ಇಂದು ಅಮಿತ್ ಶಾ ಮಂಗಳೂರಿಗೆ
Team Udayavani, Nov 14, 2018, 11:26 AM IST
ಮಂಗಳೂರು: ನಗರದಲ್ಲಿ ನ. 14ರಂದು ನಡೆಯುವ ಆರೆಸ್ಸೆಸ್‌ನ ದಕ್ಷಿಣ ಭಾರತದ ಬೈಠಕ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ.
ಬೆಂಗಳೂರಿನಿಂದ ಬುಧವಾರ ಸಂಜೆ ಹೊರಟು 5 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಮಿತ್ ಶಾ ಅವರು, ನೇರವಾಗಿ ಮಣ್ಣಗುಡ್ಡದಲ್ಲಿರುವ ಸಂಘನಿಕೇತನಕ್ಕೆ ತೆರಳಿ ಆರೆಸ್ಸೆಸ್ ಬೈಠಕ್‌ನಲ್ಲಿ ಭಾಗವಹಿಸುವರು. ಬಳಿಕ ಮಂಗಳೂರಿನಲ್ಲಿ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು, ಗುರುವಾರ ಬೆಳಗ್ಗೆ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳುವರು.
ಅಮಿತ್ ಶಾ ಅವರ ಜತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಸಹಿತ 5 ಮಂದಿ ಪ್ರಮುಖ ನಾಯಕರು ಆಗಮಿಸುವ ಸಾಧ್ಯತೆಗಳಿವೆ. ಅಮಿತ್ ಶಾ ಅವರನ್ನು ಬಿಜೆಪಿ ಸಂಸದರು, ಶಾಸಕರು ಹಾಗೂ ಪಕ್ಷದ ಜಿಲ್ಲಾ ನಾಯಕರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಿದ್ದಾರೆ.
ಆರೆಸ್ಸೆಸ್ ಸಂಘಟನೆ ಕಾರ್ಯಯೋಜನೆಗಳ ಬಗ್ಗೆ ಚರ್ಚೆಗೆ ಪ್ರಮುಖವಾಗಿರುವ ಈ ಬೈಠಕ್ ಈಗ ದೇಶದಲ್ಲಿ ಎರಡು ಕಡೆ ಆಯೋಜನೆಗೊಂಡು ನಡೆಯುತ್ತಿದೆ. ಉತ್ತರ ಭಾರತದ ಬೈಠಕ್‌ವಾರಾಣಸಿಯಲ್ಲಿ ಹಾಗೂ ದಕ್ಷಿಣ ಭಾರತದ ಬೈಠಕ್ ಮಂಗಳೂರಿನಲ್ಲಿ ನಡೆಯುತ್ತಿದೆ. ಮಂಗಳೂರಿನಲ್ಲಿ ನ. 10ರಿಂದ ದಕ್ಷಿಣ ಭಾರತದ ಬೈಠಕ್
ಆರಂಭಗೊಂಡಿದ್ದು, ನ. 15ರ ವರೆಗೆ ನಡೆಯುತ್ತದೆ. ಇದರಲ್ಲಿ ಆರೆಸ್ಸೆಸ್ ಕಾರ್ಯವಾಹ ಭಯ್ನಾಜಿ (ಸುರೇಶ್ ಜೋಶಿ) ಸಹಿತ ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ. ಆರೆಸ್ಸೆಸ್ ರಾಷ್ಟ್ರ ಮಟ್ಟದ ಬೈಠಕ್‌ನಲ್ಲಿ ಬಿಜೆಪಿ
ರಾಷ್ಟ್ರೀಯಾಧ್ಯಕ್ಷರು ಭಾಗ ವಹಿಸುವುದು ಶಿಷ್ಟಾಚಾರ.
ಮೂರನೇ ಭೇಟಿ
ಅಮಿತ್ ಶಾ ಅವರು ಮಂಗಳೂರಿಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಫೆ. 19ರಂದು ಅವರು ದ.ಕ. ಜಿಲ್ಲೆಗೆ ಆಗಮಿಸಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ ವಾಸ್ತವ್ಯ ಹೂಡಿ
ದ್ದರು. ಫೆ. 20 ಹಾಗೂ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪಕ್ಷದ ವ್ಯಾಪಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಬಳಿಕ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೇ 8ರಂದು ಮಂಗಳೂರು, ಮಂಗಳೂರು ದಕ್ಷಿಣ, ಹಾಗೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನದಿಂದ ಸಂಜೆಯವರೆಗೆ ಮೂರು ಕಡೆ ರೋಡ್‌ಶೋ ನಡೆಸಿದ್ದರು.
ಆರೆಸ್ಸೆಸ್ ಬೈಠಕ್‌ನಲ್ಲಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷರು ಭಾಗವಹಿ ಸುವುದು ಕ್ರಮವಾದರೂ ಲೋಕಸಭಾ ಚುನಾವಣೆಯ ನಿಟ್ಟಿನಲ್ಲಿ ಬಿಜೆಪಿಯ ಕಾರ್ಯತಂತ್ರಗಳಿಗೆ ಕೆಲವು ಮಾರ್ಗ ದರ್ಶನಗಳು ಆರೆಸ್ಸೆಸ್‌ನಿಂದ ಲಭಿಸಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.