‘ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ’
Team Udayavani, Jul 14, 2018, 10:16 AM IST
ಮಹಾನಗರ : ಭಾರತದಲ್ಲಿನ ಅಪಘಾತ ಸಂಖ್ಯೆ ಹೆಚ್ಚಳಕ್ಕೆ ಚಾಲಕನ ನಿರ್ಲಕ್ಷ್ಯ ಮತ್ತು ಮಿತಿ ಮೀರಿದ ವೇಗ ಮುಖ್ಯ ಕಾರಣ ಎಂದು ಮಂಗಳೂರು ಪಶ್ಚಿಮ ಪೊಲೀಸ್ ಠಾಣೆಯ ಜ್ಞಾನಶೇಖರ ಹೇಳಿದರು.
ನಗರದ ರಥಬೀದಿಯಲ್ಲಿರುವ ಡಾ| ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್‌ಕ್ರಾಸ್, ರೇಂಜರ್ ರೋವರ್ ಮತ್ತು ಪಶ್ಚಿಮ ಪೊಲೀಸ್ ಠಾಣೆ, ಮಂಗಳೂರು ಇವುಗಳ ಸಹಯೋಗದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಸಂಚರಿಸುವಾಗ ಪಾಲಿಸಬೇಕಾದ ಸುರಕ್ಷಾ ನೀತಿಗಳನ್ನು ಮತ್ತು ಸುಗಮ ಸಂಚಾರಕ್ಕೆ ಅನುಕೂಲವಾಗುವ ವಿಧಾನಗಳ ಬಗ್ಗೆ ಜಾಗೃತಿ ನೀಡಿದರು.
ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಬ್‌ಇನ್‌ಸ್ಪೆಕ್ಟರ್ ಉದಯ್, ಮಣಿಕಂಠ, ಯುವ ರೆಡ್‌ಕ್ರಾಸ್ ಮತ್ತು ರೋವರ್ ಘಟಕ ಸಂಯೋಜಕ ಡಾ| ಮಹೇಶ್ ಕೆ.ಬಿ. ಮತ್ತು ಪ್ರೊ| ಪುರುಷೋತ್ತಮ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಘಟಕ ಸಂಯೋಜಕ ಡಾ| ಶೈಲಾ ರಾಣಿ ಬಿ. ನಿರೂಪಿಸಿದರು.
ಸಂಚಾರ ನಿಯಮ ಪಾಲಿಸಿ
ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ್ ಹೆಬ್ಟಾರ್‌ಸಿ. ಮಾತನಾಡಿ, ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವುದು ಅತೀ ಆವಶ್ಯಕ. ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಮತ್ತು ರಸ್ತೆ ದಾಟುವಾಗ ಅತ್ಯಂತ ಜಾಗರೂಕರಾಗಿರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.