ತುಳು ಸಂಪತ್ತನ್ನು ಹಂಚುವ ಕೆಲಸವಾಗಲಿ

Team Udayavani, Nov 4, 2018, 9:41 AM IST

tulu.jpg

ಪುತ್ತೂರು: ಸಮ್ಮೇಳನದ ಮೂಲಕ ತುಳು ಸಂಪತ್ತಿನ ಬೀಗದ ಕೀಯನ್ನು ಹಂಚುವ ಕೆಲಸ ಆಗಿದೆ. ಬೀಗ ತೆರೆದು ಕೃಷಿ ಮಾಡುವ ಕೆಲಸವನ್ನು ಅವರವರೇ ಮಾಡಿಕೊಳ್ಳಬೇಕು ಎಂದು ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿ ಆಶ್ರಯದಲ್ಲಿ ಮಂಜಲ್ಪಡು ಸುದಾನ ವಸತಿಯುತ ಶಾಲಾ ಆವರಣದಲ್ಲಿ ನ. 3ರಂದು ಜರಗಿದ ತುಳು ಪರ್ಬ – 2018ರ ಮುಗಿತಲದ ಲೇಸ್‌ನಲ್ಲಿ ಸಮಾರೋಪ ಭಾಷಣ ಮಾಡಿದರು.

ತುಳು ಎನ್ನುವುದು ಸಂಪತ್ತು. ಈ ಸಂಪತ್ತನ್ನು ಅನುಭವಿಸಲು ದಾರಿ ತೋರಿಸುವ ಕೆಲಸವನ್ನು ಸಮ್ಮೇಳನಗಳು ಮಾಡಿಕೊಂಡು ಬಂದಿವೆ. ಇದರ ಕೀಯನ್ನು ಜನರಿಗೆ ತೋರಿಸಿಕೊಡುವ ಮೂಲಕ, ಜಾಗೃತಿ, ಅರಿವು ಮೂಡಿಸುವ ಕೆಲಸ ಇಲ್ಲಿ ಮಾಡಲಾಗಿದೆ ಎಂದರು.  

ಸಮ್ಮೇಳನಾಧ್ಯಕ್ಷ ಡಾ| ಬಿ.ಎ. ವಿವೇಕ್‌ ರೈ ಮಾತನಾಡಿ, ಪಾತೆರಕತೆಯಲ್ಲಿ ಕೇಳಿಬಂದಂತೆ ತುಳು ವಿಶ್ವವಿದ್ಯಾಲಯ ಅಗತ್ಯ. 20 -25 ವರ್ಷಗಳಿಂದ ನಿರ್ಣಯ ಮಾಡುತ್ತಾ ಬಂದ ಪರಿಣಾಮ ಅಕಾಡೆಮಿ ಸ್ಥಾಪನೆಯಾಗಿದೆ. ವಿವಿ ಬೇಕೆಂದು ಪದೇ ಪದೇ ಹೇಳುತ್ತಿದ್ದರೆ, ಕೊನೆಗೊಂದು ದಿನ ಅದು ಸಿಕ್ಕಿಯೇ ಸಿಗುತ್ತದೆ. ಆದ್ದರಿಂದ ಆ ವಿಷಯದ ಬಗ್ಗೆ ಮಾತನಾಡುತ್ತಾ ಇರಬೇಕು ಎಂದರು. 

ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ಮುಂದೆ ಬೆಳ್ತಂಗಡಿಯಲ್ಲಿ ನಡೆಯಲಿರುವ ತುಳು ಸಮ್ಮೇಳನದಲ್ಲಿ ವಿಶ್ವವಿದ್ಯಾಲಯ ಬೇಕೆಂಬ ಬಗ್ಗೆ ನಿರ್ಣಯ ಮಂಡಿಸಲಾಗುವುದು ಎಂದರು. ಇದೇ ಸಂದರ್ಭ ಕುದಾಡಿ ವಿಶ್ವನಾಥ ರೈ, ಡಾ| ಯು.ಪಿ. ಶಿವಾನಂದ, ಎಂ.ಎಸ್‌. ಮುಕುಂದ. ಬಾಬು ಮಾಲಡ್ಕ, ಪಾಚು ನಲಿಕೆ, ಅಜಿತ್‌ ಕುಮಾರ್‌ ಜೈನ್‌, ವೆಂಕಮ್ಮ ಐತ್ತಪ್ಪ ನಾಯ್ಕ, ಎನ್‌. ಕಿಟ್ಟಣ್ಣ ರೈ, ಕೇಶವ ಭಂಡಾರಿ, ಪೂಕಳ ಲಕ್ಷ್ಮಿ ನಾರಾಯಣ ಭಟ್‌, ಕುಂಬ್ರ ರಘುನಾಥ ರೈ, ರಾಜು ಪೂಜಾರಿ ಇಪ್ಪನೊಟ್ಟು, ಉಮೇಶ್‌ ಸಾಯಿರಾಮ್‌, ತಾರಾನಾಥ ಪುತ್ತೂರು ಅವರನ್ನು ಸಮ್ಮಾನಿಸಲಾಯಿತು. ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್‌, ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌, ಸ್ವಾಗತ ಸಮಿತಿ ಅಧ್ಯಕ್ಷ ಸೀತಾರಾಮ ರೈ ಸವಣೂರು, ರಿಜಿಸ್ಟ್ರಾರ್‌ ಚಂದ್ರಹಾಸ ರೈ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮೇಳನದಲ್ಲಿ…
ಬೆಳಿಗ್ಗೆ 8 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಮಂಜಲ್ಪಡು ಸುದಾನ ವಸತಿಯುತ ಶಾಲಾ ಆವರಣಕ್ಕೆ ಮೆರವಣಿಗೆ ಹೊರಟಿತು. ಅಲ್ಲಿ  ಮಹಿಳೆಯರಿಂದ ಸ್ವಾಗತ ಕೋರಲಾಯಿತು. ಬಳಿಕ ಕೋಟಿ – ಚೆನ್ನಯ ಆನೆಬಾಗಿಲು ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆ ನೆರವೇರಿತು. ನಂತರ ಕಬಿ ದುನಿಪು – ನಲಿಪು, ಪಾತೆರಕತೆ, ಕಬಿ ಕೂಟ, ಚಾವಡಿ ಚರ್ಚೆ- ದೈವ ನಿಲೆ, ತುಳು – ತುಲಿಪು ನಡೆಯಿತು. ಪಬೊದ ಪೊಲಬು ಮುಗಿತಲದ ಲೇಸ್‌ ಸಮಾರೋಪ ಸಮಾರಂಭ ಜರಗಿತು. ಇದರಲ್ಲಿ 15 ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು. ನಂತರ ತುಳು ರಂಗ್‌ ರಂಗಿತೊ: ತೆಲಿಕೆ ನಲಿಕೆ – ಬಾಯಿ ನಿಲಿಕೆ, ಕೃಪನ ಮದಿಪು ಪೊಜೊವುಲೆ ಯಕ್ಷಗಾನ ತಾಳಮದ್ದಳೆ ಜರಗಿತು. 3 ಸಾವಿರಕ್ಕೂ ಅಧಿಕ ಮಂದಿ ಮಧ್ಯಾಹ್ನದ ಊಟದಲ್ಲಿ ಪಾಲ್ಗೊಂಡರು. ಬೆಳಗ್ಗೆ – ಸಂಜೆ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಮಳೆ ಸಿಂಚನದೊಂದಿಗೆ ಕಾರ್ಯಕ್ರಮಕ್ಕೆ ತೆರೆ ಬಿದ್ದಿತು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

accident

Bantwal: ಕೆಎಸ್‌ಆರ್‌ಟಿಸಿ ಬಸ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.