ಮನಪಾದಿಂದ ಎರಡು ನೂತನ ಆ್ಯಪ್‌ ಬಿಡುಗಡೆಗೆ ಚಿಂತನೆ

ಜನಸಾಮಾನ್ಯರ ಸಮಸ್ಯೆಗೆ ಸ್ಪಂದನೆ

Team Udayavani, Nov 27, 2019, 4:34 AM IST

as-30

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ ಪೌರ ಸೇವೆಗಳು ಆನ್‌ಲೈನ್‌ನಲ್ಲಿ ಲಭಿಸಲಿವೆ ಎಂಬ ಭರವಸೆ ನೀಡಿ ಹಲವು ಸಮಯಗಳೇ ಕಳೆದಿದ್ದರೂ ಹೆಚ್ಚಿನ ಪ್ರಕ್ರಿಯೆಗಳು ಇನ್ನೂ ಆರಂಭಗೊಂಡಿಲ್ಲ. ಇದೀಗ ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಲು ಹೊಸ ಎರಡು ಆ್ಯಪ್‌ ಬಿಡುಗಡೆ ಮಾಡಲು ಪಾಲಿಕೆ ಮುಂದಾಗಿದೆ.

ನಗರದ ನಾಗರಿಕರ ಮೂಲ ಸೌಕರ್ಯ, ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕಾಗಿ ಆ್ಯಪ್‌ ಮೂಲಕ ತಂತ್ರಜ್ಞಾನದ ಸ್ಪರ್ಶವನ್ನು ನೀಡಲು ಪಾಲಿಕೆ ಸಿದ್ಧತೆ ನಡೆಸಿದೆ. ಈ ಕುರಿತಂತೆ ಶಾಸಕರಾದ ವೇದವ್ಯಾಸ್‌ ಕಾಮತ್‌, ಡಾ| ಭರತ್‌ ಶೆಟ್ಟಿ ವೈ. ಅವರು ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ತಾಂತ್ರಿಕ ಪ್ರಕ್ರಿಯೆಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆ ಆದರೆ ಇನ್ನು ಕೆಲವೇ ದಿನಗಳಲ್ಲಿ ಪಾಲಿಕೆ ವ್ಯವಹಾರ ಹಾಗೂ ಜನರ ಸಮಸ್ಯೆ ಆಲಿಸಲು ಎರಡು ಆ್ಯಪ್‌ಗ್ಳು ಜನ ಸೇವೆಗೆ ಲಭಿಸಲಿವೆ. ಮೊಬೈಲ್‌ ಮೂಲಕ ನಿಗದಿತ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಸಮಸ್ಯೆಯನ್ನು ತಿಳಿಸಬಹುದು.

ಸಮಸ್ಯೆ ಹೇಳಲು ಹೊಸ ಆ್ಯಪ್‌
ಮನಪಾ ವ್ಯಾಪ್ತಿಯಲ್ಲಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆ ಎದುರಾದರೆ ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸುವುದೇ ಜನರಿಗೆ ಬಹುದೊಡ್ಡ ಸಮಸ್ಯೆ. ಇದೀಗ ಆ ಸಮಸ್ಯೆ ಪರಿಹಾರಕ್ಕಾಗಿ ಪಾಲಿಕೆ ಆ್ಯಪ್‌ ಪರಿಚಯಿಸುತ್ತಿದೆ. ಅದರ ಮೂಲಕ ನಮ್ಮ ಸುತ್ತಮುತ್ತಲಿನ ಸಮಸ್ಯೆಗಳನ್ನು ಪಾಲಿಕೆ ಅಧಿಕಾರಿಗಳಿಗೆ ಸುಲಭವಾಗಿ ತಲುಪಿಸಬಹುದು ಹಾಗೂ ವೇಗವಾಗಿ ಪರಿಹಾರವನ್ನು ಪಡೆದುಕೊಳ್ಳಬಹುದು.

