ತುಳು ವಿಚಾರಗೋಷ್ಠಿ, ಸಂವಾದ
Team Udayavani, Dec 31, 2017, 9:57 AM IST
ಮಹಾನಗರ: ಧರ್ಮಗಳು ಬೆನ್ನೆಲುಬಾಗಿ ನಿಂತರೆ ತುಳು ಭಾಷೆಯನ್ನು ಎತ್ತರಕ್ಕೆ ಬೆಳೆಸಲು ಸಾಧ್ಯ ಎಂದು
ಮಂಗಳೂರು ವಿಶ್ವವಿದ್ಯಾನಿಲದ ಎಸ್‌ವಿಪಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಪ್ರೊ| ಅಭಯ ಕುಮಾರ್ ಹೇಳಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಶನಿವಾರ ತುಳು ಭವನದಲ್ಲಿ ಆಯೋಜಿಸಲಾದ ಚಾವಡಿ ಕಾರ್ಯಕ್ರಮದ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ‘ತುಳು ತಲೆ ಎತ್ತುವ ಬಗೆ’ ಎಂಬ ವಿಷಯದಲ್ಲಿ ಮಾತನಾಡಿದರು. ಎಲ್ಲ ಧರ್ಮದ ಪ್ರಾರ್ಥನ ಮಂದಿರಗಳಲ್ಲಿ ತುಳು ಭಾಷೆಯ ಕಾರ್ಯಕ್ರಮಗಳಿಗೆ ಪ್ರಾಧಾನ್ಯತೆ ದೊರೆಯಬೇಕು. ಈ ಮೂಲಕ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿಯ ಪ್ರಚಾರವಾದಾಗ ತುಳು ಭಾಷೆ ಎಲೆ ಎತ್ತಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದರು.
ಮಾತು ರೂಢಿಸಿಕೊಳ್ಳಿ
ದಿನನಿತ್ಯದ ಚಟುವಟಿಕೆಗಳಲ್ಲಿ ನಾವು ತುಳು ಭಾಷೆ ಮಾತನಾಡುವುದನ್ನು ರೂಢಿಸಿ ಕೊಳ್ಳಬೇಕಾಗಿದೆ. ಇದು ಕೂಡ ತುಳು ಭಾಷಾ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ತುಳುವಿಗೆ ಸಂಬಂಧಿಸಿ ಸಾಹಿತ್ಯ ರಚನೆಯ ಮನಸ್ಸು 13ನೆ ಶತಮಾನದಲ್ಲಿಯೇ ಆರಂಭಗೊಂಡಿತ್ತು. ಆ ಮನಸ್ಸೇ ಇಂದು ತುಳುವಿಗೆ ಗಟ್ಟಿ ಬುನಾದಿಯನ್ನು ಹಾಕಿಕೊಟ್ಟಿದೆ. ಹಾಗಿದ್ದರೂ ತುಳುವಿಗೆ ಅಧಿಕೃತ ಮಾನ್ಯತೆ ಇಲ್ಲವಾಗಿದ್ದು, ಇನ್ನೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರದಿರುವುದು ಕೂಡ ತುಳು ಭಾಷೆ ನಿರೀಕ್ಷಿತ ಮಟ್ಟದಲ್ಲಿ ತಲೆ ಎತ್ತದಿರಲು ಕಾರಣ ಎಂದರು.
ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ವಹಿಸಿದ್ದರು. ತುಳು ಸಂಸ್ಕೃತಿ
ಆಚರಣೆಯ ಸ್ವರೂಪ ವಿಷಯದಲ್ಲಿ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಧ್ಯಾಪಕ ಡಾ| ಪೂವಪ್ಪ ಗಣಿಯೂರು ಮಾತನಾಡಿದರು. ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಮೊದಲು ಅರಿವು ಪಚ್ಚೆ ಬಳಗ ಬಂಟ್ವಾಳ ತಂಡದಿಂದ ತುಳು ಗೀತಗಾಯನ ಕಾರ್ಯಕ್ರಮ ನಡೆಯಿತು. ರಿಜಿಸ್ಟ್ರಾರ್ ಚಂದ್ರಹಾಸ ರೈ ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ಡಾ| ವಾಸುದೇವ ಬೆಳ್ಳೆ ಸ್ವಾಗತಿಸಿದರು. ವಿದ್ಯಾಶ್ರೀ ವಂದಿಸಿ, ನರೇಶ್ ಕುಮಾರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.