದ್ಯಾಧಿಕಾರಿ, ಶಿಕ್ಷಣಾಧಿಕಾರಿ, ಪೊಲೀಸ್‌ ಅಧಿಕಾರಿ ಒಳಗೊಂಡಿರುತ್ತಾರೆ. ಜಿಲ್ಲೆಯ ಕೆಲವೊಂದು ಹಳ್ಳಿ ಪ್ರದೇಶಗಳಲ್ಲಿ ಇನ್ನೂ, ಅನಧಿಕೃತವಾಗಿ ತಂಬಾಕು ಮಾರಾಟ ನಡೆಯುತ್ತಿದೆ. ಅಲ್ಲದೆ, ಹಳ್ಳಿಗಳಲ್ಲಿನ ಶಾಲೆಗಳ 100 ಗಜ ಅಂತರದಲ್ಲೇ ಬೀಡಿ, ಸಿಗರೇಟ್‌ನಂತ ಅಮಲು ಪದಾರ್ಥಗಳು ಸಿಗುತ್ತವೆೆ.

ಶಿಕ್ಷೆ ಪ್ರಮಾಣ ಹೇಗಿದೆ?
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಎಚ್ಚರಿಕೆಯ ಫಲಕ ಇಲ್ಲದಿರುವುದು ಅಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಲೈಟರ್‌, ಬೆಂಕಿ ಕಡ್ಡಿ ಪೊಟ್ಟಣ ಇಟ್ಟರೆ 200 ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ತಂಬಾಕು ಬ್ರಾಂಡ್‌ ಹೆಸರಿನೊಂದಿಗೆ ಜಾಹೀರಾತು ಫಲಕ, ಯಾವುದೇ ರೂಪ ದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮೊದಲ ಅಪರಾಧಕ್ಕೆ 1,000 ರೂ. ದಂಡ ಅಥವಾ 2 ವರ್ಷ ಜೈಲು ಶಿಕ್ಷೆ ಅಥವಾ ಈ ಎರಡೂ ಶಿಕ್ಷೆ ವಿಧಿಸಬ ಹುದು. ಪದೇ ಪದೇ ಅಪರಾಧ ಎಸಗಿ ದರೆ 5,000 ರೂ. ದಂಡ ಅಥವಾ 5 ವರ್ಷ ಜೈಲು ಶಿಕ್ಷೆ ನೀಡಬಹುದು. 18 ವರ್ಷ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೂಚನ ಫಲಕ ಹಾಕದಿ ರುವುದು, ತಂಬಾಕು ಉತ್ಪನ್ನಗಳ ಪ್ರದರ್ಶನಕ್ಕೆ 200 ರೂ. ದಂಡ ವಿಧಿಸಬ ಹುದು. ತಂಬಾಕು ಉತ್ಪನ್ನ ಪ್ಯಾಕ್‌ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಇರದಿರುವುದು, ಎಚ್ಚರಿಕೆ ಚಿತ್ರ  ಗಳು ಶೇ.85ಕ್ಕಿಂತ ಕಡಿಮೆ ಅಳತೆಯ ಲ್ಲಿರು ವುದು, ಹಳೆಯ ಎಚ್ಚರಿಕೆ ಚಿತ್ರ ಹಾಕಿ ದ್ದರೆ ತಯಾರಕರಿಗೆ ಮೊದಲನೇ ಅಪರಾ ಧಕ್ಕೆ 2 ವರ್ಷ ಶಿಕ್ಷೆ ಅಥವಾ 5,000 ರೂ. ದಂಡ, ಎರಡನೇ ಅಪರಾಧಕ್ಕೆ 5 ವರ್ಷ ಶಿಕ್ಷೆ ಅಥವಾ 5.000ರೂ. ದಂಡ ವಿಧಿಸ ಬ ಹುದು. ಚಿಲ್ಲರೆ ವ್ಯಾಪಾರಿಗಳಿಗೆ ಮೊದಲ ಅಪ ರಾಧಕ್ಕೆ 1 ವರ್ಷ ಶಿಕ್ಷೆ ಅಥವಾ 1,000 ರೂ. ದಂಡ, ಎರಡನೇ ಅಪರಾಧಕ್ಕೆ 2 ವರ್ಷ ಶಿಕ್ಷೆ ಅಥವಾ 3,000 ರೂ. ದಂಡ ವಿಧಿ ಸಲು ಕಾನೂನಿ ನಲ್ಲಿ ಅವಕಾಶವಿದೆ.

ತಂಬಾಕು ನಿಯಂತ್ರಣ ಕಾರ್ನರ್‌
ಎಲ್ಲ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ತಂಬಾಕು ಸೇವನೆ ನಿಷೇಧ ಎಂಬ ನಿಯಮವಿದೆ. ಶೇ.98.36ರಷ್ಟು ಶಾಲೆ ಮತ್ತು ಶೇ.97.5ರಷ್ಟು ಕಾಲೇಜುಗಳಲ್ಲಿ ನೋ ಸ್ಮೋಕಿಂಗ್‌ ವಲಯ ಮಾಡಲಾಗಿದೆ. ತಂಬಾಕು ನಿಯಂತ್ರಣ ಘಟಕವು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಕಾರ್ನರ್‌ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ವಿನೂತನವಾಗಿ ಡಿಸೈನ್‌ ಮಾಡಲಾದ ತಂಬಾಕು ಸೇವನೆ ಪರಿಣಾಮಗಳ ಕುರಿತು ಕಿರುಚಿತ್ರಗಳನ್ನು ತೋರಿಸುವುದು, ಜಾಗೃತಿ ಮೂಡಿಸುವುದು

ಈ ಕಾರ್ನರ್‌ ಉದ್ದೇಶ. ಅನಧಿಕೃತ ತಂಬಾಕು ಮಾರಾಟ ತಡೆಗೆ ಕ್ರಮ ದಕ್ಷಿಣ ಕನ್ನಡ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪ್ರತೀ ತಾಲೂಕು ಮಟ್ಟದಲ್ಲಿ ಅನಧಿಕೃತ ತಂಬಾಕು ಮಾರಾಟ ತಡೆಯುವ ನಿಟ್ಟಿನಲ್ಲಿ ಕಾರ್ಯಾಚರಣೆಗೆ ತಂಡ ರಚಿಸಲಾಗುವುದು. ಇದೇ ತಿಂಗಳು ತರಬೇತಿ ಬಳಿಕ, ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುವುದು.
 - ಸಿಂಧೂ ಬಿ. ರೂಪೇಶ್‌, ಜಿಲ್ಲಾಧಿಕಾರಿ

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.