ಆ್ಯಪ್‌ ಮೂಲಕ ಟ್ರೇಡ್‌ ಲೈಸನ್ಸ್‌
ಸಮಸ್ಯೆ ತಿಳಿಸಲು ಒಂದು ಆ್ಯಪ್‌ ಆದರೆ ಮನಪಾದ ಸವಲತ್ತುಗಳನ್ನು ಪಡೆಯುವುದಕ್ಕೆ ಮತ್ತೂಂದು ಆ್ಯಪ್‌ ಮಾಡಲು ಪಾಲಿಕೆ ಚಿಂತನೆ ನಡೆಸಿದೆ. ಇದರಲ್ಲಿ ಮೊದಲ ಹಂತದಲ್ಲಿ ಟ್ರೇಡ್‌ ಲೈಸನ್ಸ್‌ ಮಾತ್ರ ಪಡೆಯುವ ಅವಕಾಶವಿದ್ದು, ಮುಂದಿನ ಹಂತದಲ್ಲಿ ಇತರ ಸೇವೆಗಳನ್ನು ಪಡೆಯುವಂತೆ ಆ್ಯಪ್‌ ಮಾರ್ಪಾಡು ಮಾಡಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಪಾಲಿಕೆಗೆ ತಿಳಿಸಿದ್ದಾರೆ. ಈ ಎರಡು ಆ್ಯಪ್‌ಗ್ಳನ್ನು ಡೌನ್‌ಲೋಡ್‌ ಮಾಡಿಕೊಂಡು ತಮ್ಮ ಕೆಲಸಗಳನ್ನು ಸಾರ್ವಜನಿಕರು ಮಾಡಿಕೊಳ್ಳಬಹುದು. ಆ್ಯಪ್‌ ತಯಾರಿಗೆ ತಾಂತ್ರಿಕ ಪ್ರಕ್ರಿಯೆಗಳು ಆರಂಭಗೊಳ್ಳಲಿದ್ದು, ಇನ್ನು ಕೆಲವೇ ಸಮಯಗಳಲ್ಲಿ ಜನಸಾಮಾನ್ಯರಿಗೆ ಈ ಸೇವೆಗಳು ಲಭಿಸಲಿವೆ.

ಆನ್‌ಲೈನ್‌ ಸೇವೆಗೆ ಇನ್ನೂ ಮೀನಮೇಷ
ನೀರಿನ ಶುಲ್ಕ, ಖಾತಾ ಬದಲಾವಣೆ, ಖಾತಾ ನೋಂದಣಿ, ನೀರಿನ ಸಂಪರ್ಕ, ಯುಜಿಡಿ ಸಂಪರ್ಕ, ಪುರಭವನದ ಬಾಡಿಗೆ, ಮೈದಾನದ ಬಾಡಿಗೆ ಸಹಿತ ಪಾಲಿಕೆಯಿಂದ 10 ಸೇವೆಗಳನ್ನು ಆನ್‌ಲೈನ್‌ ಮೂಲಕ ವ್ಯವಹರಿಸಬಹುದು ಎಂಬುದಾಗಿ ಪಾಲಿಕೆ ಈ ಹಿಂದೆ ತಿಳಿಸಿತ್ತು. ಆದರೆ ವರ್ಷ ಕಳೆದರೂ ಆನ್‌ಲೈನ್‌ ಸೇವೆ ಇನ್ನೂ ಆರಂಭವಾಗಿಲ್ಲ.

ಪ್ರಸ್ತುತ ನೀರಿನ ಬಿಲ್‌, ಪುರಭವನ ಬಾಡಿಗೆ ಸಹಿತ ಬಹುತೇಕ ಸೇವೆಗಳಿಗಾಗಿ ಜನರು ಪಾಲಿಕೆ ಕಚೇರಿ ಅಥವಾ ಮಂಗಳೂರು ಒನ್‌ಗೆ ತೆರಳಬೇಕಾಗಿದೆ. ಅಲ್ಲಿ ಗಂಟೆಗಟ್ಟಲೆ ನಿಂತು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಬೇಕಾಗಿದೆ. ಇದಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ಆನ್‌ಲೈನ್‌ ಸೇವೆ ಆರಂಭಿಸಲಾಗುವುದು ಎಂಬುದಾಗಿ ಪಾಲಿಕೆ ಹೇಳುತ್ತಾ ಬಂದಿದ್ದರೂ ಈವರೆಗೆ ಆನ್‌ಲೈನ್‌ ಸೇವೆ ಆರಂಭವಾಗಿಲ್ಲ.

