“ತುಳುನಾಡಿನ ದೈವಗಳು ಕಾರಣಿಕವಾದವು’
Team Udayavani, Mar 28, 2017, 1:07 PM IST
ಕಿನ್ನಿಗೋಳಿ: ತುಳುನಾಡಿನ ದೈವಗಳು ನಂಬಿದ ಭಕ್ತರ ಆಶೋತ್ತರಗಳನ್ನು ಈಡೇರಿಸುತ್ತ ಬಂದಿ ರುವುದರಿಂದ ಅವುಗಳು ಕಾರಣಿಕವಾಗಿವೆ ಎಂದು ದೈವಸ್ಥಾನದ ಪುರೋಹಿತ ಏಳಿಂಜೆ ಶ್ರೀಧರ ಭಟ್ ಹೇಳಿದರು.
ಅವರು ಮಾ. 25ರಂದು ಕೆಮ್ಮಡೆ – ಮೂರುಕಾವೇರಿ ಶ್ರೀ ವೈದ್ಯನಾಥ ದೈವಸ್ಥಾನದಲ್ಲಿ ವಾರ್ಷಿಕ ನೇಮದ ಸಂದರ್ಭ ಜರಗಿದ ಧಾರ್ಮಿಕ ಸಭೆಯಲ್ಲಿ ಮಾತನಾಡಿ, ಇಂತಹ ಧಾರ್ಮಿಕ ಕಾರ್ಯಕ್ರಮಗಳಿಂದ ಧರ್ಮ ಜಾಗೃತಿ ಮಾಡಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದ ಅನಂತಪದ್ಮನಾಭ ರಾವ್ ಅವರನ್ನು ಸಮ್ಮಾನಿಸಲಾಯಿತು. ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಐಕಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಚೌಟ, ಉದ್ಯಮಿ ಸಂತೋಷ್ ಕುಮಾರ್ ಪುನರೂರು, ಮೆನ್ನಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರೋಜಿನಿ ಸುಧಾಕರ ಗುಜರನ್, ಕೃಷ್ಣ ಶೆಟ್ಟಿ ತೆಂಡೇಲ್, ಉದ್ಯಮಿ ಶ್ರೀನಾಥ್ ಕೆಂಚನಕೆರೆ , ಕಿನ್ನಿಗೋಳಿಯ ಉದ್ಯಮಿ ಡೊಲ್ಫಿ ಸಂತುಮಾಯೊರ್, ಅಧ್ಯಕ್ಷ ತಾರಾನಾಥ ಮತ್ತಿತರರು ಉಪಸ್ಥಿತರಿದ್ದರು. ಕೆ. ಬಿ. ಸುರೇಶ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.