Dakshina Kannada ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್; ಒಂದು ಸಾವು
Team Udayavani, Dec 25, 2023, 11:07 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಪ್ರಮಾಣವನ್ನು ಏರಿಕೆ ಮಾಡಲಾಗಿದ್ದು, ಪಾಸಿಟಿವ್ ಕೂಡ ಹೆಚ್ಚಾಗು ತ್ತಿದೆ. ಸೋಮವಾರ 62 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 5 ಮಂದಿಗೆ ಸೋಂಕು ದೃಢಪಟ್ಟಿದೆ.
ಪುತ್ತೂರು ಮೂಲದ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣ 9ಕ್ಕೆ ಏರಿಕೆ ಕಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ಕೋವಿಡ್ ರೂಪಾಂ ತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಿ, ಪ್ರತೀ ದಿನ 331 ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸು ವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಡಿ. 25ರಂದು ಜಿಲ್ಲೆಯಲ್ಲಿ 62 ಮಂದಿಯನ್ನು ತಪಾಸಣೆ ಗೆ ಒಳಪಡಿಸಲಾಗಿದೆ. ತಪಾಸಣೆಗೆ ಸಂಬಂಧಪಟ್ಟ ಕಿಟ್‌ಗಳು ಈಗಾಗಲೇ ಸರಕಾರದಿಂದ ಪೂರೈಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ತಪಾಸಣೆಗೆ ನಡೆಸುವ ಗುರಿ ಆರೋಗ್ಯ ಇಲಾಖೆ ಹೊಂದಿದೆ.
ಮೂವರು ಐಸಿಯುನಲ್ಲಿ
ದ.ಕ.ದಲ್ಲಿ ಕೋವಿಡ್ ದೃಢಪಟ್ಟ ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಖಾಸಗಿ ಮತ್ತು ಒಬ್ಬರು ಸರಕಾರಿ ಆಸ್ಪತ್ರೆ ಯಲ್ಲಿ ಐಸಿಯುನಲ್ಲಿದ್ದಾರೆ. ಇಬ್ಬರು ಗೃಹ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿ ನಿರೀಕ್ಷೆಯಲ್ಲಿ ಇಲಾಖೆ
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಸಾವನ್ನಪ್ಪಿ ರುವ ಜಾರ್ಝಂಡ್ ಮೂಲದ 40 ವರ್ಷದ ವ್ಯಕ್ತಿಯ ಗಂಟಲ ದ್ರವ ಮಾದರಿಯನ್ನು ಪುಣೆಯ ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್‌ಗ ಕಳುಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಕೋವಿಡ್ ರೂಪಾಂತರಿ ಜೆಎನ್.1 ವೈರಸ್ ಇದೆಯೇ ಎಂದು ದೃಢಪಡಲಿದೆ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಶೂನ್ಯ
ಉಡುಪಿ: ಜಿಲ್ಲೆಯಲ್ಲಿ ಸೋಮ ವಾರ 94 ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸ ಲಾಗಿದ್ದು, ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವ್ ಪ್ರಕರಣಗಳಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.