Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
ಹೊಳೆಯಂತಾದ ರಸ್ತೆಗಳು; ಮನೆ, ಅಂಗಡಿಗಳಿಗೆ ನೀರು
Team Udayavani, May 31, 2024, 12:09 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಗುರುವಾರ ಅಪರಾಹ್ನ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲೇ ಮಳೆ ನೀರು ಹರಿದು ಹೊಳೆಯಂತಾಗಿತ್ತು.
ಮಧ್ಯಾಹ್ನ ವರೆಗೆ ಬಿಸಿಲಿನಿಂದ ಕೂಡಿದ್ದ ಸುಬ್ರಹ್ಮಣ್ಯ ಪರಿಸರದಲ್ಲಿ ಬಳಿಕ ಮಳೆ ಆರಂಭವಾಗಿದ್ದು, ಸಂಜೆ ವರೆಗೂ ಮುಂದುವರೆದಿತ್ತು. ಧಾರಕಾರ ಮಳೆಗೆ ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಮಳೆ ನೀರು ಬಾರೀಪ್ರಮಾಣದಲ್ಲಿ ರಸ್ತೆಯಲ್ಲೇ ಹರಿದು ಹೊಳೆಯಂತಾಗಿತ್ತು. ಪರಿಣಾಮ ವಾಹನ ಸವಾರರು ಸಮಸ್ಯೆ ಅನುಭವಿಸಿದರು.
ಸುಬ್ರಹ್ಮಣ್ಯ, ಬಿಳಿನೆಲೆ, ಯೇನೆಕಲ್ಲು, ಬಳ್ಪ, ಪಂಜ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಗುತ್ತಿಗಾರು, ನಡುಗಲ್ಲು, ಎಲಿಮಲೆ, ಸಂಪಾಜೆ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಕೆಲವು ಮನೆಗಳಿಗೆ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಅಂಗಡಿಯೊಂದಕ್ಕೆ ನೀರು ನುಗ್ಗಿದೆ. ಅದಿಸುಬ್ರಹ್ಮಣ್ಯ ಬಳಿ ಚರಂಡಿ ಸಮಸ್ಯೆಯಿಂದ ಮಳೆ ನೀರು ಆಂಗಡಿಗಳಿಗೆ ನುಗ್ಗಿದೆ. ಜಲಾವೃತ ರಸ್ತೆಯಲ್ಲೀ ದೇವಸ್ಥಾನದ ಅನೆಯನ್ನು ನಡೆಸಿಕೊಂಡು ಬರುವ ವೀಡಿಯೋ ವೈರಲ್ ಅಗಿದೆ. ನೂಚಿಲದಲ್ಲಿ ಅವರಣ ಗೋಡೆ ಕುಸಿದು ಹಾನಿ ಸಂಭವಿಸಿದೆ.
ಹೊಳೆಯಲ್ಲಿ ಹರಿವು ಹೆಚ್ಚಳ
ಹರಿಹರ ಪಳ್ಳತ್ತಡ್ಕದ ಹೊಳೆ, ದರ್ಪಣ ತೀರ್ಥ ಸೇರಿದಂತೆ ಸಣ್ಣ ಪುಟ್ಟ ಹೊಳೆ ಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಬಳ್ಪದಲ್ಲಿ 245 ಮಿ.ಮೀ. ಮಳೆ
ಕಡಬ ತಾಲೂಕಿನ ಬಳ್ಪದಲ್ಲಿ ಮಧ್ಯಾಹ್ನ 2ರಿಂದ 5 ಗಂಟೆಯ ಅವಧಿಯಲ್ಲಿ ಗಂಟೆಯಲ್ಲಿ 245 ಮಿ.ಮೀ. ಮಳೆಯಾಗಿದೆ. ಕಲ್ಲಾಜೆಯಲ್ಲಿ 115 ಮಿ.ಮೀ., ಕಮಿಲದಲ್ಲಿ 120 ಮಿ.ಮೀ. ಮಳೆಯಾಗಿದೆ ಎಂದು ಮಳೆಮಾಪಕರಾಗಿರುವ ಬಾಳಿಲದ ಪಿಜಿಎಸ್‌ಎನ್ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.