Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

ಮಂಗಳೂರಿನ ವೀಕ್ಷಕನಿಂದ ಪೊಲೀಸ್‌ಗೆ ದೂರು

Team Udayavani, May 12, 2024, 7:50 AM IST

ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

ಮಂಗಳೂರು: ಧಾರಾವಾಹಿ ಕಾಲ್ಪನಿಕ ಇರಬಹುದು, ಆದರೆ ಅದರ ಪ್ರಭಾವ ನೇರವಾಗಿ ಜನರ ಮೇಲಾಗುವುದಿಲ್ಲವೇ? ಹಾಗಿರುವಾಗ ಧಾರಾವಾಹಿ ನಿರ್ಮಿಸುವವರು ಎಚ್ಚರ ವಹಿಸಬೇಕಲ್ಲವೇ?

ಇಂತಹ ಜಿಜ್ಞಾಸೆ ಹುಟ್ಟು ಹಾಕಿರುವ ಅಪರೂಪದ ಪ್ರಕರಣ ನಡೆದಿದೆ. ಧಾರಾವಾಹಿಯ ದೃಶ್ಯವೊಂದರಲ್ಲಿ ನಟಿಯೊಬ್ಬರು ಹೆಲ್ಮೆಟ್‌ ಇಲ್ಲದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ್ದಕ್ಕಾಗಿ ಪೊಲೀಸರು “ದಂಡ’ ವಿಧಿಸಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಸೀತಾರಾಮ’ ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯದಲ್ಲಿ ಸ್ಕೂಟರ್‌ನಲ್ಲಿ ಇಬ್ಬರು ಸಂಚರಿಸುವ ದೃಶ್ಯವಿತ್ತು. ಅದರಲ್ಲಿ ಸವಾರೆ ಹೆಲ್ಮೆಟ್‌ ಧರಿಸಿದ್ದರೆ ಹಿಂಬದಿ ಕುಳಿತಾಕೆ ಹೆಲ್ಮೆಟ್‌ ಧರಿಸಿರಲಿಲ್ಲ.

ಟಿವಿಯಲ್ಲಿ ಪ್ರಸಾರವಾದ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್‌ ಎಕ್ಕೂರು ಎಂಬವರು, ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿ, ಧಾರಾವಾಹಿಯಲ್ಲಿ ಸಂಚಾರ ನಿಯಮದ ಉಲ್ಲಂಘನೆಯಾಗಿದೆ. ನಟ-ನಟಿಯರು ಸಂಚಾರ ನಿಯಮ ಉಲ್ಲಂಘಿಸುವುದು ಪ್ರೇಕ್ಷಕರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಆ ನಟಿ, ಧಾರಾವಾಹಿಯ ನಿರ್ದೇಶಕ ಮತ್ತು ಪ್ರಸಾರ ಮಾಡಿದ ವಾಹಿನಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದ್ದರು.

ಪೊಲೀಸ್‌ ಆಯುಕ್ತರು ಮಂಗಳೂರು ಸಂಚಾರ ಪೂರ್ವ ಠಾಣೆಗೆ ಪ್ರಕರಣವನ್ನು ವಹಿಸಿದ್ದರು. ಅದರಂತೆ ಜಯಪ್ರಕಾಶ್‌ ಅವರಿಗೆ ಠಾಣೆಯಿಂದ ಹಿಂಬರಹ ನೀಡಿ, ದ್ವಿಚಕ್ರ ವಾಹನದ ಮಾಲಕರಿಗೆ ಮತ್ತು ಧಾರಾವಾಹಿಯ ನಿರ್ದೇಶಕರಿಗೆ ಮಾಹಿತಿ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿತ್ತು. ಧಾರಾವಾಹಿಯ ದೃಶ್ಯವನ್ನು ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಿತ್ರೀಕರಿಸಿದ್ದು, ಮುಂದಿನ ವಿಚಾರಣೆಗೆ ಅಲ್ಲಿನ ಪೊಲೀಸ್‌ ಠಾಣೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಲಾಗಿತ್ತು. ಅರ್ಜಿಯ ಬಗ್ಗೆ ಪರಿಶೀಲನೆ ನಡೆಸಿದ ರಾಜಾಜಿನಗರ ಠಾಣಾ ಪೊಲೀಸರು ಸಂಬಂಧಪಟ್ಟ ನಟಿಗೆ ಮತ್ತು ಮಾಲಕಿಗೆ ಮೇ 10ರಂದು 500 ರೂ. ದಂಡ ವಿಧಿಸಿದ್ದಾರೆ. ಮಾತ್ರವಲ್ಲದೆ, ಇನ್ನು ಮುಂದೆ ತಮ್ಮ ಧಾರಾವಾಹಿಯಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸುವುದಿಲ್ಲ ಎಂದು ಧಾರಾವಾಹಿಯ ಪ್ರೊಡಕ್ಷನ್‌ ಮ್ಯಾನೇಜರ್‌ ರಿಂದ ಹಿಂಬರಹ ಪಡೆದಿದ್ದಾರೆ.

ಧಾರಾವಾಹಿಯಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚರಿಸುವ ದೃಶ್ಯವನ್ನು ನೋಡಿದೆ. ಇದರ ಪರಿಣಾಮದ ಕುರಿತು ಆಯುಕ್ತರಿಗೆ ದೂರು ನೀಡಿದೆ. ಪೊಲೀಸರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತದೆ ಅಂದುಕೊಂಡಿರಲಿಲ್ಲ. ಪೊಲೀಸರು ದಂಡ ವಿಧಿಸಿರುವುದು ಇತರರಿಗೂ ಪಾಠವಾಗಿದೆ, ಮಾತ್ರವಲ್ಲದೆ ಇದರಿಂದ ಜಾಗೃತಿಯೂ ಮೂಡಲಿದೆ.
– ಜಯಪ್ರಕಾಶ್‌ ಎಕ್ಕೂರು

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.