15 ದಿನದೊಳಗೆ ಸಾರಿಗೆ ಅದಾಲತ್‌


Team Udayavani, Nov 19, 2017, 11:55 AM IST

04MNLOKAYUKTA.jpg

ಮಂಗಳೂರು : ಹದಿನೈದು ದಿನದೊಳಗೆ ಮಂಗಳೂರಲ್ಲಿ ಸಾರಿಗೆ ಅದಾಲತ್‌ ಆಯೋಜಿಸುವಂತೆ ಜಿಲ್ಲಾ ಸಾರಿಗೆ ಪ್ರಾಧಿಕಾರಕ್ಕೆ ಕರ್ನಾಟಕ ಲೋಕಾಯುಕ್ತ ನ್ಯಾ| ಪಿ. ವಿಶ್ವನಾಥ ಶೆಟ್ಟಿ ಆದೇಶಿಸಿದ್ದಾರೆ.

ಮಂಗಳೂರಿನ ಪುರಭವನದಲ್ಲಿ ಲೋಕಾಯುಕ್ತರ ಉಪಸ್ಥಿತಿಯಲ್ಲಿ ಶುಕ್ರವಾರ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಠಶೋಕ್‌ ಭಟ್‌ ಅವರು ದೂರು ಸಲ್ಲಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಸಾರಿಗೆ ಅದಾಲತ್‌ ನಡೆಸಬೇಕು ಎಂಬುದಾಗಿ ನಿಯಮ ಇದೆ. ಆದರೆ ಇದನ್ನು ಪಾಲಿಸಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾ ಸಾರಿಗೆ ಅಧಿಕಾರಿ ಜಿ.ಎಸ್‌. ಹೆಗ್ಡೆ ಅವರು ಸಿಬಂದಿ ಕೊರತೆಯಿಂದಾಗಿ ಸಾರಿಗೆ ಅದಾಲತ್‌ ನಡೆಸಲು ಸಾಧ್ಯವಾಗಿಲ್ಲ ಎಂದರು. ಆದರೆ ಸಿಬಂದಿ ಕೊರತೆ ಮುಂದಿಟ್ಟು ಅದಾಲತ್‌ ನಡೆಸದಿರುವುದು ಸರಿಯಲ್ಲ. ತತ್‌ ಕ್ಷಣ ಕ್ರಮ ಕೈಗೊಂಡು 15 ದಿನಗಳಲ್ಲಿ ಅದಾಲತ್‌ ನಡೆಸಬೇಕು. ಮುಂದೆ ಎಂದಿನಂತೆ ನಿಯಮಿತ ಅದಾಲತ್‌
ನಡೆಸಬೇಕು ಎಂದು ಸೂಚಿಸಿದರು. 

ಅಧಿಕಾರಿಗಳ ಜನಸ್ಪಂದನೆ ಅಗತ್ಯ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ.  ಈಗಾಗಲೇ 23 ಜಿಲ್ಲೆಗಳಲ್ಲಿ ದೂರುಗಳ ವಿಚಾರಣೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದ್ದೇನೆ. ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು. ಲಂಚ ಸ್ವೀಕಾರ ಮಾತ್ರ ದುರಾಡಳಿತವಲ್ಲ. ಜನರ ಕೆಲಸ ಮಾಡದಿದ್ದರೂ ದುರಾಡಳಿತವೇ. ಶಿಸ್ತುಕ್ರಮಕ್ಕೆ ಲೋಕಾಯುಕ್ತ ಕಾಯ್ದೆಯಲ್ಲಿ ಅವಕಾಶವಿದೆ ಎಂದು ಲೋಕಾಯುಕ್ತರು ಎಚ್ಚರಿಸಿದರು.

104 ಅರ್ಜಿಗಳು ಕಂದಾಯ ಇಲಾಖೆ, ಮಹಾನಗರ ಪಾಲಿಕೆ, ಪೊಲೀಸ್‌ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಸಹಿತ ವಿವಿಧ ಇಲಾಖೆಗಳಿಗೆ ಸಂಬಂಧಿಸಿ ನ. 15ರಿಂದ17ರ ವರೆಗೆ ಒಟ್ಟು 104 ಅರ್ಜಿಗಳು ಸಲ್ಲಿಕೆಯಾಗಿದ್ದು ಇದರಲ್ಲಿ ನ. 17ರ ಮಧ್ಯಾಹ್ನದ ವರೆಗೆ 32 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗಿದೆ. 

ಮಾಹಿತಿ ಹಕ್ಕುದಾರರಲ್ಲಿ ಕೆಲವು ಮಂದಿ ಈ ಅವಕಾಶವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ದೂರುಗಳು ಬರುತ್ತಿವೆ. ಆದ್ದರಿಂದ ಲೋಕಾಯುಕ್ತಕ್ಕೆ ಅತಿ ಹೆಚ್ಚು ದೂರು ಸಲ್ಲಿಸುತ್ತಿರುವವರ ಹಿನ್ನೆಲೆ ಪರಿಶೀಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ಲೋಕಾಯುಕ್ತ ಅಪರ ನಿಬಂಧಕ ಮೋಹನ್‌, ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ, ಲೋಕಾಯುಕ್ತ ಎಸ್‌ಪಿ ರೇಷ್ಮಾ ಜಿ.ಕೆ., ದ.ಕ. ಜಿಲ್ಲಾ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ಉಪಸ್ಥಿತರಿದ್ದರು.

ಡಿ. 4 ರಂದು ಮತ್ತೆ ವಿಚಾರಣೆ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಬಾಕಿಯುಳಿದಿರುವ ಅರ್ಜಿಗಳನ್ನು ಡಿ. 4ರಂದು ಇತ್ಯರ್ಥಗೊಳಿಸಲಾಗುವುದು. ಅಂದು ಅಪರಾಹ್ನ 2.30ರಿಂದ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮ ನಡೆಯುವುದು. ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರಗಿಸಿ ಅದರ ಬಗ್ಗೆ ವರದಿಯನ್ನು ಡಿ. 4ರಂದು ನೀಡಬೇಕು ಎಂದು ಲೋಕಾಯುಕ್ತ ನ್ಯಾ| ವಿಶ್ವನಾಥ ಶೆಟ್ಟಿ ಸೂಚಿಸಿದರು. 

ಟಾಪ್ ನ್ಯೂಸ್

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mangaluru: ತಾಯಿ-ಮಗಳು ನಾಪತ್ತೆ

1

Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ

arest

Mangaluru: ಮಾದಕ ವಸ್ತು ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣದಲ್ಲಿ ಮೂವರು ವಶಕ್ಕೆ

12

Mangaluru: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

15

Kinnigoli-ಹೊಸಕಾವೇರಿ: ಆಟೋರಿಕ್ಷಾ-ಲಾರಿ ಢಿಕ್ಕಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.