ನಾಳೆ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Team Udayavani, Aug 9, 2017, 6:00 AM IST
ಮಂಗಳೂರು: ಸಂತ ಲಾರೆನ್ಸರಿಗೆ ಸಮರ್ಪಿಸಿದ ಧರ್ಮಕೇಂದ್ರ ಹಾಗೂ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಆ. 10ರಂದು ನಡೆಯಲಿದೆ. ಸಂತ ಲಾರೆನ್ಸರಂತೆ ನಾವು ದೇವರ ವಾಕ್ಯದ ಸಾಕ್ಷಿಗಳಾ ಗೋಣ. ಇದು ಈ ವರ್ಷದ ಮಹೋತ್ಸವದ ಸಂದೇಶವಾಗಿದೆ. ಮಹೋತ್ಸ ವಕ್ಕೆ ತಯಾರಿಯಾಗಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಯು ಆ. 1 ರಿಂದ 9ರ ತನಕ ನಡೆಯಿತು. ಆ. 1ರಂದು ನೊವೇನಾ ಕಾರ್ಯಕ್ರಮಗಳಿಗೆ ಪಾಲಿಕೆಯ ಮೇಯರ್ ಕವಿತಾ ಸನಿಲ್ ಧ್ವಜಾರೋಹಣಗೈದು ಚಾಲನೆ ನೀಡಿದರು.
ಮಂಗಳೂರು ಧರ್ಮಪ್ರಾಂತದ ಜುಡಿಶಿಯಲ್ ವಿಕಾರ್ ಫಾ| ವಾಲ್ಟರ್ ಡಿಮೆಲ್ಲೊ ಉದ್ಘಾಟಿಸಿದರು. ಆ. 9ರಂದು ಕಾರ್ಯಕ್ರಮ ಸಮಾರೋಪ ಗೊಳ್ಳಲಿದ್ದು, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾ| ಡಯೋನಿಸಿಯಸ್ ವಾಸ್ ಪ್ರಧಾನ ಗುರುಗಳಾಗಿ ಬಲಿಪೂಜೆಯನ್ನು ಅರ್ಪಿಸಲಿದ್ದಾರೆ.
10ರಂದು ಬೆಳಗ್ಗೆ 10 ಗಂಟೆಗೆ ಮಹೋತ್ಸವದ ಸಂಭ್ರಮಿಕ ಬಲಿ ಪೂಜೆ ನಡೆಯಲಿದೆ. ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್ ಪಾವ್É ಡಿ’ಸೋಜಾ ಪ್ರಧಾನ ಗುರುಗಳಾಗಿ ಬಲಿಪೂಜೆಯನ್ನು ಅರ್ಪಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ
Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.