ಅಲೆ ಅಬ್ಬರ; 2 ದಿನ ಮಳೆ?
Team Udayavani, May 11, 2019, 8:11 AM IST
ಮಂಗಳೂರು/ಮಲ್ಪೆ: ಅರಬಿ ಸಮುದ್ರದಲ್ಲಿ ಉಂಟಾಗಿರುವ ನಿಮ್ನ ಒತ್ತಡದ ಪರಿಣಾಮ ರವಿವಾರದಿಂದ 2 ದಿನಗಳ ಕಾಲ ಕರಾವಳಿಯ ಅಲ್ಲಲ್ಲಿ ಸಾಧಾರಣ ಮಳೆಯಾಗುವ
ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಅಲೆಗಳ ಅಬ್ಬರ ಹೆಚ್ಚಿದೆ. ಗುರುವಾರದಿಂದ ಅಲೆಗಳಲ್ಲಿ ವ್ಯತ್ಯಾಸ ಗೋಚರಿಸಿದ್ದು, ಶುಕ್ರವಾರ ಮತ್ತಷ್ಟು ಬಿರುಸುಗೊಂಡಿದೆ. ಆದರೆ
ಮೀನುಗಾರಿಕೆ ಬೋಟುಗಳು ವಾಪಸಾಗಿರುವ ವರದಿಯಾಗಿಲ್ಲ.
ಟೂರಿಸ್ಟ್ ಬೋಟ್‌ಯಾನ ಸ್ಥಗಿತ
ಅಲೆಗಳ ಏರಿಳಿತ ಹೆಚ್ಚಾಗಿದ್ದರಿಂದ ಶುಕ್ರವಾರ ಮಧ್ಯಾಹ್ನದ ಮೇಲೆ ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಟೂರಿಸ್ಟ್ ಬೋಟುಗಳ ಪ್ರಯಾಣವನ್ನು ನಿಲ್ಲಿಸಲಾಗಿತ್ತು. ಮಲ್ಪೆ ಬೀಚ್‌ನಲ್ಲೂ ಯಾವುದೇ ಜಲಸಾಹಸ ಕ್ರೀಡೆಗಳನ್ನು ನಡೆಸಲಾಗಲಿಲ್ಲ. ಹುಣ್ಣಿಮೆ ಸಮೀಪ ಅಲೆಗಳಲ್ಲಿ ಏರಿಳಿತ ಉಂಟಾಗುವುದು ಸಾಮಾನ್ಯ. ಹಾಗಾಗಿ ಇನ್ನೂ ನಾಲ್ಕೈದು
ದಿನಗಳವರೆಗೆ ಸಮುದ್ರದಲ್ಲಿ ಈ ವ್ಯತ್ಯಾಸ ಇರುವ ಸಾಧ್ಯತೆ ಇದೆ ಎಂದು ಮೀನುಗಾರರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ ವಾಟರ್ ಗೇಮ್ಸ್ ಮತ್ತು ಪ್ರವಾಸಿಗರನ್ನು ಸಮುದ್ರಕ್ಕೆ ಇಳಿಯಲು ಬಿಡಲಾಗುತ್ತಿದೆ ಎಂದು ಪಣಂಬೂರು ಬೀಚ್ ಅಭಿವೃದ್ಧಿ ನಿಗಮದ ಸಿಇಒ ಯತೀಶ್ ಬೈಕಂಪಾಡಿ ತಿಳಿಸಿದ್ದಾರೆ.
ಕಡಲ್ಕೊರೆತ ಸಾಧ್ಯತೆ: ಎಚ್ಚರಿಕೆ
ಕಾಸರಗೋಡು: ಮುಂದಿನ 24 ತಾಸುಗಳಲ್ಲಿ ತೀವ್ರ ಕಡಲ್ಕೊರೆತ ತಲೆ ದೋರುವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಕೂಡದೆಂದು ತಿರುವನಂತಪುರದ ಹವಾಮಾನ ನಿಗಾ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.