ಕಡಬ: ಚಲಿಸುತ್ತಿದ್ದ ಓಮ್ನಿ ವಾಹನದ ಮೇಲೆ ಬಿದ್ದ ಮರ, ಹೆದ್ದಾರಿಯಲ್ಲಿದೆ ಅಪಾಯಕಾರಿ ಮರಗಳು
Team Udayavani, Sep 12, 2020, 1:56 PM IST
ಕಡಬ: ಚಲಿಸುತ್ತಿದ್ದ ಓಮ್ನಿಯ ಮೇಲೆ ಮರವೊಂದು ಮುರಿದು ಬಿದ್ದ ಪರಿಣಾಮ ಓಮ್ನಿ ಜಖಂಗೊಂಡು ಅದರ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಎಡೆಬಿಡದೆ ಸುರಿಯುತ್ತಿದ್ದ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದುಬಿದ್ದಿದೆ. ಕೊಯಿಲದಿಂದ ಆತೂರಿಗೆ ಕೊಯಿಲ ಶ್ರೀರಾಮ ಎಲೆಕ್ಟ್ರಿಕಲ್ಸ್‌ನ ಮಾಲಕ ಯೋಗೀಶ್‌ರವರು ಚಲಾಯಿಸಿಕೊಂಡು ಹೋಗುತ್ತಿದ್ದ ಓಮ್ನಿ ಕಾರಿನ ಮೇಲೆಯೇ ಮರ ಮುರಿದು ಬಿದ್ದಿದೆ.
ಘಟನೆಯಲ್ಲಿ ಓಮ್ನಿ ಜಖಂಗೊಂಡಿದ್ದು ಚಾಲಕ ಯೋಗೀಶ್‌ರವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ ರಸ್ತೆಗೆ ಮುರಿದು ಬಿದ್ದ ಪರಿಣಾಮ ಸುಮಾರು ಅರ್ಧತಾಸು ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳೀಯರು ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ: ಬೈಕಿನಲ್ಲಿ ಜಲಾವೃತಗೊಂಡ ಸೇತುವೆ ದಾಟುವ ಸಾಹಸ ಮಾಡಿ ನೀರು ಪಾಲಾದ ಯುವಕ
ಇನ್ನಷ್ಟೂ ಅಪಾಯಕಾರಿ ಮರಗಳು:
ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಸಾಕಷ್ಟು ಅಪಾಯಕಾರಿ ಮರಗಳಿದ್ದು ಕೆಲವೊಂದು ಮರಗಳು ಮುರಿದು ಬೀಳುವ ಹಂತದಲ್ಲಿವೆ. ರಸ್ತೆ ಬದಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ಮರಗಳನ್ನು ತೆರವುಗೊಳಿಸುವ ಮೂಲಕ ಮುಂದೆ ಸಂಭವಿಸಬಹುದಾದ ಅನಾಹುತ ತಪ್ಪಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.