ತುಳು ಜನಪದ ಆಚರಣೆ ಕಂಬುಲದ ಕೋರಿ

Team Udayavani, Nov 26, 2017, 5:16 PM IST

26-Nov-16.jpg

ಪುಂಜಾಲಕಟ್ಟೆ: ಕೃಷಿ ಪ್ರಧಾನ ತುಳು ನಾಡಿನಿಂದ ದೂರ ಸರಿಯುತ್ತಿರುವ ಸಾಂಪ್ರದಾಯಿಕ ಆಚರಣೆಗಳ ಪೈಕಿ ಕಂಬಳ ಕೋರಿ ಎನ್ನುವ ಗದ್ದೆ ಪೂಜೆಯೂ ಒಂದು. 500 ವರ್ಷಗಳ ಇತಿಹಾಸದ ಬಲು ಅಪರೂಪದ ಕಂಬಳ ಕೋರಿ ಆಚರಣೆಯನ್ನು ವರ್ಷಂಪ್ರತಿ ನಡೆಸುವಂತೆ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗುತ್ತಿನ ಮನೆಯಲ್ಲಿ ಈ ವರ್ಷವೂ ಸಂಪ್ರದಾಯ ಬದ್ಧವಾಗಿ ನಡೆಸಿಕೊಂಡು ಬಂದಿದ್ದು ಗ್ರಾಮಸ್ಥರ ಹಾಗೂ ಗುತ್ತಿನ ಮನೆಯವರ ಸೇರುವಿಕೆಯೊಂದಿಗೆ ಸಂಭ್ರಮ ಸಡಗರದಿಂದ ನಡೆದಿದೆ.

ಕಂಬಳ ಕೋರಿ ಎಂದರೆ…
ಭೂದೇವಿಯನ್ನು ಆರಾಧಿಸುವುದು ಕೃಷಿ ಸಂಸ್ಕೃತಿಯ ಅವಿಭಾಜ್ಯ ಕ್ರಮ. ಅದರ ಒಂದು ಅಂಗವೇ ಕಂಬಳ ಕೋರಿ ಎನ್ನುವ ಗದ್ದೆ ಪೂಜೆ. ಈ ಹಿನ್ನೆಲೆಯಲ್ಲಿ ನಿಗದಿ ಪಡಿಸಿದ ದಿನದಂದು ರೈತರೆಲ್ಲಾ ಗ್ರಾಮದ ಪ್ರಮುಖನ ಮನೆಯಲ್ಲಿ ಸೇರಿ, ಜಾತಿ,ಪಂಗಡದ ಭೇದವಿಲ್ಲದೆ ಕಂಬಳಕೋರಿ ಆಚರಿಸುತ್ತಾರೆ. ದೈವಗಳ ಆರಾಧನೆಯೂ ಇದರಲ್ಲಿ ಪ್ರಧಾನವಾಗಿರುವುದರಿಂದ ಗ್ರಾಮಸ್ಥರೆಲ್ಲಾ ಶ್ರದ್ಧೆ , ಭಯ, ಭಕ್ತಿಯಿಂದ ಪಾಲ್ಗೊಳ್ಳುತ್ತಾರೆ. ಕಂಬಳ ಕೋರಿಗೆ 2 ದಿನ ಮೊದಲು ಡೆಕ್ಕೋರಿ ಎಂಬ ಪೂರ್ವ ಸಿದ್ಧತಾ ಕಾರ್ಯಕ್ರಮವಿರುತ್ತದೆ.

