ಹವ್ಯಾಸಿಯಾಗಿ ಜೇನುಕೃಷಿ ಕೈಗೊಂಡಾದರೂ ಉಳಿವಿಗೆ ಪ್ರಯತ್ನಿಸಿ
Team Udayavani, Nov 10, 2017, 2:49 PM IST
ಸುಳ್ಯ: ಇಂದು ವೈಜ್ಞಾನಿಕ ಕೃಷಿ ಹೆಚ್ಚಳವಾದ್ದರಿಂದ ಜೇನುಕೃಷಿಗೆ ಸ್ವಲ್ಪ ತೊಡಕಾಗಿದೆ. ಮುಂದಿನ ದಶಕಗಳಲ್ಲಿ ಅಳಿವಿನ ಅಂಚಿಗೆ ಹೋಗುವ ಆತಂಕವಿರುವುದರಿಂದ ಆಸಕ್ತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜೇನುಕೃಷಿಗೆ ತೊಡಗಿಕೊಳ್ಳುವ ಮೂಲಕ ಉಳಿವಿಗೆ ಪ್ರಯತ್ನಿಸಬೇಕು ಎಂದು ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಭಿಪ್ರಾಯಪಟ್ಟರು.
ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗುರುವಾರ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿದ 7 ದಿನಗಳ ವೈಜ್ಞಾನಿಕ ಜೇನುಗಾರಿಕೆ ಕೃಷಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಆರ್ಥಿಕವಾಗಿ ಮುಂದುವರಿಯಲು ಅಸಾಧ್ಯವಾದರೂ ಹವ್ಯಾಸಿಯಾಗಿಯಾದರೂ ಹೆಚ್ಚು ಮಂದಿ ಜೇನುಕೃಷಿಯಲ್ಲಿ ತೊಡಗಬೇಕು ಎಂದರು.
ಜೇನುಕೃಷಿ ಅತೀ ಸೂಕ್ಷ್ಮ
ಪ್ರಗತಿಪರ ಕೃಷಿ ಜಯರಾಮ ಭಟ್ ಮಾತನಾಡಿ, ಒಂದು ಕುಟುಂಬದವರು ಕನಿಷ್ಠ 5ರಿಂದ 10 ಜೇನು ಪೆಟ್ಟಿಗೆಗಳನ್ನಿಟ್ಟು ಕೃಷಿಯಲ್ಲಿ ತೊಡಗಬಹುದು. ಜೇನು ಕೃಷಿಯಿಂದ ನಮ್ಮಲ್ಲಿ ಶಿಸ್ತು, ಪರಿಪಾಲನೆ, ರಕ್ಷಣೆ, ವೈಯಕ್ತಿಕ ಸ್ವಚ್ಛತೆ ಎಲ್ಲವೂ ರೂಢಿಗತವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧ್ಯಕ್ಷ ಚನಿಯಕಲ್ತಡ್ಕ, ಪ್ರತಿಯೊಬ್ಬರು ಜೇನು ಕೃಷಿಯಲ್ಲಿ ತೊಡಗುವ ಮೂಲಕ ಉಳಿವೆಗೆ ಪ್ರಯತ್ನಿಸಬೇಕು ಎಂದರು.
ರಾಧಾಕೃಷ್ಣ ಬೆಟ್ಟಂಪಾಡಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಕೈಗಾರಿಕಾ ವಿಸ್ತರಣಾಧಿಕಾರಿ ವೀರಪ್ಪ ಗೌಡ ಸ್ವಾಗತಿಸಿ, ವಂದಿಸಿದರು. ತೋಟಗಾರಿಕಾ ಇಲಾಖೆಯ ಧರ್ಮಪಾಲ ನಿರೂಪಿಸಿದರು.
12 ಮಂದಿ ಮಹಿಳೆಯರ ಸಹಿತ ಒಟ್ಟು 50 ಮಂದಿ ಶಿಬಿರಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಪ್ರತೀದಿನ ಬೆಳಗ್ಗೆ 10.30ರಿಂದ ಸಂಜೆ 5ರ ವರೆಗೆ ಜೇನುಕೃಷಿ ಬಗ್ಗೆ ತರಬೇತಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.