ಬಿಬಿಎಂಪಿ ಆ್ಯಪ್‌ ಮಂಗಳೂರಿಗೂ ಬರಲಿ
ಬೆಂಗಳೂರಿನ ಬಿಬಿಎಂಪಿಯಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಪರಿಹರಿಸುವ ನಿಟ್ಟಿನಲ್ಲಿ “ಸಹಾಯ ಆ್ಯಪ್‌’ ಇದೆ. ಇದರಲ್ಲಿ ಸಾರ್ವಜನಿಕರು ಘನತ್ಯಾಜ್ಯ ನಿರ್ವಹಣೆ, ರಸ್ತೆ ಅವ್ಯವಸ್ಥೆ ಮುಂತಾದ ಸಮಸ್ಯೆಗಳ ಬಗ್ಗೆ ದೂರು ನೀಡುವ ವ್ಯವಸ್ಥೆ ಇದೆ. ಘನತ್ಯಾಜ್ಯ ನಿರ್ವಹಣೆ ಸಮಸ್ಯೆಯ ಬಗ್ಗೆ ದೂರು ದಾಖಲಾದ 12 ತಾಸುಗಳೊಳಗೆ ಪರಿಹರಿಸಬೇಕು ಎಂಬ ನಿಯಮ ಇದೆ. ಇದರಲ್ಲಿ ಗಣನೀಯ ಪ್ರಮಾಣದಲ್ಲಿ ದೂರುಗಳು ದಾಖಲಾಗುತ್ತಿದ್ದು, ಕಾಲಮಿತಿಯಲ್ಲಿ ಬಗೆಹರಿಸಬೇಕು ಎಂಬ ಕಾರಣಕ್ಕಾಗಿ ಸೂಕ್ತ ಕ್ರಮಗಳನ್ನು ಅಧಿಕಾರಿಗಳ ವಿರುದ್ಧ ಬಿಬಿಎಂಪಿ ಕೈಗೊಳ್ಳುತ್ತಿದೆ. ಇದೇ ರೀತಿಯಲ್ಲಿ ಮನಪಾ ಆ್ಯಪ್‌ ಕಾರ್ಯಚರಿಸಲಿ ಎಂಬುದು ಸಾರ್ವಜನಿಕರ ಆಗ್ರಹ.

ಶೀಘ್ರ ಸೇವೆ ಲಭ್ಯ
ಪಾಲಿಕೆಯ ಸೇವೆಗಳನ್ನು ಜನರಿಗೆ ಆನ್‌ಲೈನ್‌ ಮೂಲಕ ನೀಡುವ ಸಲುವಾಗಿ ಪಾಲಿಕೆ ಆಯುಕ್ತರು ಹಾಗೂ ಉಪ ಆಯುಕ್ತರು ಹೆಚ್ಚು ಆಸಕ್ತಿ ವಹಿಸಿದ್ದು, ಅವರ ಆಸಕ್ತಿ ಕಂಡು ಜನಪ್ರತಿನಿಧಿಗಳು ಅವರಿಗೆ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದೇವೆ. ಆ್ಯಪ್‌ ಕೆಲಸಗಳು ನಡೆಯುತ್ತಿವೆ. ಇನ್ನು ಕೆಲವೇ ಸಮಯದಲ್ಲಿ ಜನರ ಬಳಕೆಗೆ ಲಭ್ಯವಾಗಲಿದೆ.
 - ವೇದವ್ಯಾಸ್‌ ಕಾಮತ್‌, ಶಾಸಕರು

ಯೋಜನೆ ರೂಪಿಸಲಾಗುತ್ತಿದೆ
ಜನಸಾಮಾನ್ಯರಿಗೆ ತಮ್ಮ ಸಮಸ್ಯೆಗಳನ್ನು ಹೇಳಲು ನೆರವಾಗುವ ದೃಷ್ಟಿಯಿಂದ ಹೊಸ ಎರಡು ಆ್ಯಪ್‌ಗ್ಳನ್ನು ಪರಿಚಯಿಸಲು ಪಾಲಿಕೆ ಮುಂದಾಗಿದೆ. ಇದಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಲಾಗುತ್ತಿದೆ. ಇನ್ನೊಂದು ವಾರದಲ್ಲಿ ಇದರ ನಿಖರ ಚಿತ್ರಣ ಲಭಿಸಲಿದೆ.
 - ಸಂತೋಷ್‌, ಉಪ ಆಯುಕ್ತರು(ಆಡಳಿತ)

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.