ಪೂಕರೆ ಬಂಡಿ
ಅದಾಗಲೇ ಗದ್ದೆಯ ಬದಿಯಲ್ಲಿ ನಾಗಬ್ರಹ್ಮ ದೈವ ಅಣಿ ಏರಿಸಿ ಸಿದ್ಧಗೊಂಡಿರುತ್ತದೆ. ಅಲ್ಲಿ ಕಲ್ಲಿನ ಚಕ್ರವುಳ್ಳ ಸಾಗುವಾನಿ ಮರದ ಪಟ್ಟಿಗಳುಳ್ಳ ತೇರಿನಾಕಾರದ ಪೂಕರೆ ಬಂಡಿಯನ್ನು ಕೇಪುಳ ಹೂವುಗಳಿಂದ ಅಲಂಕರಿಸಿ ಸಿದ್ಧಗೊಳಿಸಲಾಗಿರುತ್ತದೆ. ಈ ಪೂಕರೆ ಬಂಡಿಯನ್ನು ಎಳೆಯಲು ಪಲ್ಲೆ ಎಂಬ ಬೀಳಲನ್ನೇ ಬಳಸಲಾಗುತ್ತದೆ. ಬಳಿಕ ಉಳುಮೆ ಮಾಡುತ್ತಿದ್ದ ಕೋಣಗಳನ್ನು ಮೇಲೆ ಬರುವಂತೆ ಹಾಗೂ ಪೂಕರೆ ಬಂಡಿಯನ್ನು ಎಳೆಯುವಂತೆ ನಾಗಬ್ರಹ್ಮ ದೈವ ಅಪ್ಪಣೆ ನೀಡುತ್ತದೆ. ಗ್ರಾಮಸ್ಥರೆಲ್ಲ ಸೇರಿ ಸಂಭ್ರಮದಿಂದ ಪೂಕರೆ ಬಂಡಿಯನ್ನು ಎಳೆದುಕೊಂಡು ಗದ್ದೆಯ ಮಧ್ಯ ಭಾಗಕ್ಕೆ ತಂದು ನಿಲ್ಲಿಸುತ್ತಾರೆ. ವಿಶಾಲ ಗದ್ದೆಗೆ ನಾಗಬ್ರಹ್ಮ ದೈವ ಎಲ್ಲರ ಜೊತೆ ಸುತ್ತು ಬಂದು ಉತ್ತಮ ಫಸಲು ಬರುವಂತೆ ಹರಸುತ್ತದೆ.

ಕೋಣಗಳಿಂದ ಉಳುಮೆ
ಕಂಬಳ ಕೋರಿಯ ದಿನ ಮುಂಜಾನೆ ಗುತ್ತಿನ ಮನೆಯಿಂದ ಹೊರಟ ಕೊರಗಜ್ಜ ದೈವ ಗ್ರಾಮದ ವಿವಿಧ ಮನೆಗಳಿಂದ ಬಂದ ಕೋಣಗಳೊಂದಿಗೆ ಕಂಬಳ ಗದ್ದೆಗೆ ಬಂದು ಕೋಣಗಳನ್ನು ಗದ್ದೆಗೆ ಇಳಿಯಲು ಅಪ್ಪಣೆ ನೀಡುತ್ತದೆ. ಎಲ್ಲ ಕೋಣಗಳನ್ನೂ ಒಮ್ಮೆಲೆ ಗದ್ದೆಗೆ ಇಳಿಸಿ ಮಧ್ಯಾಹ್ನದ ತನಕ ಗದ್ದೆ ಉಳುತ್ತಾರೆ. ಈಗ ಕೋಣ ಸಾಕುವವರ ಸಂಖ್ಯೆ ವಿರಳವಾಗಿ, ಕೋಣಗಳನ್ನು ಸಾಂಕೇತಿಕವಾಗಿಯಷ್ಟೇ ಗದ್ದೆಗೆ ಇಳಿಸಲಾಗುತ್ತದೆ. ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಲಾಗುತ್ತದೆ. ಇತ್ತ ಗುತ್ತಿನ ಮನೆಯಲ್ಲಿ ಗ್ರಾಮ ದೈವಗಳಿಗೆ ಪರ್ವ(ವಿಧಿಪೂರ್ವಕ ಆಹಾರ) ಹಾಕಿಸಿ, ಪಂಜುರ್ಲಿ ದೈವದ ಹಗಲು ನೇಮ (ನರ್ತನ ಸೇವೆ) ನಡೆಯುತ್ತದೆ. ಒಂದು ಗಂಟೆಯ ಕಾಲ ನೇಮ ನಡೆದು, ದೈವ ಅಂಗಿ ಏರಿಸುವ (ತೊಡುವ) ಸಂದರ್ಭ ದೈವದ ಮುಕ್ಕಾಲ್ದಿ (ಪಾತ್ರಿ), ನಾಗಬ್ರಹ್ಮ ದೈವ(ವೇಷಧಾರಿ ಪಾತ್ರಿ), ಗುತ್ತಿನ ಯಜಮಾನ, ತಂತ್ರಿ ಬಳಗ ಹಾಗೂ ಗ್ರಾಮಸ್ಥರೊಂದಿಗೆ ಕೊಂಬು ವಾಲಗದ ಹಿಮ್ಮೇಳದೊಂದಿಗೆ ಕಂಬಳ ಗದ್ದೆಗೆ ಬರುತ್ತಾರೆ.

ಟಾಪ್ ನ್ಯೂಸ್

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.