B.R. Ambedkar: ಸಂವಿಧಾನ ಶಿಲ್ಪಿಗೆ ಉಭಯ ಜಿಲ್ಲಾಡಳಿತಗಳಿಂದ ನಮನ
Team Udayavani, Dec 7, 2024, 1:06 AM IST
ಮಂಗಳೂರು: ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಡಾ| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮಾಲಾರ್ಪಣೆ ಮಾಡುವ ಮೂಲಕ ಡಾ| ಬಿ. ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನವನ್ನು ಶುಕ್ರವಾರ ಆಚರಿಸಲಾಯಿತು.
ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್. ಆರ್. ತಿಮ್ಮಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಖಾದರ್ ಶಾ ಮೊದಲಾದವರು ಉಪಸ್ಥಿತರಿದ್ದರು.
ಮಣಿಪಾಲ: ಡಾ| ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿರುವ ಡಾ| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಮಾಲಾರ್ಪಣೆ ಮಾಡಿದರು.
ಜಿಪಂ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧಿಧೀಕ್ಷಕ ಡಾ| ಅರುಣ್ ಕೆ., ಅಪರ ಜಿಲ್ಲಾಕಾರಿ ಮಮತಾ ದೇವಿ ಜಿ.ಎಸ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡೂÉರು, ಜಿ.ಪಂ. ಮುಖ್ಯ ಯೋಜನಾಧಿ ಕಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಮಟ್ಟದ ಅಧಿ ಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.